ರಾಜ್ಯ ಕಿರಿಯರ, 23ವರ್ಷದೊಳಗಿನವರ ಕ್ರೀಡಾಕೂಟ ಸಮಾರೋಪ

ಉಡುಪಿ, ಆ.25: ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಸಂಸ್ಥೆ ಮತ್ತು ಕರ್ನಾಟಕ ರಾಜ್ಯದ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಉಡುಪಿ ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ನಡೆದ ಕರ್ನಾಟಕ ರಾಜ್ಯ ಕಿರಿಯರ ಮತ್ತು 23ವರ್ಷದೊಳಗಿನವರ ಕ್ರೀಡಾಕೂಟದ ಸಮಾರೋಪ ಸಮಾರಂಭವು ಸೋಮವಾರ ನಡೆಯಿತು.
ಮುಖ್ಯ ಅತಿಥಿಗಳಾಗಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕೆನರಾ ಬ್ಯಾಂಕಿನ ಜನರಲ್ ಮೆನೇಜರ್ ಎಚ್.ಪಿ.ಗಂಗಾಧರ ಮಾತನಾಡಿದರು. ಈ ಸಂದರ್ಭದಲ್ಲಿ ವಿಜೇತ ತಂಡ ಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ವೇದಿಕೆಯಲ್ಲಿ ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಣಿಪಾಲ ಮಾಹೆಯ ಡಾ.ಎಂ.ಆರ್.ಕುಮಾರ್, ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನ ಶಂಕರ್ ನಟರಾಜ್, ಕೆನರಾ ಬ್ಯಾಂಕಿನ ಸಂಜೀವ ಕುಮಾರ್, ಮೇಘಾ ಶೆಟ್ಟಿ, ತರಬೇತುದಾರ ರಾಜು ವೇಲು, ಜಿಲ್ಲಾ ಟೆನ್ನಿಸ್ ಅಸೋಸಿಯೇಶನ್ ಅಧ್ಯಕ್ಷ ಸಿಎ ದೇವಾನಂದ, ಉದ್ಯಮಿ ಮಧು ಸೂದನ್ ಸ್ವಾಮಿ, ಮಣಿಪಾಲ ಎಂಜೆಸಿ ಪ್ರಾಂಶುಪಾಲೆ ರೂಪಾ, ಸಂಘಟನಾ ಸಮಿತಿಯ ಕಾರ್ಯದರ್ಶಿ ಮಹೇಶ್ ಠಾಕೂರ್ ಉಪಸ್ಥಿತರಿದ್ದರು.
ಮಾಜಿ ಶಾಸಕ ಹಾಗೂ ಕ್ರೀಡಾಕೂಟ ಸಂಘಟನಾ ಸಮಿತಿ ಅಧ್ಯಕ್ಷ ಕೆ. ರಘುಪತಿ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆಯ ಅಧ್ಯಕ್ಷ ಹರಿಪ್ರಸಾದ್ ರೈ ಸ್ವಾಗತಿಸಿದರು. ಡಾ.ರಾಮಚಂದ್ರ ಪಾಟ್ಕರ್ ವಂದಿಸಿದರು. ಉಡುಪಿ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.







