Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕರಾವಳಿಯಲ್ಲಿ ಹೈಕೋರ್ಟ್‌ನ ಸಂಚಾರಿ ಪೀಠ...

ಕರಾವಳಿಯಲ್ಲಿ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪನೆಗೆ ಆಗ್ರಹ; ಆ.22ರಂದು ಉಡುಪಿಯಲ್ಲಿ ಸಮಾಲೋಚನಾ ಸಭೆ

ವಾರ್ತಾಭಾರತಿವಾರ್ತಾಭಾರತಿ19 Aug 2026 10:05 PM IST
share
ಕರಾವಳಿಯಲ್ಲಿ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪನೆಗೆ ಆಗ್ರಹ; ಆ.22ರಂದು ಉಡುಪಿಯಲ್ಲಿ ಸಮಾಲೋಚನಾ ಸಭೆ

ಉಡುಪಿ, ಆ.19: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡ ರಾಜ್ಯದ ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್ ಸಂಚಾರಿ ಪೀಠವನ್ನು ಸ್ಥಾಪಿಸುವಂತೆ ಒತ್ತಾಯಿಸಿ ಸಂಘಟಿತ ಹೋರಾಟ ರೂಪಿಸುವ ನಿಟ್ಟಿನಲ್ಲಿ ಯು-ಆ್ಯಕ್ಟ್ ಹಾಗೂ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿ ವತಿಯಿಂದ ಆಗಸ್ಟ್ 22ರಂದು ಉಡುಪಿಯಲ್ಲಿ ಸಮಾಲೋಚನಾ ಸಭೆಯೊಂದನ್ನು ಕರೆದಿದೆ ಎಂದು ಸಮಿತಿಯ ಸ್ಥಾಪಕ ಹಾಗೂ ನ್ಯಾಯವಾದಿ ಪ್ರೇಮ್‌ಪ್ರಸಾದ್ ಶೆಟ್ಟಿ ಹೇಳಿದ್ದಾರೆ.

ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಅ.22ರ ಶನಿವಾರ ಅಪರಾಹ್ನ 3:00 ಗಂಟೆಗೆ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಸಭೆಯನ್ನು ಆಯೋಜಿಸಲಾಗಿದೆ. ಕರಾವಳಿ ಭಾಗ ದಲ್ಲಿ ಹೈಕೋರ್ಟ್ ಸಂಚಾರಿ ಪೀಠದ ಸ್ಥಾಪನೆಯ ಅಗತ್ಯತೆ ಕುರಿತು ಸಭೆಯಲ್ಲಿ ಚರ್ಚಿಸಿ ಸರಕಾರದ ಮುಂದೆ ಸಂಘಟಿತ ಹಕ್ಕೊತ್ತಾಯ ಮಂಡಿಸಲಾಗುವುದು ಎಂದರು.

ಕರಾವಳಿಯಿಂದ ಹೈಕೋರ್ಟ್‌ನಲ್ಲಿ ಅಧಿಕ ವ್ಯಾಜ್ಯಗಳು ದಾಖಲಾಗುತ್ತಿವೆ. ಇದಕ್ಕಾಗಿ ಪ್ರಕರಣಗಳ ವಿಚಾರಣೆಗೆ ಬೆಂಗಳೂರಿನಲ್ಲಿರುವ ಹೈಕೋರ್ಟ್‌ಗೆ ತೆರಳಲು 900ರಿಂದ 1,000 ಕಿ.ಮೀ.ಗೂ ಅಧಿಕ ದೂರ ಪ್ರಯಾಣಿಸ ಬೇಕಾಗಿದೆ. ಮಳೆಗಾಲದಲ್ಲಿ ಸಾರ್ವಜನಿಕರು, ಮಹಿಳೆಯರು ಹಾಗೂ ಕಕ್ಷಿದಾರರಿಗೆ ಹೆಚ್ಚಿನ ತೊಂದರೆಯಾಗುತ್ತಿದೆ. ಕರಾವಳಿಯಲ್ಲಿ ಪೀಠ ಸ್ಥಾಪನೆಯಾದರೆ ಕಡಿಮೆ ವೆಚ್ಚದಲ್ಲಿ ತ್ವರಿತ ನ್ಯಾಯ ದೊರೆಯಲಿದೆ ಎಂದು ಅವರು ಹೇಳಿದರು.

22ರ ಸಭೆಯಲ್ಲಿ ವಕೀಲರು, ಪತ್ರಕರ್ತರು, ಸಾಮಾಜಿಕ ಹಾಗೂ ಉದ್ಯಮ ಸಂಘಟನೆಗಳು, ವಿದ್ಯಾರ್ಥಿ ಮತ್ತು ಕಾರ್ಮಿಕ ಸಂಘಟನೆಗಳು, ಮಾಜಿ ಸೈನಿಕರು, ಆಟೋ ಚಾಲಕರು ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಹೋರಾಟವನ್ನು ವಕೀಲರಿಗೆ ಸೀಮಿತಗೊಳಿಸದೆ ಇಡೀ ಕರಾವಳಿ ಜನತೆಯ ಧ್ವನಿಯಾಗಿಸುವ ಉದ್ದೇಶವಿದೆ ಎಂದು ಪ್ರೇಮ್‌ಪ್ರಸಾದ್ ಶೆಟ್ಟಿ ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪ್ರಮುಖರಾದ ಪೌರ್ಣಮಿ ಪ್ರೇಮ್, ವಿಜಯ್ ಡಿಸೋಜಾ, ಮಾಧವ ಕಾಮತ್, ಸರಿತಾ ಬಿ., ಸುರೇಶ್ ಕಾಮತ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X