Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಳೆನೀರು ಕೊಯ್ಲು: ಮಾ.2ಕ್ಕೆ ಜಿಲ್ಲಾ...

ಮಳೆನೀರು ಕೊಯ್ಲು: ಮಾ.2ಕ್ಕೆ ಜಿಲ್ಲಾ ಮಟ್ಟದ ಕಾರ್ಯಾಗಾರ: ಉಡುಪಿ ಡಿಸಿ ವಿದ್ಯಾಕುಮಾರಿ

ವಾರ್ತಾಭಾರತಿವಾರ್ತಾಭಾರತಿ18 Feb 2024 6:24 PM IST
share
ಮಳೆನೀರು ಕೊಯ್ಲು: ಮಾ.2ಕ್ಕೆ ಜಿಲ್ಲಾ ಮಟ್ಟದ ಕಾರ್ಯಾಗಾರ: ಉಡುಪಿ ಡಿಸಿ ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದಾಗಿ ಅಂತರ್ಜಲ ಮಟ್ಟ ಕುಸಿಯುತಿದ್ದು, ಇದರಿಂದ ಕೃಷಿಗೆ ಹಾಗೂ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಅರಿವು ಮೂಡಿಸುವ ಸಲುವಾಗಿ ಮಳೆ ನೀರಿನ ಕೊಯ್ಲು ಕುರಿತು ಜಾಗೃತಿ ಮೂಡಿಸುವ ಜಿಲ್ಲಾ ಮಟ್ಟದ ಕಾರ್ಯಗಾರವನ್ನು ಮಾರ್ಚ್ 2ರಂದು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಳೆ ನೀರು ಕೊಯ್ಲು ಕಾರ್ಯಾಗಾರದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಶನಿವಾರ ಅವರು ಮಾತನಾಡುತ್ತಿದ್ದರು.

ಮಳೆ ನೀರು ಕೊಯ್ಲು ಸಂಬಂಧ ಸಾರ್ವಜನಿಕರಲ್ಲಿ ಹಾಗೂ ರೈತರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಾರ್ಚ್ 2ರಂದು ಜಿಲ್ಲಾಧಿಕಾರಿ ಕಚೇರಿಯ ಅಟಲ್‌ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕಾರ್ಯಗಾರ ನಡೆಯಲಿದ್ದು, ಕಾರ್ಯಾಗಾರದಲ್ಲಿ ಸಿವಿಲ್ ಇಂಜಿನಿಯರ್ ಅಸೋಸಿ ಯೇಶನ್, ಗುತ್ತಿಗೆ ನಿರ್ಮಾಣ ಸಂಸ್ಥೆಗಳು, ನಗರ ಸ್ಥಳೀಯ ಸಂಸ್ಥೆಯ ಪ್ರತಿನಿಧಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು, ಆಸಕ್ತ ಸಾರ್ವಜನಿಕರು ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದವರು ನುಡಿದರು.

ಜಿಲ್ಲೆಯಲ್ಲಿ ದಿನೇದಿನೇ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಇದಕ್ಕೆ ಪರ್ಯಾಯವಾಗಿ ಮಳೆ ನೀರಿನ ಕೊಯ್ಲು ಪದ್ಧತಿ ಅನುಸರಿಸುವುದರಿಂದ ನದಿಯ ನೀರಿನ ಮಟ್ಟ ಹೆಚ್ಚುವುದರೊಂದಿಗೆ ಕೆರೆ, ನದಿಗಳಲ್ಲಿ ನೀರು ಶೇಖರಣೆಯಾಗುತ್ತದೆ. ನಗರಸಭೆ ವ್ಯಾಪ್ತಿಯಲ್ಲಿ ಮನೆ ನಿರ್ಮಾಣದ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳು ಕಟ್ಟಡ ಪರವಾನಿಗೆ ನೀಡುವಾಗ ಕಡ್ಡಾಯವಾಗಿ ಮಳೆ ನೀರಿನ ಕೊಯ್ಲು ಅಳವಡಿಸಲು ಸೂಚನೆ ನೀಡಬೇಕು ಎಂದರು.

ಮಳೆ ನೀರು ಕೊಯ್ಲು ಪದ್ಧತಿಯನ್ನು ಗ್ರಾಮೀಣ ಹಾಗೂ ನಗರ ಪ್ರದೇಶ ಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡ ಬೇಕು ಎಂದ ಅವರು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ತಾಲೂಕು ಹಾಗೂ ಗ್ರಾಮ ಮಟ್ಟಗಳಲ್ಲಿ ಕಾರ್ಯ ಗಾರವನ್ನು ಏರ್ಪಡಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ನೀರನ್ನು ಆದಷ್ಟು ಮಿತವಾಗಿ ಬಳಸಬೇಕು. ರೈತರುಗಳು ಜಮೀನುಗಳಲ್ಲಿ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಂಡು ನೀರಿನ ಸಂರಕ್ಷಣೆಗೆ ಮುಂದಾಗಬೇಕು ಎಂದ ಜಿಲ್ಲಾಧಿಕಾರಿಗಳು, ಕಾರ್ಯಾಗಾರದ ಸಂದರ್ಭದಲ್ಲಿ ಇಲಾಖೆಗಳ ಯೋಜನೆ ಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿ ಅವರನ್ನು ಯೋಜನೆಯ ಫಲಾನುಭವಿಗಳನ್ನಾಗಿ ಮಾಡಬೇಕು ಎಂದರು.

ಮಳೆ ನೀರು ಕೊಯ್ಲು ತಜ್ಞ ಜೋಸೆಫ್ ರೆಬೆಲ್ಲೋ ಕಾರ್ಯಗಾರ ಏರ್ಪಡಿಸುವ ಕುರಿತು ಅಗತ್ಯ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್, ಕೃಷಿ ಇಲಾಖೆ ಅಧಿಕಾರಿ ಚಂದ್ರಶೇಖರ್, ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಪುರಸಭೆ ಮುಖ್ಯಾಧಿಕಾರಿಗಳು ಮತ್ತಿತರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X