ಹಳೆಯ ವಾಹನಗಳಿಗೆ ಸುರಕ್ಷಿತ ನೋಂದಣಿ ಫಲಕ ಅಳವಡಿಕೆ: ಫೆ.17ರವರೆಗೆ ಅವಧಿ ವಿಸ್ತರಣೆ

ಉಡುಪಿ, ನ.27: ರಾಜ್ಯ ಸರಕಾರದ ಅಧಿಸೂಚನೆಯಂತೆ ರಾಜ್ಯದಲ್ಲಿ 2019ರ ಎ.1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಎಲ್ಲಾ ಹಳೆಯ (ಹಳೆಯ/ಅಸ್ತಿತ್ವದಲಿರುವ ವಾಹನಗಳು) ದ್ವಿ-ಚಕ್ರ ಮತ್ತು ತ್ರಿ-ಚಕ್ರ ವಾಹನಗಳು, ಲಘು ಮೋಟಾರು ವಾಹನ ಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಬಾರೀ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ ವಾಹನ ಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್‌ಎಸ್‌ಆರ್‌ಪಿ) ಅಳವಡಿಸುವ ಅವಧಿಯನ್ನು 2024ರ ಫೆಬ್ರವರಿ 17 ರವರೆಗೆ ವಿಸ್ತರಿಸಲಾಗಿದೆ.
ಸಾರ್ವಜನಿಕರು ಆನ್‌ಲೈನ್ ಮೂಲಕ ಹೆಚ್.ಎಸ್.ಆರ್.ಪಿ ಪಡೆಯಲು ತೊಂದರೆಗಳಾದಲ್ಲಿ ಸಹಾಯವಾಣಿ ಸಂಖ್ಯೆ: 9449863429 ಹಾಗೂ 9449863426 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಸಾರಿಗೆ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
Next Story





