ಉಡುಪಿ | ಮಹೇಶ್ ಶೆಟ್ಟಿ ತಿಮರೋಡಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಆದೇಶ

ಉಡುಪಿ : ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ಗಂಟೆಯೊಳಗೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಉಡುಪಿ ನ್ಯಾಯಾಲಯ ಆದೇಶ ನೀಡಿದೆ.
ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ಸಹಾಯಕ ಸರಕಾರಿ ಅಭಿಯೋಜಕಿ ಮೋಹಿಣಿ ಆರೋಪಿ ತಿಮರೋಡಿಯನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಅರ್ಜಿ ಸಲ್ಲಿಸಿದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ನಾಗೇಶ್ ಅವರು ಒಂದು ಗಂಟೆಯೊಳಗೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಕೋರ್ಟಿಗೆ ಹಾಜರುಪಡಿಸುವಂತೆ ಆದೇಶ ನೀಡಿದರು. ಬಳಿಕ ತಿಮರೋಡಿ ಅವರನ್ನು ಒಂದು ಗಂಟೆಗಳ ಕಾಲ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ
Next Story





