ಪೂರ್ಣಪ್ರಜ್ಞ ಕಾಲೇಜಿನಲ್ಲಿ ರಾಜ್ಯಮಟ್ಟದ ಅಂತರ ಕಾಲೇಜು ಸ್ಪರ್ಧೆ ಪ್ರಜ್ಞಾ -2026

ಉಡುಪಿ, ಎ.2: ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಇದೇ ಎ.6 ಮತ್ತು 7ರಂದು ರಾಜ್ಯಮಟ್ಟದ ಎರಡು ದಿನಗಳ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಉತ್ಸವ ‘ಪ್ರಜ್ಞಾ- 2026’ ನಡೆಯಲಿದೆ. ಇದರಲ್ಲಿ ಸುಮಾರು 33 ಶೈಕ್ಷಣಿಕ ಹಾಗೂ 6 ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ.
ರಾಜ್ಯದ ವಿವಿಧ ಕಾಲೇಜುಗಳಿಂದ ಸ್ಪರ್ಧಿಗಳು ಆಗಮಿಸಲಿದ್ದು ಕಾಲೇಜಿನ ಶೈಕ್ಷಣಿಕ ಗುಣಮಟ್ಟ ಹಾಗೂ ವಿವಿಧ ಕಾಲೇಜುಗಳ ನಡುವಿನ ಸಾಮರಸ್ಯಕ್ಕೆ ಪ್ರಜ್ಞಾ -2026 ಪೂರಕವಾಗಲಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ರಾಮು ಎಲ್. ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





