Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಲ್ಲಿ 180 ಹೊಸ...

ಉಡುಪಿ ಜಿಲ್ಲೆಯಲ್ಲಿ 180 ಹೊಸ ಬಿಎಸ್ಸೆಎನ್‌ಎನ್ ಟವರ್‌ಗೆ ಬೇಡಿಕೆ: ಕೋಟ ಶ್ರೀನಿವಾಸ ಪೂಜಾರಿ

ವಾರ್ತಾಭಾರತಿವಾರ್ತಾಭಾರತಿ5 March 2025 9:17 PM IST
share
ಉಡುಪಿ ಜಿಲ್ಲೆಯಲ್ಲಿ 180 ಹೊಸ ಬಿಎಸ್ಸೆಎನ್‌ಎನ್ ಟವರ್‌ಗೆ ಬೇಡಿಕೆ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಮಾ.5: ಜಿಲ್ಲೆಯಲ್ಲಿ ಸದ್ಯ 196 ಬಿಎಸ್ಸೆಎನ್‌ಎಲ್ ಟವರ್‌ಗಳು ಕಾರ್ಯ ನಿರ್ವಹಿಸುತ್ತಿದ್ದು, 41ಟವರ್‌ಗಳಿಗೆ 4ಜಿ ಸಂಪರ್ಕ ನೀಡಲಾಗಿದೆ. 180 ಹೊಸ ಟವರ್‌ಗಳ ನಿರ್ಮಾಣಕ್ಕೆ ಈಗಾಗಲೇ ಬೇಡಿಕೆ ಇದ್ದು, 30ಕ್ಕೆ ಅನುಮೋದನೆ ಸಿಕ್ಕಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನೆಟ್ವರ್ಕ್ ಹಾಗೂ ಟವರ್ ಸಮಸ್ಯೆಗಳ ಕುರಿತಂತೆ ಬಿಎಸ್ಸೆಎನ್‌ಎಲ್ ಅಧಿಕಾರಿ ಗಳೊಂದಿಗೆ ಚರ್ಚಿಸಲು ಕರೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಮಂಜೂರಾದ ಟವರ್‌ಗಳ ನಿರ್ಮಾಣವನ್ನು ತ್ವರಿತವಾಗಿ ಮಾಡಬೇಕು ಎಂದ ಅವರು, ಹಾಲಿ ಚಾಲ್ತಿಯಲ್ಲಿರುವ 196 ಟವರ್‌ಗಳ ಪೈಕಿ 75 ಟವರ್‌ಗಳಲ್ಲಿ ಬ್ಯಾಟರಿ ಸಮಸ್ಯೆಗಳಿವೆ. ಇವುಗಳಿಗೆ ಬ್ಯಾಟರಿಗಳ ಅಳವಡಿಕೆ ಯನ್ನು ಆದ್ಯತೆಯ ಮೇಲೆ ಮಾಡಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶ ವ್ಯಾಪ್ತಿಗಳಲ್ಲಿರುವ ಬಿಎಸ್ಸೆಎನ್‌ಎನ್ ಟವರ್‌ಗಳ ನಿರ್ವಹಣೆಯನ್ನು ವ್ಯವಸ್ಥಿ ತವಾಗಿ ಮಾಡಿ ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ಸೇವೆ ನೀಡಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದರು.

ಗ್ರಾಮೀಣ ಭಾಗಗಳಲ್ಲಿ ಟವರ್‌ಗಳ ಸೇವೆ ಲಭ್ಯತೆ ಇದ್ದರೂ ಪೂರ್ಣ ಪ್ರಮಾಣದಲ್ಲಿ ಅವುಗಳ ಬಳಕೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲವೆಂದು ಸಾರ್ವಜನಿಕ ದೂರುಗಳು ಕೇಳಿ ಬರುತ್ತಿವೆ. ಗ್ರಾಮೀಣ ಭಾಗದಲ್ಲಿರುವ ಬಿಎಸ್ಸ್‌ಎನ್‌ಎಲ್ ಟವರ್‌ಗಳ ನಿರ್ವಹಣೆಯನ್ನು ವ್ಯವಸ್ಥಿತವಾಗಿ ಮಾಡುವು ದರೊಂದಿಗೆ ಈಗಿರುವ ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ ಎಂದು ಅಧಿಕಾರಿ ಗಳಿಗೆ ತಿಳಿಸಿದರು.

ನೆಟ್ವರ್ಕ್ ಟವರ್ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಇರುವ ಎಲ್ಲ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕು. ನೆಟ್‌ವರ್ಕ್ ಸಮಸ್ಯೆ ಕುರಿತು ಜನರು ಕರೆ ಮಾಡಿದಾಗ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸ ಬೇಕು. ಸಂಪರ್ಕವನ್ನು ಜಿಲ್ಲೆಯ ನಗರ ಸೇರಿದಂತೆ ಗ್ರಾಮೀಣ ಭಾಗದ ಎಲ್ಲಾ ಕಡೆಯಲ್ಲಿಯೂ ಕಲ್ಪಿಸಲು ಅಧಿಕಾರಿಗಳು ಸಹಕಾರ ನೀಡಿ ಮುಂಬರುವ ದಿನಗಳಲ್ಲಿ ನೆಟ್ವರ್ಕ್ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಮಾತನಾಡಿ, ಹೊಸದಾಗಿ ನೆಟ್ವರ್ಕ್ ಟವರ್‌ಗಳನ್ನು ಸ್ಥಾಪಿಸಲು ಸರ್ವೇ ನಡೆಸುವ ಸಂದರ್ಭದಲ್ಲಿ ಶಾಲೆ, ಕಾಲೇಜು, ಶಿಕ್ಷಣ ಸಂಸ್ಥೆಗಳು ಇರುವ ಪ್ರದೇಶಗಳಲ್ಲಿ ಸುರಕ್ಷಿತೆಯನ್ನು ಗುರುತಿಸಿ, ಅವರ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಟವರ್ ಸ್ಥಾಪನೆಗೆ ಮುಂದಾಗಬೇಕು ಎಂದರು.

4ಜಿ ಅಪ್ ಗ್ರೆಡೇಷನ್ ಪ್ರಗತಿ ಹಾಗೂ ಗ್ರಾಮೀಣ ಭಾಗಗಳಲ್ಲಿ ನೆಟ್ವರ್ಕ್ ಸಮಸ್ಯೆಯ ನಿವಾರಣೆಗೆ ಇರುವ ಸವಾಲುಗಳು ಹಾಗೂ ಸಾಧ್ಯತೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಡಿಎಫ್‌ಓ ಗಣಪತಿ, ಬಿಎಸ್‌ಎನ್‌ಎಲ್ ಅಧಿಕಾರಿಗಳಾದ ನವೀನ್ ಕುಮಾರ್ ಗುಪ್ತಾ, ಜನಾರ್ದನ್, ಮಾಯಾ ದೇವಿ, ಗಪೂರ್, ಬಿಂದು ಪ್ರಕಾಶ್, ಕೃಷ್ಣ ನಾಯ್ಕ್, ಸಮಿತಿಯ ನಾಮ ನಿರ್ದೇಶಿತ ಸದಸ್ಯರು ಉಪಸ್ಥಿತರಿದ್ದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X