Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹಿರಿಯ ನಾಗರಿಕರ ಪೋಷಣೆ, ರಕ್ಷಣೆಗಾಗಿಯೇ...

ಹಿರಿಯ ನಾಗರಿಕರ ಪೋಷಣೆ, ರಕ್ಷಣೆಗಾಗಿಯೇ ರಕ್ಷಣಾ ಕಾಯ್ದೆ-2007 ಜಾರಿ: ನ್ಯಾ.ಕಿರಣ್ ಸಿದ್ದಪ್ಪ ಗಂಗಣ್ಣನವರ್

ವಾರ್ತಾಭಾರತಿವಾರ್ತಾಭಾರತಿ10 Sept 2026 8:24 PM IST
share
ಹಿರಿಯ ನಾಗರಿಕರ ಪೋಷಣೆ, ರಕ್ಷಣೆಗಾಗಿಯೇ ರಕ್ಷಣಾ ಕಾಯ್ದೆ-2007 ಜಾರಿ: ನ್ಯಾ.ಕಿರಣ್ ಸಿದ್ದಪ್ಪ ಗಂಗಣ್ಣನವರ್

ಉಡುಪಿ, ಸೆ.10: ಆಧುನಿಕ ಜೀವನ ಶೈಲಿ, ತಂತ್ರಜ್ಞಾನದ ಬೆಳವಣಿಗೆ, ನಗರೀಕರಣ, ವಿಭಕ್ತ ಕುಟುಂಬ ಪದ್ಧತಿ ಸೇರಿದಂತೆ ವಿವಿಧ ಕಾರಣಗಳಿಂದ ಇತ್ತೀಚಿನ ದಿನಗಳಲ್ಲಿ ಹಿರಿಯ ನಾಗರಿಕರು ತೀವ್ರ ಸಂಕಷ್ಟಕ್ಕೆ ಗುರಿಯಾಗುತಿ ದ್ದಾರೆ. ಅವರಿಗೆ ಪೋಷಣೆ ಮತ್ತು ರಕ್ಷಣೆ ಅತ್ಯವಶ್ಯಕವಾಗಿ ಬೇಕಾಗಿದೆ. ಇಂತಹ ಹಿರಿಯ ನಾಗರಿಕರ ರಕ್ಷಣೆಗಾಗಿಯೇ ‘ಪಾಲಕರ ಪೋಷಕರ ಸಂರಕ್ಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣಾ ಕಾಯ್ದೆ-2007’ನ್ನು ಜಾರಿಗೆ ತರಲಾಗಿದೆ ಎಂದು ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಸಿದ್ದಪ್ಪ ಗಂಗಣ್ಣನವರ್ ಹೇಳಿದ್ದಾರೆ.

ಮಣಿಪಾಲ ರಜತಾದ್ರಿಯಲ್ಲಿರುವ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಹಿರಿಯ ನಾಗರಿಕರ ಸ್ವಯಂ ಸೇವಾ ಸಂಸ್ಥೆಗಳು ಉಡುಪಿ ಜಿಲ್ಲೆ ಇವರ ಸಹಯೋಗ ದೊಂದಿಗೆ ತಂದೆ- ತಾಯಿಯರ ಮತ್ತು ಹಿರಿಯ ನಾಗರಿಕರ ಪಾಲನೆ -ಪೋಷಣೆ ಮತ್ತು ಕಲ್ಯಾಣ ಅಧಿನಿಯಮ - 2007ರ ಕುರಿತು ಅಧಿಕಾರಿಗಳಿಗೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳಿಗೆ ಆಯೋಜಿಸಲಾದ ಒಂದು ದಿನದ ಮಾಹಿತಿ ಕಾರ್ಯಾಗಾರವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

