Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ...

ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ; ಅ.17ರಂದು ಬ್ರಹ್ಮಾವರದಲ್ಲಿ ಹಕ್ಕೊತ್ತಾಯ ಸಭೆ

ವಾರ್ತಾಭಾರತಿವಾರ್ತಾಭಾರತಿ16 Oct 2026 9:36 PM IST
share
ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ; ಅ.17ರಂದು ಬ್ರಹ್ಮಾವರದಲ್ಲಿ ಹಕ್ಕೊತ್ತಾಯ ಸಭೆ

ಉಡುಪಿ, ಅ.16: ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ಹೈಕೋರ್ಟ್ ಪೀಠವನ್ನು ಉಡುಪಿ ಯಲ್ಲಿ ಸ್ಥಾಪಿಸುವಂತೆ ಆಗ್ರಹಿಸಿ, ಉಡುಪಿ ಜಿಲ್ಲೆ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ವತಿಯಿಂದ ಅ.17ರಂದು ಬೆಳಿಗ್ಗೆ 10:30ಕ್ಕೆ ಬ್ರಹ್ಮಾವರದ ಬಂಟರ ಭವನದಲ್ಲಿ ತಾಲೂಕು ಮಟ್ಟದ ಹಕ್ಕೊತ್ತಾಯ ಸಭೆ ನಡೆಯಲಿದೆ ಎಂದು ಸಮಿತಿಯ ಸಂಚಾಲಕ, ವಕೀಲ ಪ್ರೇಮ್‌ಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.

ಉಡುಪಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯ ಬೇಡಿಕೆಯನ್ನು ಪರಿಶೀಲಿಸಲು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸೆ.29ರಂದು ತ್ರಿಸದಸ್ಯ ನ್ಯಾಯಮೂರ್ತಿಗಳ ಸಮಿತಿ ರಚಿಸಿರುವುದನ್ನು ಸ್ವಾಗತಿಸಿದರು. ನ್ಯಾಯಮೂರ್ತಿಗಳಾದ ಅನು ಶಿವರಾಮನ್, ಎಸ್.ಜಿ. ಪಂಡಿತ್ ಹಾಗೂ ಮೊಹಮ್ಮದ್ ನವಾಜ್ ಅವರನ್ನು ಒಳಗೊಂಡ ಸಮಿತಿಯು ಬೇಡಿಕೆಯನ್ನು ಪರಿಶೀಲಿಸುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದರು.

ಉಡುಪಿ ಜಿಲ್ಲೆಯು ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ನಡುವಿನ ಕೇಂದ್ರ ಸ್ಥಾನದಲ್ಲಿದ್ದು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕೆಲ ತಾಲೂಕುಗಳಿಗೂ ಸಮೀಪದಲ್ಲಿದೆ. ಹೀಗಾಗಿ, ಕರಾವಳಿ ಭಾಗಕ್ಕೆ ಉದ್ದೇಶಿತ ಸಂಚಾರಿ ಅಥವಾ ಶಾಶ್ವತ ಹೈಕೋರ್ಟ್ ಪೀಠವನ್ನು ಉಡುಪಿಯಲ್ಲೇ ಸ್ಥಾಪಿಸಬೇಕು ಎಂಬುದು ಸಮಿತಿಯ ಆಗ್ರಹವಾಗಿದೆ ಎಂದವರು ಹೇಳಿದರು.

ಕರಾವಳಿ ಭಾಗದ ಸಾವಿರಾರು ಕಕ್ಷಿದಾರರು ಪ್ರಕರಣಗಳ ವಿಚಾರಣೆಗಾಗಿ ಬೆಂಗಳೂರಿನ ಹೈಕೋರ್ಟ್‌ಗೆ ತೆರಳ ಬೇಕಾಗಿದೆ. ಉಡುಪಿಯಲ್ಲಿ ಪೀಠ ಸ್ಥಾಪನೆಯಾದರೆ ದೂರದ ಪ್ರಯಾಣದ ಅನಿವಾರ್ಯತೆ ಕಡಿಮೆಯಾ ಗಲಿದ್ದು, ಸಾರ್ವಜನಿಕರ ಸಮಯ, ಶ್ರಮ ಹಾಗೂ ಹಣಕಾಸಿನ ವೆಚ್ಚ ಉಳಿತಾಯವಾಗಲಿದೆ. ಪ್ರಾದೇಶಿಕ ಮಟ್ಟದಲ್ಲಿ ನ್ಯಾಯದಾನ ವ್ಯವಸ್ಥೆ ಲಭ್ಯವಾಗುವುದರಿಂದ ಜನರಿಗೆ ನ್ಯಾಯ ಇನ್ನಷ್ಟು ಸುಲಭವಾಗಿ ದೊರೆಯಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಹೈಕೋರ್ಟ್ ಪೀಠ ಸ್ಥಾಪನೆಯ ಬೇಡಿಕೆಗೆ ಸಾರ್ವಜನಿಕ ಬೆಂಬಲ ಕ್ರೋಡೀಕರಿಸುವುದು ಹಾಗೂ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸುವ ಉದ್ದೇಶದಿಂದ ಸಭೆಯನ್ನು ಆಯೋಜಿಸಲಾಗಿದೆ. ಜಿಲ್ಲೆಯ ವಕೀಲರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾಮಾಜಿಕ ಮತ್ತು ರಾಜಕೀಯ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಂಬಲ ನೀಡಬೇಕು ಎಂದು ಅವರು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್‌ನ ಮಾಜಿ ಅಧ್ಯಕ್ಷ ಬಿ. ಭುಜಂಗ ಶೆಟ್ಟಿ, ಬ್ರಹ್ಮಾವರ ವಕೀಲರ ಸಂಘದ ಅಧ್ಯಕ್ಷ ಕಾಡೂರು ಪ್ರವೀಣ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತರಾದ ಶೇಖರ್ ಹಾವಂಜೆ, ಆಲ್ವಿನ್ ಅಂದ್ರಾದೆ, ಮಹೇಶ್ ತಡೆಕಲ್ಲು, ರವಿರಂಜನ್ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X