ಉಡುಪಿ ಕ್ಷೇತ್ರದ ವಿದ್ಯಾರ್ಥಿಗಳಿಗೆ 20 ಸಾವಿರ ಪೆನ್ ವಿತರಣೆ

ಉಡುಪಿ, ನ. 14: ಉಡುಪಿ ಜಿಲ್ಲೆ ರಾಜ್ಯದ ಪ್ರಥಮ ಸಂಪೂರ್ಣ ಸಾಕ್ಷರತಾ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಈ ಗೌರವಕ್ಕೆ ಜಿಲ್ಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಕೊಡುಗೆ ಅಪಾರವಾಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದ್ದಾರೆ.
ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಸರಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ 15 ಲಕ್ಷ ರೂ. ವೆಚ್ಚದಲ್ಲಿ ಸುಮಾರು 20 ಸಾವಿರ ಪೆನ್ ವಿತರಣೆ ಕಾರ್ಯಕ್ರಮಕ್ಕೆ ಕಡೆಕಾರು ಸರಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಚಾಲನೆ ನೀಡಿ ಅವರು ಮಾತನಾಡುತಿದ್ದರು.
ಉಡುಪಿ ಕ್ಷೇತ್ರದ ವಿವಿಧ ಶಾಲೆ ಹಾಗೂ ಕಾಲೇಜುಗಳಿಗೆ ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು, ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ತೆರಳಿ ವಿದ್ಯಾರ್ಥಿಗಳಿಗೆ ಪೆನ್ ವಿತರಣೆ ಮಾಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ರಘುನಾಥ ಕೋಟ್ಯಾನ್, ಗಂಗಾಧರ ಜಿ., ಪ್ರದೀಪ್ ಚಂದ್ರ ಕುತ್ಪಾಡಿ, ಸುನೀಲ್ ಸಾಲ್ಯಾನ್, ಶೇಖರ್ ಅಂಚನ್, ದೀಪಕ್ ಪುತ್ರನ್, ಜಯಕರ ಸನಿಲ್, ನಂದ ಕುರ್ಮಾ, ವನಜ ಜಯರ್ಕ, ವಿನೋದಿನಿ, ಅರುಣ್ ಕಡೆಕಾರ್, ಅಶೋಕ್ ಪಾಲನ್, ಶಾಲೆಯ ಮುಖ್ಯ ಶಿಕ್ಷಕಿ ವನಜಾಕ್ಷಿ ಮೊದಲಾದವರು ಉಪಸ್ಥಿತರಿದ್ದರು.