‘ಪಾಲಕರ ಪೋಷಕರ ಸಂರಕ್ಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣಾ ಕಾಯ್ದೆ-2007’ ನಿರಾಶ್ರಿತ ಪೋಷಕರ ಹಾಗೂ ಹಿರಿಯ ನಾಗರಿಕರ ಹಿತರಕ್ಷಣೆಯನ್ನು ಕಾಪಾಡುವ ಉದ್ದೇಶವನ್ನು ಹೊಂದಿದೆ. ಹಿರಿಯ ನಾಗರಿಕರ ಹಕ್ಕುಗಳ ರಕ್ಷಣೆಗಾಗಿ ಸರಕಾರ ಜಾರಿಗೊಳಿಸಿರುವ ಕಾಯಿದೆ ಹಾಗೂ ಕಾನೂನುಗಳ ಬಗ್ಗೆ ಸಾರ್ವಜನಿಕರಿಗೆ ಅರಿವಿದ್ದಾಗ ಮಾತ್ರ ಹಿರಿಯರ ಮೇಲಾಗುವ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕಲು ಸಾಧ್ಯ ಎಂದವರು ಅಭಿಪ್ರಾಯಪಟ್ಟರು.

ಈ ಬಗ್ಗೆ ಜನರಲ್ಲಿ ಹೆಚ್ಚು ಜಾಗೃತಿ ಮೂಡಿಸುವ ಮೂಲಕ ಹಿರಿಯ ಜೀವಗಳು ತಮ್ಮ ಬದುಕಿನ ಸಂಧ್ಯಾ ಕಾಲದಲ್ಲಿ ನೆಮ್ಮದಿಯ ಜೀವನ ಜೀವಿಸಲು ಅನುವು ಮಾಡಿಕೊಡಬೇಕು. ಮನುಷ್ಯ ತನ್ನ ಜೀವನದಲ್ಲಿ ಬಾಲ್ಯ, ಯೌವ್ವನ ಹಾಗೂ ವೃದ್ಧಾಪ್ಯನಾಗುವವರೆಗೆ ಸಮಾಜದ ಅನೇಕ ಮುಖಗಳನ್ನು ನೋಡಿರುತ್ತಾನೆ. ಸಾಮಾಜಿಕ ಜೀವನ ಶೈಲಿ, ಸುಖ-ದುಃಖ, ಕಷ್ಟ -ನಷ್ಟ ಸೇರಿದಂತೆ ಬದುಕಿನ ಎಲ್ಲಾ ಹಂತಗಳನ್ನು ಸವಾಲಾಗಿ ಸ್ವೀಕರಿಸುವ ವಿವೇಕ ಹಿರಿಯ ಚೇತನರಲ್ಲಿ ಇರುತ್ತದೆ. ಕಿರಿಯರ ಮಾರ್ಗದರ್ಶಕರಾಗಿ ಹಿರಿಯ ನಾಗರಿಕರು ಗೌರವಯುತ ಜೀವನ ನಡೆಸು ವಂತಾಗಬೇಕು ಎಂದರು.

ಹಿರಿಯ ನಾಗರಿಕರ ನಿರ್ಲಕ್ಷ್ಯ ಹಾಗೂ ಅವರ ಮೇಲಾಗುವ ದೌರ್ಜನ್ಯ ತಡೆಗಟ್ಟಲು ಕಾಯಿದೆಗಳು ಸಹಕಾರಿ. ಅಧಿಕಾರಿಗಳು ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಘ ಸಂಸ್ಥೆಗಳು ಕಾರ್ಯಾ ಗಾರದ ಆಯಾಮಗಳನ್ನು ತಿಳಿದುಕೊಂಡು ತಳಮಟ್ಟದಲ್ಲಿ ಅವುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು. ಈ ಸಂದರ್ಭ ದಲ್ಲಿ ಕಾನೂನಿನ ಅರಿವು ಮೂಡಿಸುವ ಜೊತೆಗೆ ಮಾನವೀಯ ಹಾಗೂ ಸಾಮಾಜಿಕ ಮೌಲ್ಯಗಳನ್ನು ಎತ್ತಿ ಹಿಡಿಯುವುದು ಅತೀ ಮುಖ್ಯ ಎಂದು ಗಂಗಣ್ಣನವರ್ ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಮಾತನಾಡಿ, ಮಕ್ಕಳನ್ನು ಚಿಕ್ಕಂದಿ ನಿಂದ ಪ್ರೀತಿ ಕಾಳಜಿಯಿಂದ ಬೆಳೆಸಿ, ಜೀವನ ರೂಪಿಸಿಕೊಳ್ಳಲು ಸಾಕಷ್ಟು ಏರಿಳಿತಗಳನ್ನು ಅನುಭವಿಸುವ ಹಿರಿಯ ನಾಗರಿಕರ ರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು. ಯಾವುದೇ ಕಾಯ್ದೆಯನ್ನು ಅನುಷ್ಠಾನಗೊಳಿಸುವಾಗ ಕಾನೂನಿನೊಂದಿಗೆ ಆತ್ಮಸಾಕ್ಷಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸಿದಲ್ಲಿ ಹಿರಿಯ ನಾಗರಿಕರ ಬದುಕಿಗೆ ಆಸರೆಯಾಗಲಿದೆ ಎಂದ ಗದ್ಯಾಳ್, ಕಾಯ್ದೆಗಳ ಕುರಿತು ವಿಶೇಷವಾಗಿ ಮಕ್ಕಳಲ್ಲಿ ಅರಿವು ಮೂಡಿಸಬೇಕಿದೆ ಎಂದರು.

ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪ್ರೇಮಮೂರ್ತಿ ಕೆ ಪ್ರಾಸ್ತಾವಿಕವಾಗಿ ಮಾತನಾಡಿ, ಆಧುನಿಕ ಜೀವನ ಶೈಲಿಯಿಂದ ಪ್ರಸ್ತುತ ಹಿರಿಯ ನಾಗರಿಕರ ಸಂಖ್ಯೆಯೊಂದಿಗೆ ಅವರನ್ನು ನೋಡಿಕೊಳ್ಳುವ ವೃದ್ಧಾಶ್ರಮಗಳು, ಹಿರಿಯ ನಾಗರಿಕರ ಆಶ್ರಯ ಕೇಂದ್ರಗಳ ಸಂಖ್ಯೆಯೂ ಹೆಚ್ಚುತ್ತಿರುವುದು ವಿಷಾಧನೀಯ ಸಂಗತಿ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಿತಿನ್ ಯಶ್ವಂತ್ ರಾವ್ ಕಾನೂನು ಅನುಷ್ಠಾನದಲ್ಲಿ ನೈತಿಕ ಮೌಲ್ಯಗಳು ಮತ್ತು ಸಾಮಾಜಿಕ ಪರಿಣಾಮಗಳ ಕುರಿತು, ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ.ರವೀಂದ್ರನಾಥ ಶಾನುಭಾಗ್ ಅವರು ಪ್ರಕರಣ ಅಧ್ಯಯನ - ಜಿಲ್ಲೆಯಲ್ಲಿ ವರದಿಯಾದ ಪ್ರಮುಖ ಪ್ರಕರಣಗಳ ವಿಶ್ಲೇಷಣೆ ಮುಂತಾದ ವಿಷಯ ಮಂಡಿಸಿದ್ದು, ಚರ್ಚೆ ನಡೆಯಿತು. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿವೃತ್ತ ಅಧಿಕಾರಿ ಎಂ ನಿರಂಜನ್ ಭಟ್ ಅವರು ಎಂ.ಡಬ್ಲ್ಯೂಪಿ.ಎಸ್ ಆಕ್ಟ್ -2007ರ ಉದ್ದೇಶ ಹಾಗೂ ನಿರ್ವಹಣೆ, ನ್ಯಾಯ ಮಂಡಳಿಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ, ವಿವಿಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಹಿರಿಯ ನಾಗರಿಕರ ವೇದಿಕೆ ಜಿಲ್ಲಾ ಹಾಗೂ ತಾಲೂಕು ಒಕ್ಕೂಟದ ಪದಾಧಿಕಾರಿಗಳು, ವೃದ್ಧಾಶ್ರಮಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಕಾರ್ಯಾಗಾರದಲ್ಲಿ ಹಿರಿಯ ನಾಗರಿಕರು ತಮ್ಮ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಸಂವಾದ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಂಡರು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ ಸ್ವಾಗತಿಸಿ, ರೆಡ್‌ಕ್ರಾಸ್ ಗೌರವ ಕಾರ್ಯದರ್ಶಿ ಗಣನಾಥ ಶೆಟ್ಟಿ ಎಕ್ಕಾರು ಕಾರ್ಯಕ್ರಮ ನಿರೂಪಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X