ಕಾಂಗ್ರೆಸ್ ಬಿಎಲ್‌ಎ-2ಗಳ ಸಭೆ: ಕರ್ತವ್ಯದ ಬಗ್ಗೆ ಮಾಹಿತಿ

ಉಡುಪಿ, ಆ.23: ಉಡುಪಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಬಿಎಲ್‌ಎ-2 ಗಳ ಸಭೆ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಜರಗಿತು.
ಸಭೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಎ.ಸಿ.ವಿನಯರಾಜ್, ಬಿ.ಎಲ್.ಎ-2ಗಳಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ಪ್ರಥಮ ಹಂತದ ಅಂಕಿ ಅಂಶಗಳನ್ನು ಪಡೆದು ಮುಂದಿನ ಹಂತದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬಿ.ಎಲ್.ಎ-2ಗಳ ಕರ್ತವ್ಯದ ಬಗ್ಗೆ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಮಾತನಾಡಿ, ಯುವಕರನ್ನು ಸಂಘಟನೆಯ ಮೂಲಕ ಸದೃಢಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿ ರುವ ಭಾರತ್ ಜೋಡೋ ಯುವಕರ ಸಂಘಟನೆಯ ನೋಂದಣಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು ಎಲ್ಲಾ ಬೂತ್‌ನ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು 16ರಿಂದ 35ರ ವಯೋಮಿತಿಯ ಯುವಕ ಯುವತಿಯ ರನ್ನು ನೋಂದಾಯಿಸಲು ಮುತುವರ್ಜಿ ವಹಿಸಬೇಕೆಂದು ಕರೆ ನೀಡಿದರು.
ಸಭೆಯಲ್ಲಿ ಪಕ್ಷದ ನಾಯಕರಾದ ಸುರೇಶ್ ಶೆಟ್ಟಿ ಬನ್ನಂಜೆ, ಗಣೇಶ್ ನೆರ್ಗಿ, ಸಜ್ಜನ್ ಶೆಟ್ಟಿ, ಸೂರಜ್ ಕರ್ಕೇರ, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಬಿ.ಎಲ್.ಎ-2ಗಳು ಉಪಸ್ಥಿತರಿದ್ದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್ ಮಂಚಿ ಕಾರ್ಯಕ್ರಮ ನಿರೂಪಿಸಿದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಸತೀಶ್ ಕೊಡವೂರು ವಂದಿಸಿದರು.






