Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ...

ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕೆ ಅ.21ರಿಂದ 23ರವರೆಗೆ ವಿಶೇಷ ‘ಸಮಾಧಾನ ಸಮಾರೋಹ-2026’

ವಾರ್ತಾಭಾರತಿವಾರ್ತಾಭಾರತಿ30 April 2026 8:42 PM IST
share
ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕೆ ಅ.21ರಿಂದ 23ರವರೆಗೆ ವಿಶೇಷ ‘ಸಮಾಧಾನ ಸಮಾರೋಹ-2026’
ಉಡುಪಿ 78, ದ.ಕ. 75, ಉ.ಕ. 35, ಶಿವಮೊಗ್ಗ 69 ಪ್ರಕರಣ ಗುರುತು

ಉಡುಪಿ: ಭಾರತದ ಸರ್ವೋಚ್ಛ ನ್ಯಾಯಾಲಯದಲ್ಲಿ (ಸುಪ್ರೀಂ ಕೋರ್ಟ್‌ನಲ್ಲಿ) ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥ ಪಡಿಸಿಕೊಳ್ಳಲು ಭಾರತದ ಸರ್ವೋಚ್ಛ ನ್ಯಾಯಾಲಯ ‘ಸಮಾಧಾನ ಸಮಾ ರೋಹ-2026’ ಎಂಬ ವಿಶೇಷ ಲೋಕ ಅದಾಲತ್‌ನ್ನು ಆ.21ರಿಂದ 23ರವರೆಗೆ ಮೂರು ದಿನಗಳ ಕಾಲ ಹಮ್ಮಿಕೊಂಡಿದೆ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯ ನಿರ್ವಾಹಕ ಅಧ್ಯಕ್ಷರಾದ ಅನು ಸಿವರಾಮನ್ ತಿಳಿಸಿದ್ದಾರೆ.

ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಗುರುವಾರ ಸಂಜೆ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ರಾಜ್ಯದ ಎಲ್ಲಾ ಜಿಲ್ಲೆಗಳ ಪತ್ರಕರ್ತರೊಂದಿಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದ ಒಟ್ಟು 4,328 ವಿಚಾರಣೆಗೆ ಬಾಕಿ ಇರುವ ಪ್ರಕರಣ ಗಳನ್ನು ಸಂಧಾನಕ್ಕಾಗಿ ಗುರುತಿಸಿ ಈ ವಿಶೇಷ ಲೋಕ ಅದಾಲತ್‌ನ್ನು ಆಯೋಜಿಸಿದೆ ಎಂದವರು ಹೇಳಿದರು.

ಇದರಲ್ಲಿ ಉಡುಪಿ ಜಿಲ್ಲೆಯಿಂದ 78 ಪ್ರಕರಣಗಳನ್ನು ಗುರುತಿಸಲಾಗಿದೆ. ಉಳಿದಂತೆ ದಕ್ಷಿಣ ಕನ್ನಡದಿಂದ 75, ಉತ್ತರ ಕನ್ನಡದಿಂದ 35, ಶಿವಮೊಗ್ಗದಿಂದ 69, ಚಿಕ್ಕಮಗಳೂರಿನಿಂದ 27 ಪ್ರಕರಣಗಳನ್ನು ಲೋಕಅದಾಲತ್‌ಗಾಗಿ ಗುರುತಿಸಲಾಗಿದೆ.

ಆಸಕ್ತಿವುಳ್ಳವರು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ತಮ್ಮ ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳಲು ನೋಂದಣಿಗೆ ಸಹ ಅವಕಾಶ ಕಲ್ಪಿಸಲಾಗಿದೆ. ಅಲ್ಲದೇ ರಾಜ್ಯದ ಪ್ರತಿ ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸುವ ಮೂಲಕ ಸಾರ್ವಜನಿಕರು ಸುಪ್ರೀಂ ಕೋರ್ಟ್‌ ನಲ್ಲಿರುವ ತಮ್ಮ ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳಲು ಇಂದಿನಿಂದಲೇ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಉಡುಪಿಯಲ್ಲಿ ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ತಿಳಿಸಿದರು.

ಆಯ್ಕೆಯಾದ ವ್ಯಾಜ್ಯಗಳನ್ನು ನೋಂದಾಯಿತ ಕಾನೂನು ಸಮನ್ವಯಕರ ಮಧ್ಯಸ್ಥಿಕೆಯಲ್ಲಿ ತಾವಿರುವ ತಾಲೂಕು ಅಥವಾ ಜಿಲ್ಲಾ ಮಟ್ಟದಲ್ಲಿಯೇ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದಾಗಿದೆ.

