Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಡಾ.ಲಕ್ಷ್ಮಣ್‌ರ ‘ಪರಿಮಳದ ಬಾಕಿ ಮೊತ್ತ’...

ಡಾ.ಲಕ್ಷ್ಮಣ್‌ರ ‘ಪರಿಮಳದ ಬಾಕಿ ಮೊತ್ತ’ ಸಂಕಲನಕ್ಕೆ ಕವಿ ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ- 2026

ವಾರ್ತಾಭಾರತಿವಾರ್ತಾಭಾರತಿ20 Aug 2026 9:41 PM IST
share
ಡಾ.ಲಕ್ಷ್ಮಣ್‌ರ ‘ಪರಿಮಳದ ಬಾಕಿ ಮೊತ್ತ’ ಸಂಕಲನಕ್ಕೆ ಕವಿ ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ- 2026

ಉಡುಪಿ, ಆ.20: ವಿಶ್ವ ಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ವರ ಪ್ರಾಯೋಜಕತ್ವದಲ್ಲಿ ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ನೀಡುವ ಕವಿ ಕುರಾಡಿ ಸೀತಾರಾಮ ಅಡಿಗ ನೆನಪಿನ ಕಾವ್ಯ ಪ್ರಶಸ್ತಿ-2026ಕ್ಕೆ ಬೆಂಗಳೂರಿನ ಕವಿ ಡಾ. ಲಕ್ಷ್ಮಣ್ ವಿ. ಎ. ಅವರ ‘ಪರಿಮಳದ ಬಾಕಿ ಮೊತ್ತ’ ಕವನ ಸಂಕಲನ ಆಯ್ಕೆಯಾಗಿದೆ.

ಪ್ರಶಸ್ತಿಗಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಸಂಸ್ಥೆ 2025ರಲ್ಲಿ ಪ್ರಕಟಗೊಂಡ ಕವನ ಸಂಕಲನಗಳನ್ನು ಆಹ್ವಾನಿಸಿತ್ತು. ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 71 ಕವನ ಸಂಕಲನಗಳು ಸ್ಪರ್ಧೆಗೆ ಬಂದಿದ್ದವು. ಕನ್ನಡ ಸಾಹಿತ್ಯ ಲೋಕದ ಹಿರಿಯ ವಿಮರ್ಶಕ ಹಾಗೂ ಸಂಸ್ಕೃತಿ ಚಿಂತಕ ಪ್ರೊ. ಎಚ್. ದಂಡಪ್ಪ ತೀರ್ಪುಗಾರರಾಗಿ ಡಾ.ಲಕ್ಷ್ಮಣ್‌ರ ‘ಪರಿಮಳದ ಬಾಕಿ ಮೊತ್ತ’ ಕವನ ಸಂಕಲನವನ್ನು ಪ್ರಶಸ್ತಿಗೆ ಆಯ್ಕೆ ಮಾಡಿದರು.

ಪ್ರಶಸ್ತಿಯು 10,000ರೂ. ನಗದು ಗೌರವಧನ, ಪ್ರಶಸ್ತಿ ಪತ್ರ ಹಾಗೂ ಫಲಕವನ್ನು ಒಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭವು ಸೆಪ್ಟೆಂಬರ್ ತಿಂಗಳಲ್ಲಿ ನಡೆಯಲಿದೆ ಎಂದು ಪ್ರಶಸ್ತಿ ಸಮಿತಿಯ ಸಂಚಾಲಕಿ ಪೂರ್ಣಿಮಾ ಜನಾರ್ದನ ತಿಳಿಸಿದ್ದಾರೆ.

ಡಾ. ಲಕ್ಷ್ಮಣ್ ಪರಿಚಯ: ಡಾ. ಲಕ್ಷ್ಮಣ್ ವಿಠೋಬ ಅಟಪಟಕರ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದವರು. ಆಯುರ್ವೇದ ವೈದ್ಯರಾಗಿ ಬೆಂಗಳೂರಿನಲ್ಲಿ ಸೇವೆ ಸಲ್ಲಿಸುತ್ತಿರುವ ಅವರು ಕವಿ, ಕಥೆಗಾರ ಹಾಗೂ ಅಂಕಣಕಾರರಾಗಿ ಕನ್ನಡ ಸಾಹಿತ್ಯದಲ್ಲಿ ಗುರುತಿಸಿಕೊಂಡಿದ್ದಾರೆ. ಇವರ ಪ್ರಮುಖ ಕೃತಿಗಳು ‘ಎಲೆಕ್ಟ್ರಿಕ್ ಬೇಲಿ ಮತ್ತು ಪಾರಿವಾಳ’, ‘ಅಪ್ಪನ ಅಂಗಿ’, ‘ಕಾಯಿನ್ ಬೂತ್’, ‘ಪರಿಮಳದ ಬಾಕಿ ಮೊತ್ತ’, ‘ಪಿ.ಎಚ್.ಸಿ. ಕವಲುಗುಡ್ಡ’ ಸೇರಿದಂತೆ ಒಟ್ಟು 11 ಕೃತಿಗಳು ಪ್ರಕಟಗೊಂಡಿವೆ

ಇವರು ಪ್ರಜಾವಾಣಿ ದೀಪಾವಳಿ ಕವನ ಸ್ಪರ್ಧೆ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಇವುಗಳಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕಡೆಂಗೋಡ್ಲು ಕಾವ್ಯ ಪ್ರಶಸ್ತಿ-2026 ಸೇರಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X