ಉಡುಪಿ: ಸೆ.16ರಂದು ಮನೆಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ

ಉಡುಪಿ, ಸೆ.15:ಪೌರ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಉಡುಪಿ ನಗರಸಭೆಯು ಸೆಪ್ಟಂಬರ್ 16ರಂದು ಎಲ್ಲಾ ಪೌರ ಕಾರ್ಮಿಕರಿಗೆ ಕ್ರೀಡಾಕೂಟವನ್ನು ಆಯೋಜಿಸಿದ್ದು, ಆದ್ದರಿಂದ ಬುಧವಾರ ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
Next Story




