ಎಸೆಸೆಲ್ಸಿ ಪರೀಕ್ಷೆ-2: ನಿಷೇಧಾಜ್ಞೆ ಜಾರಿ
ಉಡುಪಿ, ಜೂ.13: 2024ರ ಸಾಲಿನ ಎಸೆಸೆಲ್ಸಿ ಪರೀಕ್ಷೆ-2 ಜಿಲ್ಲೆಯ ಒಟ್ಟು 5 ಪರೀಕ್ಷಾ ಕೇಂದ್ರಗಳಲ್ಲಿ ಜೂನ್ 14ರಿಂದ 22ರವರೆಗೆ ನಡೆಯಲಿದ್ದು, ಪರೀಕ್ಷೆಗಳನ್ನು ಶಾಂತಿಯುತವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 1973ರ ಕ್ರಿಮಿನಲ್ ಪ್ರೊಸೀಜರ್ ಕೋಡ್ನ ಸೆಕ್ಷನ್ 144(1)ರಂತೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
Next Story