ರಾಜ್ಯ ಶಿಕ್ಷಣ ನೀತಿ 2024ರ ಕುರಿತು ಕಾರ್ಯಗಾರ

ಉಡುಪಿ: ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಮಾಜಶಾಸ್ತ್ರ ವಿಭಾಗ ಮತ್ತು ಆಂತರಿಕ ಗುಣಮಟ್ಟ ಕೋಶ ಹಾಗೂ ಮಂಗಳೂರು ಸಮಾಜಶಾಸ್ತ್ರ ಸಂಘದ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಶಿಕ್ಷಣ ನೀತಿ 2024ರ ಮೂರು ಮತ್ತು ನಾಲ್ಕನೇ ಸೆಮಿಸ್ಟನರ್ ಪಠ್ಯಕ್ರಮದ ಕುರಿತು ಕಾರ್ಯಗಾರವನ್ನು ಕಾಲೇಜಿನ ಯು.ಜಿ ಎ.ವಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಗಾರವನ್ನು ಸಮಾಜ ಶೋಧನಾ ಪತ್ರಿಕೆಯ ಮುಖ್ಯ ಸಂಪಾದಕ ಡಾ.ರಾಬರ್ಟ್ ಪಯಾಸ್ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ಸೋಜನ್ ಕೆ.ಜಿ. ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಗೋವಿಂದರಾಜು ಬಿ.ಎಂ., ಪ್ರಾಧ್ಯಾಪಕ ಪ್ರೊ.ವಿನಯ್ ರಾಜು, ಮಂಗಳೂರು ಸಮಾಜಶಾಸ್ತ್ರ ಸಂಘದ ಅಧ್ಯಕ್ಷ ಡಾ.ಗಿರಿಧರ ರಾವ್ ಎಂ.ಎಸ್. ಮತ್ತು ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ರಾಜೇಂದ್ರ ಕೆ. ಉಪಸ್ಥಿತರಿದ್ದರು.
Next Story





