Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಆ. 23-24ರಂದು ಸತತ 25 ಗಂಟೆ ದಾಸರ ಪದ...

ಆ. 23-24ರಂದು ಸತತ 25 ಗಂಟೆ ದಾಸರ ಪದ ಗಾಯನ; ವಿಶ್ವದಾಖಲೆ ಪ್ರಯತ್ನದಲ್ಲಿ ಖ್ಯಾತ ಗಾಯಕಿ ಸಂಗೀತ ಬಾಲಚಂದ್ರ

ವಾರ್ತಾಭಾರತಿವಾರ್ತಾಭಾರತಿ19 Aug 2026 10:04 PM IST
share
ಆ. 23-24ರಂದು ಸತತ 25 ಗಂಟೆ ದಾಸರ ಪದ ಗಾಯನ; ವಿಶ್ವದಾಖಲೆ ಪ್ರಯತ್ನದಲ್ಲಿ ಖ್ಯಾತ ಗಾಯಕಿ ಸಂಗೀತ ಬಾಲಚಂದ್ರ

ಉಡುಪಿ: ಲಘು ಶಾಸ್ತ್ರೀಯ ಸಂಗೀತ ಕ್ಷೇತ್ರದಲ್ಲಿ 25 ವರ್ಷಗಳ ಸುದೀರ್ಘ ಪಯಣ ಪೂರ್ಣಗೊಳಿಸಿರುವ ಆಕಾಶ ವಾಣಿಯ ಉನ್ನತ ಶ್ರೇಣಿಯ ಕಲಾವಿದೆ ಹಾಗೂ ಚಲನಚಿತ್ರ ಹಿನ್ನೆಲೆ ಗಾಯಕಿ ಉಡುಪಿಯ ಸಂಗೀತ ಬಾಲಚಂದ್ರ ಅವರು ಇದೀಗ ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ನಲ್ಲಿ ಸ್ಥಾನ ಪಡೆಯಲು ವಿಶಿಷ್ಟ ಸಾಹಸಕ್ಕೆ ಮುಂದಾಗಿದ್ದಾರೆ.

ಇದೇ ಆಗಸ್ಟ್ 23ರಂದು ಬೆಳಗ್ಗೆ 6:30ರಿಂದ ಮರುದಿನ ಆ.24ರ ಬೆಳಗ್ಗೆ 7:30ರವರೆಗೆ ಸತತ 25 ಗಂಟೆಗಳ ಕಾಲ ದಾಸರಪದ ಗಾಯನದ ಮೂಲಕ ವಿಶಿಷ್ಟ ವಿಶ್ವದಾಖಲೆಗಾಗಿ ಅವರು ನಿರಂತರವಾಗಿ ಹಾಡಲಿದ್ದಾರೆ. ಭೀಮಾ ಜ್ಯುವೆಲ್ಲರ್ಸ್ ಪ್ರಾಯೋಜಕತ್ವದಲ್ಲಿ ನಡೆಯಲಿರುವ ಈ ಗಾಯನ ಕಾರ್ಯಕ್ರಮಕ್ಕೆ ‘ಪಂಚವಿಂಶತಿ’ ಎಂದು ಹೆಸರಿಡಲಾಗಿದೆ.

ಉಡುಪಿಯ ಶ್ರೀಕೃಷ್ಣ ಮಠದ ಸಮೀಪದ ಗೀತಾ ಮಂದಿರದ ಶ್ರೀ ಪುತ್ತಿಗೆ ನೃಸಿಂಹ ಸಭಾಂಗಣದಲ್ಲಿ ಈ ಕಾರ್ಯ ಕ್ರಮ ನಡೆಯಲಿದೆ ಎಂದು ಸಂಗೀತ ಬಾಲಚಂದ್ರ ಇಂದು ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸತತ 25 ಗಂಟೆಗಳ ದಾಸರ ಪದಗಾಯನದ ವೇಳೆ ಪುರಂದರದಾಸರು, ಕನಕದಾಸರು, ವಿಜಯದಾಸರು ಸೇರಿದಂತೆ ವಿವಿಧ ದಾಸರ ಒಟ್ಟು 250 ದಾಸರ ಪದಗಳನ್ನು ಹೊಸ ರಾಗಸಂಯೋಜನೆಯೊಂದಿಗೆ ಪ್ರಸ್ತುತ ಪಡಿಸುತ್ತಿರುವುದಾಗಿ ಸಂಗೀತ ಬಾಲಚಂದ್ರ ತಿಳಿಸಿದರು.