ಪ್ರಸ್ತುತ ಸುಪ್ರೀಂ ಕೋರ್ಟ್ ಪ್ರಮುಖವಾಗಿ ಬ್ಯಾಂಕಿಂಗ್ ಮತ್ತು ವಿಮಾ ಸಂಬಂಧಿತ ಪ್ರಕರಣಗಳು, ನಾಗರಿಕ ಕಾನೂನು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ಗ್ರಾಹಕ ವ್ಯಾಜ್ಯಗಳು ಮತ್ತು ರೇರಾ, ಕ್ರಿಮಿನಲ್ ಪ್ರಕರಣಗಳು, ಕೌಟುಂಬಿಕ ವಿವಾದಗಳು, ಕಾರ್ಮಿಕ ಮತ್ತು ಕೈಗಾರಿಕಾ ಕಾನೂನುಗಳು ವಿವಾದಗಳು, ಭೂಸ್ವಾಧೀನ ಮತ್ತು ಪುನರ್ವಸತಿ, ಆಸ್ತಿ ತೆರಿಗೆ, ಬಾಡಿಗೆ ನಿಯಂತ್ರಣ ಮತ್ತು ಸಾರ್ವಜನಿಕ ಆವರಣ (ತೆರವುಗೊಳಿಸುವಿಕೆ) ಕಾಯ್ದೆ, ವರ್ಗಾವಣೆ ಅರ್ಜಿಗಳು ಮತ್ತು ಸೇವಾ ಕಾನೂನುಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಇತ್ಯರ್ಥಕ್ಕೆ ಗುರುತಿಸಿದೆ.

ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದ ಒಟ್ಟು 4,328 ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ಸಂಧಾನಕ್ಕಾಗಿ ಸುಪ್ರೀಂ ಕೋರ್ಟ್ ಗುರುತಿಸಿದೆ. ಇದರಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ 1,245, ಬೆಳಗಾವಿ 517, ಕಲಬುರಗಿ 269, ವಿಜಯಪುರ 213, ಧಾರವಾಡ 188, ಬಾಗಲಕೋಟೆ 159, ಗದಗದಲ್ಲಿ 125, ಬಳ್ಳಾರಿ 109, ತುಮಕೂರು 101, ಕೊಪ್ಪಳ 98, ಹಾವೇರಿ 81, ಬೀದರ್ 77, ರಾಯಚೂರು 69, ಚಿತ್ರದುರ್ಗ 58, ಮೈಸೂರು 56, ದಾವಣಗೆರೆ 47 ಪ್ರಕರಣಗಳಿವೆ. ಕನಿಷ್ಠ ಪ್ರಕರಣ ಚಾಮರಾಜನಗರ (4) ಜಿಲ್ಲೆಯಲ್ಲಿದೆ.

ಕರ್ನಾಟಕ ವ್ಯಾಪ್ತಿಯ ಹೊರಗಿನಿಂದ 36 ಪ್ರಕರಣಗಳು ವರದಿಯಾಗಿದ್ದು, ಸರಿಯಾಗಿ ಗುರುತಿಸಲಾಗದ ಪ್ರಕರಣಗಳ ಸಂಖ್ಯೆ 347 ಆಗಿದೆ. ಸುಪ್ರೀಂ ಕೋರ್ಟ್ ಈಗಾಗಲೇ ಗುರುತಿಸಲಾದ ಪ್ರಕರಣಗಳಲ್ಲಿ 937ಕ್ಕೂ ಹೆಚ್ಚು ಪ್ರಕರಣಗಳು ಸರ್ಕಾರವು ಪಕ್ಷವಾಗಿರುವ ಪ್ರಕರಣಗಳಾಗಿವೆ.

ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾದ ಆರ್. ದೇವದಾಸ್ ಮಾತನಾಡಿ, ಈ ವಿಶೇಷ ಲೋಕ ಅದಾಲತ್ ಜನಸಾಮಾನ್ಯರಿಗೆ ತಮ್ಮ ಕಾನೂನು ಹೋರಾಟವನ್ನು ತ್ವರಿತವಾಗಿ ಮತ್ತು ಕಡಿಮೆ ವೆಚ್ಚದಲ್ಲಿ ಮುಗಿಸಿಕೊಳ್ಳಲು ಸಿಕ್ಕಿರುವ ಮಹತ್ವದ ಅವಕಾಶವಾಗಿದೆ. ಇದರಿಂದ ಸಮಯ ಮತ್ತು ಹಣ ಉಳಿತಾಯವಾಗುವುದಲ್ಲದೆ, ಉಭಯ ಪಕ್ಷಗಳ ನಡುವೆ ಸೌಹಾರ್ದ ಸಂಬಂಧ ಉಳಿಯಲು ಸಹಕಾರಿಯಾಗಲಿದೆ. ಸಾರ್ವಜನಿಕರು ಈ ಅದಾಲತ್ ಪ್ರಯೋಜನ ಪಡೆಯುವಂತೆ ಮನವಿ ಮಾಡಿದರು.

ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: ಭಾರತದ ಸರ್ವೋಚ್ಚ ನ್ಯಾಯಾಲಯದ ಒನ್‌ಸ್ಟಾಪ್ ಕೇಂದ್ರದ ಸಂಪರ್ಕ ಸಂಖ್ಯೆ: 011-23112428, 011-23112528, 011-23116464, 011-23116465, 011-23115652. ಇಮೇಲ್: speciallokadalat2026 @sci.nic.in

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸಂಪರ್ಕ ಸಂಖ್ಯೆ: 080-22111729, 080-22111714. ಟೋಲ್ ಫ್ರೀ ಸಂಖ್ಯೆ: 15100 (24*7). ಇಮೇಲ್: samadhansamaroh@gmail.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X