Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮೇ 22ರಂದು ಬಡಗಬೆಟ್ಟು ಸೊಸೈಟಿಯ ನೂತನ...

ಮೇ 22ರಂದು ಬಡಗಬೆಟ್ಟು ಸೊಸೈಟಿಯ ನೂತನ ಕುಂದಾಪುರ ಶಾಖೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ20 May 2026 7:09 PM IST
share
ಮೇ 22ರಂದು ಬಡಗಬೆಟ್ಟು ಸೊಸೈಟಿಯ ನೂತನ ಕುಂದಾಪುರ ಶಾಖೆ ಉದ್ಘಾಟನೆ

ಕುಂದಾಪುರ, ಮೇ 20: ಪ್ರತಿಷ್ಠಿತ ಬಡಗಬೆಟ್ಟು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ 12ನೇ ನೂತನ ಕುಂದಾಪುರ ಶಾಖೆಯು ಮೇ 22ರಂದು ಬೆಳಗ್ಗೆ 10.30ಕ್ಕೆ ಕುಂದಾಪುರದ ಮುಖ್ಯ ರಸ್ತೆಯ ಪಾರಿಜಾತ ಹೋಟೆಲ್ ಬಳಿಯ ಶ್ರೀನಂದಿಕೇಶ್ವರ ಟವರ್ಸ್‌ನಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಸೊಸೈಟಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ.

ಕುಂದಾಪುರದಲ್ಲಿ ಬುಧವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಶಾಖೆಯನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಉದ್ಘಾಟಿಸಲಿರುವರು. ಮುಖ್ಯ ಅತಿಥಿಗಳಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ, ಯಶ್‌ಪಾಲ್ ಸುವರ್ಣ, ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ, ಎಸ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಮಹೇಶ ಹೆಗ್ಡೆ ಮೊಳಹಳ್ಳಿ, ಜಿಲ್ಲಾ ಸಹಕಾರಿ ಉಪನಿಬಂಧಕಿ ಲಾವಣ್ಯ ಕೆ.ಆರ್., ಕುಂದಾಪುರ ಉಪವಿಭಾಗದ ಸಹಾಯಕ ನಿಬಂಧಕ ಸುಧೀರ್ ಕುಮಾರ್ ಜೆ. ಭಾಗವಹಿಸಲಿದ್ದಾರೆ ಎಂದರು.

107 ವರ್ಷಗಳ ಇತಿಹಾಸದ ಈ ಸಂಘವು 40 ವರ್ಷಗಳಿಂದೀಚಿಗೆ ಉತ್ತಮ ಲಾಭದಾಯಕ ರೀತಿಯಲ್ಲಿ ಮುನ್ನಡೆ ಯುತ್ತಿದೆ. ಪ್ರಸ್ತುತ 23 ಸಾವಿರ ಸದಸ್ಯರಿದ್ದು, 662 ಕೋ.ರೂ. ಠೇವಣಿ, 528 ಕೋ.ರೂ. ಸದಸ್ಯರ ಹೊರಬಾಕಿ ಸಾಲ ಹೊಂದಿದೆ. 113.24 ಕೋ.ರೂ. ನಿಧಿ, 284.07 ಕೋ.ರೂ. ಹೂಡಿಕೆ, 795 ಕೋ.ರೂ. ದುಡಿಯುವ ಬಂಡ ವಾಳ, 2025-26 ನೇ ಸಾಲಿನಲ್ಲಿ 4,062.29 ಕೋ.ರೂ. ವಾರ್ಷಿಕ ವಹಿವಾಟು ನಡೆಸಿ, 18.13 ಕೋ.ರೂ. ಲಾಭ ಗಳಿಸಿದೆ. 11 ಶಾಖೆಗಳ ಪೈಕಿ 9 ಕಡೆ ಸ್ವಂತ ಕಟ್ಟಡವಿದ್ದು, ಕುಂದಾಪುರದಲ್ಲಿ ಇದು ಮೊದಲ ಶಾಖೆಯಾಗಿದೆ ಮತ್ತು ಸಂಪೂರ್ಣ ಹವಾನಿಯಂತ್ರಿತವಾಗಿದೆ ಎಂದವರು ತಿಳಿಸಿದರು.

ಸಂಘವು ಪ್ರತಿ ವರ್ಷ ಸುಮಾರು 25ಲಕ್ಷ ರೂ. ಹಣವನ್ನು ಶಿಕ್ಷಣ, ಆರೋಗ್ಯ ಹಾಗೂ ಸಾಮಾಜಿಕ ಕೈಂಕರ್ಯಗಳಿಗೆ ವಿನಿಯೋಗಿಸುತ್ತಿದೆ. ಉತ್ತಮ ಆಡಳಿತ, ಆರ್ಥಿಕ ಶಿಸ್ತು, ಸದಸ್ಯ ಸ್ನೇಹಿ ಯೋಜನೆಗಳು, ಪಾರದರ್ಶಕ ಕಾರ್ಯ ವೈಖರಿಗೆ ಈಗಾಗಲೇ ಮೆಚ್ಚುಗೆ ಗಳಿಸಿದೆ. ಚೇತನಾ ಮೊಬೈಲ್ ಆ್ಯಪ್ ಮೂಲಕ ಡಿಜಿಟಲೀಕರಣವನ್ನು ಪರಿಚಯಿ ಸಿದೆ. ನೂತನ ಕುಂದಾಪುರ ಶಾಖೆಯಲ್ಲಿ ಆಕರ್ಷಕ ಠೇವಣಿ ಯೋಜನೆ, ಕಡಿಮೆ ಬಡ್ಡಿದರದಲ್ಲಿ ವಿವಿಧ ಸಾಲ ಸೌಲಭ್ಯ, ಸೇಫ್ ಲಾಕರ್, ಇ- ಸ್ಟಾಂಪಿಂಗ್, ಪಾನ್ ಕಾರ್ಡ್, ಆರೋಗ್ಯ ಕಾರ್ಡ್, ಎಲ್ಲ ವಿಮಾ ಸೇವೆ, ಮೊಬೈಲ್ ಮೂಲಕ ದೈನಿಕ ಠೇವಣಿ ಸಂಗ್ರಹ, ಶೂನ್ಯ ಬ್ಯಾಲೆನ್ಸ್ ವಿದ್ಯಾನಿಧಿ, ಉದ್ಘಾಟನೆ ಪ್ರಯುಕ್ತ ವಿಶೇಷ ಠೇವಣಿ ಬಡ್ಡಿದರ ಸೇವೆಯನ್ನು ಸಹ ಸಂಸ್ಥೆ ಘೋಷಿಸಿದೆ ಎಂದು ಅವರು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಜಾರ್ಜ್ ಸಾಮ್ಯುವೆಲ್, ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ.ಶೇರಿಗಾರ್, ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಕುಮಾರ್, ಕುಂದಾಪುರ ಶಾಖಾ ವ್ಯವಸ್ಥಾಪಕ ಸಮರ್ಥ್ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X