Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೊಡವೂರು: ಮೇ18ಕ್ಕೆ ಮಹಾರುದ್ರಯಾಗದಲ್ಲಿ...

ಕೊಡವೂರು: ಮೇ18ಕ್ಕೆ ಮಹಾರುದ್ರಯಾಗದಲ್ಲಿ ಬೃಹತ್ ಉದ್ಯೋಗ ಮೇಳ

ವಾರ್ತಾಭಾರತಿವಾರ್ತಾಭಾರತಿ13 May 2026 8:40 PM IST
share
ಕೊಡವೂರು: ಮೇ18ಕ್ಕೆ ಮಹಾರುದ್ರಯಾಗದಲ್ಲಿ ಬೃಹತ್ ಉದ್ಯೋಗ ಮೇಳ

ಉಡುಪಿ, ಮೇ 13: ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನ ದಲ್ಲಿ ಪ್ರಸಾದ್‌ರಾಜ್ ಕಾಂಚನ್ ನೇತೃತ್ವ ದಲ್ಲಿ ನಡೆಯಲಿರುವ ಮಹಾ ರುದ್ರಯಾಗದ ಪ್ರಯುಕ್ತ ಮೇ18ರಂದು ಕೊಡವೂರಿನ ವಿಪ್ರಶ್ರೀ ಸಭಾಭವನ ದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಉದ್ಯೋಗ ಮೇಳವನ್ನು ಸಂಯೋಜಿಸಲಿರುವ ಸಾರಲತಾ ಐಟಿ ಸೊಲ್ಯೂಷನ್ಸ್‌ನ ಹಾಗೂ ಉದ್ಯೋಗ ಮೇಳದ ಮುಖ್ಯಸ್ಥೆ ಡಾ.ದಿವ್ಯಾ ರಾಣಿ ತಿಳಿಸಿದ್ದಾರೆ.

ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು ಯುವಜನತೆಗೆ ಉದ್ಯೋಗ, ಇಂಟರ್ನ್‌ಶಿಪ್ ಹಾಗೂ ವೃತ್ತಿ ಮಾರ್ಗದರ್ಶನವನ್ನು ನೀಡುವ ಉದ್ದೇಶದಿಂದ ಈ ಉದ್ಯೋಗ ಮೇಳವನ್ನು ಹಮ್ಮಿ ಕೊಳ್ಳಲಾಗಿದೆ. ಇದನ್ನು ಸಾರಲತಾ ಐಟಿ ಸೊಲ್ಯೂಷನ್ಸ್ ಮತ್ತು ಸರಳಾ ಬಾಬುರಾವ್ ಚಾರಿಟೇಬಲ್ ಟ್ರಸ್ಟ್ ವತಿ ಯಿಂದ ಶ್ರೀಶಂಕರನಾರಾಯಣ ದೇವಸ್ಥಾನ ಹಾಗೂ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಲಾಗಿದೆ ಎಂದರು.

ಈ ಮೇಳದಲ್ಲಿ 70ಕ್ಕೂ ಅಧಿಕ ದೇಶದ ಪ್ರತಿಷ್ಠಿತ ಕಂಪೆನಿಗಳು ಭಾಗವಹಿಸಲಿದ್ದು, 9000ಕ್ಕೂ ಅಧಿಕ ಉದ್ಯೋಗಾ ವಕಾಶಗಳು ಲಭ್ಯವಿರಲಿವೆ. ಈಗಾಗಲೇ 1,600ಕ್ಕೂ ಅಧಿಕ ಮಂದಿ ಮೇಳಕ್ಕೆ ಹೆಸರು ನೊಂದಾಯಿಸಿ ಕೊಂಡಿ ದ್ದಾರೆ. 2000ಕ್ಕ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆಯನ್ನು ಹೊಂದಿದ್ದೇವೆ. ಉದ್ಯೋಗ ಮೇಳ ಬೆಳಗ್ಗೆ 9:00ರಿಂದ ಸಂಜೆ 4:00ರವರೆಗೆ ನಡೆಯಲಿದೆ ಎಂದರು.

ಮ್ಯಾನೇಜ್ಮೆಂಟ್, ಇಂಜಿನಿಯರಿಂಗ್, ಉತ್ಪಾದನಾ ವಲಯ, ಆರೋಗ್ಯ ಸೇವೆ, ಹೋಟೆಲ್, ಬ್ಯಾಂಕಿಂಗ್ ಮತ್ತು ಹಣಕಾಸು, ಮಾರಾಟ ಮತ್ತು ಮಾರುಕಟ್ಟೆ, ತಾಂತ್ರಿಕ ಸೇವೆಗಳು, ಲಾಜಿಸ್ಟಿಕ್ಸ್ ಹಾಗೂ ಸೇವಾ ವಲಯ, ಕೌಶಲ್ಯ ವಿವಿಧ ಕ್ಷೇತ್ರಗಳ 70ಕ್ಕೂ ಅಧಿಕ ಪ್ರತಿಷ್ಠಿತ ಕಂಪೆನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ ಎಂದರು.

