‘ಜ್ಞಾನಂ 2025’ ವಿಶೇಷ ಕಾರ್ಯಕ್ರಮ ಉದ್ಘಾಟನೆ

ಉಡುಪಿ, ಅ.28: ಉಡುಪಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ವತಿಯಿಂದ ಜ್ಞಾನಂ 2025 ವಿಶೇಷ ಕಾರ್ಯಕ್ರಮ ವನ್ನು ಮಂಗಳವಾರ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಶಾಸಕ ಯಶಪಾಲ್ ಎ. ಸುವರ್ಣ ಮಾತನಾಡಿ, ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ವಿದ್ಯೆ, ಸಂಸ್ಕಾರ ಹಾಗೂ ಸಂಸ್ಕೃತಿಯ ಅರಿವು ನೀಡುವ ಮೂಲಕ ಸಮಾಜದಲ್ಲಿ ಉತ್ತಮ ವ್ಯಕ್ತಿಯ ನಿರ್ಮಾಣ ಮಾಡಲು ಶ್ರಮಿಸುತ್ತವೆ. ಕಾಲೇಜಿನ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಯಲ್ಲಿ ಒದಗಿಸಿಕೊಟ್ಟ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಸದ್ವಿಚಾರಗಳನ್ನು ಮೈಗೂಡಿಸಿಕೊಳ್ಳಬೇಕು. ಈ ಮೂಲಕ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದರು.
ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಮಾತನಾಡಿ, ದೇಶದ ವ್ಯವಸ್ಥೆಯನ್ನು ಬದಲಾಯಿಸುವ ಶಕ್ತಿ ಹೊಂದಿದ ವಿದ್ಯಾರ್ಥಿಗಳು ಇಂತಹ ಸಂಸ್ಥೆಗಳು ನೀಡುವ ಸದವಕಾಶಗಳನ್ನು ಬಳಸಿ ಕೊಳ್ಳುತ್ತಾ ಸಮಾಜದ ಧ್ವನಿಯಾಗಿ ದೇಶಕ್ಕೆ ಮತ್ತು ಸಂಸ್ಥೆಗೆ ಕೀರ್ತಿ ತರಬೇಕು ಎಂದು ತಿಳಿಸಿದರು.
ಸಂಸ್ಥೆಯ ಗೌರವ ಕಾರ್ಯದರ್ಶಿ ಸಿಎ ಟಿ.ಪ್ರಶಾಂತ್ ಹೊಳ್ಳ ಮಾತನಾಡಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಚಂದ್ರಕಾಂತ್ ಭಟ್ ವಹಿಸಿದ್ದರು. ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಘಟಕದ ಸಂಯೋಜಕ ಡಾ.ರಾಘವೇಂದ್ರ ಎಲ್., ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿಗಳಾದ ವಿನಾಯಕ್ ಪೈ ಬಿ., ಡಾ.ಪ್ರಜ್ಞಾ ಮಾರ್ಪಳ್ಳಿ, ಕಾರ್ಯಕ್ರಮ ಸಂಯೋಜಕಿ ಗೌರಿ ಶೆಣೈ ಉಪಸ್ಥಿತರಿದ್ದರು.
ವಿದ್ಯಾರ್ಥಿ ನಾಯಕ ಗಗನ್ ಜೆ. ಸುವರ್ಣ ಸ್ವಾಗತಿಸಿದರು. ಎನ್‌ಎಸ್‌ಎಸ್ ಘಟಕ ನಾಯಕ ವಿಶ್ವಾಸ್ ವಂದಿಸಿದರು. ರಾನಿಯ ಕಾರ್ಯಕ್ರಮ ನಿರೂಪಿಸಿದರು.