ತಮ್ಮ ಸಂಗೀತಗುರು ವಿದ್ವಾನ್ ಸೂರಾಲು ಜಿ.ಪರಮೇಶ್ವರ ಭಟ್ ಅವರಿಗೆ ಸಮರ್ಪಿಸುತ್ತಿರುವುದಾಗಿ ತಿಳಿಸಿಗದ ಸಂಗೀತಾ, ಆ.23ರಂದು ಬೆಳಗ್ಗೆ 6.00ಕ್ಕೆ ಗಣ್ಯರ ಉಪಸ್ಥಿತಿಯಲ್ಲಿ ಶಾಸಕ ಯಶಪಾಲ್ ಸುವರ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದರು.6:30ಕ್ಕೆ ಆರಂಭವಾಗುವ ಗಾಯನವು ಆ.24ರ ಬೆಳಿಗ್ಗೆ 7.30ಕ್ಕೆ ಮುಕ್ತಾಯ ಗೊಳ್ಳಲಿದೆ. ಒಟ್ಟು 25 ಗಂಟೆ (1,500 ನಿಮಿಷ) ಕಾಲ ನಿರಂತರವಾಗಿ ದಾಸರಪದಗಳ ಗಾಯನ ನಡೆಯಲಿದೆ.

ಕಾರ್ಯಕ್ರಮದಲ್ಲಿ ಸಂಪೂರ್ಣವಾಗಿ ಹೊಸದಾಗಿ ಸ್ವರಸಂಯೋಜನೆ ಮಾಡಲಾಗಿರುವ 250 ದಾಸರಪದಗಳನ್ನು ಪ್ರಸ್ತುತಪಡಿಸಲಾಗುವುದು. ಕೀಬೋರ್ಡ್, ರಿದಮ್ ಪ್ಯಾಡ್, ಕೊಳಲು ಹಾಗೂ ತಬಲಾ ವಾದಕ ರನ್ನೊಳಗೊಂಡ ಎರಡು ಪ್ರತ್ಯೇಕ ಸಹಕಲಾವಿದರ ತಂಡಗಳು ನಿರಂತರವಾಗಿ ಲೈವ್ ಸಂಗೀತಕ್ಕೆ ಸಾಥ್ ನೀಡಲಿವೆ. ಪ್ರತಿ ಮೂರುಗಂಟೆಗೊಮ್ಮೆ ತಲಾ 10ರಿಂದ 15 ನಿಮಿಷಗಳ ವಿರಾಮ ಪಡೆಯಲಾಗುವುದು ಎಂದರು.

ಮಹಿಳಾ ಗಾಯಕಿಯೊಬ್ಬರು ಪ್ರಮುಖವಾಗಿ ದಾಸರಪದಗಳನ್ನು ಆಯ್ಕೆ ಮಾಡಿಕೊಂಡು ಇಷ್ಟು ಸುದೀರ್ಘ ಅವಧಿ ಯವರೆಗೆ ನಿರಂತರವಾಗಿ ಗಾಯನ ಮಾಡುತ್ತಿರುವುದು ಅಪರೂಪದ ಹಾಗೂ ಮೊದಲ ಪ್ರಯತ್ನ ಇದಾಗಿದ್ದು, ಈ ಮೂಲಕ ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್’ನಲ್ಲಿ ದಾಖಲೆ ಬರೆಯಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ರವೀಂದ್ರ ಪ್ರಭು, ಗುರುರಾಜ್, ಕೆ.ವೇದವ್ಯಾಸ ಪುರಾಣಿಕ್, ಮೋಹನ್ ಪಡ್ರೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X