ಟೊಯೋಟಾ-ಕಿರ್ಲೋಸ್ಕರ್, ಇನ್ವೆಂಜರ್ ಟೆಕ್ನಾಲಜೀಸ್, ಮೆಜೆಸ್ಟಿಕ್ ಗ್ಲೋಬಲ್ ಲಾಜಿಸ್ಟಿಕ್ಸ್, ಅನಾನ್ ಗ್ರೂಪ್, ವಿನ್‌ಮ್ಯಾನ್ ಸಾಫ್ಟ್‌ವೇರ್, ಅಮೆಜಾನ್, ಬ್ರೇವರಾ ಟೆಕ್ನಾಲಜೀಸ್, ವಿಆರ್‌ಎನ್ ಇನ್ಫೋಟೆಕ್, ಡಾ. ರೆಡ್ಡೀಸ್ ಫೌಂಡೇಶನ್, ಸ್ವಿಗ್ಗಿ, ಎಚ್‌ಡಿಎಫ್‌ಸಿ ಬ್ಯಾಂಕ್, ಮಣಿಪಾಲ್ ಪೇಮೆಂಟ್ ಅಂಡ್ ಐಡೆಂಟಿಟಿ ಮತ್ತು ಅಕೋಲೇಡ್ ಸೇರಿದಂತೆ ಅನೇಕ ಪ್ರಮುಖ ಕಂಪನಿಗಳು ಪಾಲ್ಗೊಳ್ಳಲಿವೆ.

ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್, ಐಟಿಐ, ಪಿಯುಸಿ, ಎಸೆಸೆಲ್ಸಿ ಅಲ್ಲದೇ ವಿವಿಧ ಕೌಶಲ್ಯ ಆಧಾರಿತ ಅರ್ಹತೆ ಹೊಂದಿದ ಅಭ್ಯರ್ಥಿಗಳಿಗೆ 6,000 ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಾಗಲಿವೆ. ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸುವುದು, ಕಂಪನಿ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸುವುದು ಹಾಗೂ ಬೆಂಗಳೂರು, ಮೈಸೂರು, ಮಂಗಳೂರು ಮತ್ತು ಉಡುಪಿಯಲ್ಲಿ ಉದ್ಯೋಗ ಅವಕಾಶಗಳನ್ನು ಅರಿಯುವ ಅವಕಾಶ ಸಿಗಲಿದೆ ಎಂದು ಡಾ.ದಿವ್ಯಾ ರಾಣಿ ತಿಳಿಸಿದರು.

ಈ ಬಾರಿ ವಿಶೇಷವಾಗಿ ಸ್ಟಾರ್ಟ್‌ಅಪ್ ಹಾಗೂ ಸ್ವಯಂ ಉದ್ಯೋಗ ಮಾರ್ಗದರ್ಶನ ಕಾರ್ಯಕ್ರಮಗಳನ್ನು ಮೊದಲ ಬಾರಿಗೆ ಉಡುಪಿಯಲ್ಲಿ ಪರಿಚಯಿಸಲಾಗುತ್ತಿದೆ. ಮಣಿಪಾಲ್ ಯುನಿವರ್ಸಲ್ ಬಿಸಿನೆಸ್ ಇನ್‌ಕ್ಯೂಬೇಟರ್ಸ್‌, ಯೆನೆಪೊಯ ಟೆಕ್ನಾಲಜಿ ಇನ್‌ಕ್ಯೂಬೇಟರ್ಸ್‌ ಮತ್ತು ರುಡೈಟಿ ಸಂಸ್ಥೆಗಳು ಉದ್ಯಮ ಆರಂಭಿಸಲು ಬಯಸುವ ಯುವಕರಿಗೆ ಮಾರ್ಗದರ್ಶನ ಹಾಗೂ ಮೆಂಟರ್‌ಶಿಪ್ ನೀಡಲಿವೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಉದ್ಯೋಗ ಮೇಳದ ಕಾರ್ಯದರ್ಶಿ ರೇವತಿ ನಾಡಿಗೇರ್, ಸಾತ್ವಿಕ್ ಎಸ್ ಆಚಾರ್ಯ, ಧೃವ್‌ರಾಜ್ ಉಪಸ್ಥಿತರಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X