Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಫೆ.24ಕ್ಕೆ ನೂತನ ಕೈಮಗ್ಗ ನೇಯ್ಗೆ...

ಉಡುಪಿ: ಫೆ.24ಕ್ಕೆ ನೂತನ ಕೈಮಗ್ಗ ನೇಯ್ಗೆ ಕೇಂದ್ರ ಉದ್ಘಾಟನೆ

ಮಹಿಳೆಯರಿಗೆ 6 ತಿಂಗಳ ಕೈಮಗ್ಗ ನೇಯ್ಗೆ ತರಬೇತಿ

ವಾರ್ತಾಭಾರತಿವಾರ್ತಾಭಾರತಿ22 Feb 2024 9:14 PM IST
share
ಉಡುಪಿ: ಫೆ.24ಕ್ಕೆ ನೂತನ ಕೈಮಗ್ಗ ನೇಯ್ಗೆ ಕೇಂದ್ರ ಉದ್ಘಾಟನೆ

ಉಡುಪಿ: ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ ಹಾಗೂ ಪದ್ಮಶಾಲಿ ನೇಕಾರ ಪ್ರತಿಷ್ಠಾನ ಉಡುಪಿ ಇವರ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲಾಡಳಿತ, ನಬಾರ್ಡ್, ಕೈಮಗ್ಗ ಮತ್ತು ಜವಳಿ ಇಲಾಖೆ, ನೇಕಾರರ ಸೇವಾ ಕೇಂದ್ರ ಬೆಂಗಳೂರು ಹಾಗೂ ರೋಬೋಸಾಫ್ಟ್‌ನ ಸಿಎಸ್‌ಆರ್ ನಿಧಿಯ ಸಹಕಾರದೊಂದಿಗೆ ಉಡುಪಿಯಲ್ಲಿ ಪ್ರಾರಂಭಿಸಲಾದ ನೂತನ ಕೈಮಗ್ಗ ನೇಯ್ಗೆ ಕೇಂದ್ರದ ಉದ್ಘಾಟನೆ ಹಾಗೂ 30 ಮಂದಿ ಮಹಿಳೆಯರಿಗೆ ಪ್ರಾರಂಭಿಸಲಾಗುವ ಆರು ತಿಂಗಳ ಕೈಮಗ್ಗ ನೇಯ್ಗೆ ತರಬೇತಿಗೆ ಫೆ.24ರ ಶನಿವಾರದಂದು ಬನ್ನಂಜೆಯಲ್ಲಿರುವ ಜಿಲ್ಲಾ ಪಂಚಾಯತ್ ಕಟ್ಟಡದಲ್ಲಿ ಚಾಲನೆ ನೀಡಲಾಗುವುದು ಎಂದು ಪದ್ಮಶಾಲಿ ನೇಕಾರ ಪ್ರತಿಷ್ಠಾನ ಹಾಗೂ ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರತ್ನಾಕರ್ ಇಂದ್ರಾಳಿ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೈಮಗ್ಗ ನೇಯ್ಗೆ ತರಬೇತಿ ಕೇಂದ್ರದಲ್ಲಿ ಈಗಾಗಲೇ 50 ಕೈಮಗ್ಗಗಳನ್ನು ಅಳವಡಿಸಲಾಗಿದ್ದು, ಇದರಲ್ಲಿ ಎರಡನೇ ಹಂತದ ಆರು ತಿಂಗಳ ಕೈಮಗ್ಗ ನೇಯ್ಗೆ ತರಬೇತಿಯನ್ನು 30 ಮಂದಿ ಮಹಿಳೆಯರಿಗೆ ನೀಡಲಾಗುವುದು ಎಂದರು.

ಕೈಮಗ್ಗ ನೇಕಾರಿಕೆಯ ಪುನಶ್ಚೇತನಕ್ಕಾಗಿ ಕಳೆದ ಮೂರು ವರ್ಷಗಳಿಂದ ಶ್ರಮಿಸುತ್ತಿರುವ ನೇಕಾರ ಪ್ರತಿಷ್ಠಾನ, ಉಡುಪಿ ಯಲ್ಲಿ ನೂತು ಹೊಸ ಕೈಮಗ್ಗ ನೇಕಾರರಿಗೆ ತರಬೇತಿ ನೀಡುವ ಸಂಕಲ್ಪ ಹೊಂದಿದೆ ಎಂದರು. ಈಗಾಗಲೇ ಉಡುಪಿ ಜಿಲ್ಲಾಡಳಿತದ ಆಶ್ರಯದಲ್ಲಿ 25 ಯುವತಿಯರಿಗೆ 12,000 ಶಿಷ್ಯ ವೇತನ ನೀಡಿ, ಊಟ, ಉಪಹಾರ, ಪ್ರಯಾಣ ಭತ್ಯೆ ಭರಿಸಿ ಮಣಪಾಲದಲ್ಲಿ ಆರು ತಿಂಗಳ ಮೊದಲ ಹಂತದ ತರಬೇತಿ ನೀಡಲಾಗಿದೆ. ಇವರಲ್ಲಿ 22 ಮಂದಿ ಯುವತಿಯರು ಬನ್ನಂಜೆ ನೂತನ ಕಟ್ಟಡದಲ್ಲಿ ವೃತ್ತಿಪರ ನೇಕಾರರಾಗಿ ನೇಯ್ಗೆ ಕಾಯಕ ಪ್ರಾರಂಭಿಸಲಿದ್ದಾರೆ ಎಂದು ರತ್ನಾಕರ ಇಂದ್ರಾಳಿ ತಿಳಿಸಿದರು.

ಇದೀಗ ಎರಡನೇ ಹಂತದಲ್ಲಿ ತರಬೇತಿಗೆ ಆಯ್ಕೆಯಾಗಿರುವ 30 ಮಂದಿ ಮಹಿಳೆಯರಿಗೂ ತಿಂಗಳಿಗೆ ತಲಾ 8,000ರೂ. ಶಿಷ್ಯವೇತನದೊಂಇಗೆ ಉಚಿತ ಊಟ, ಉಪಹಾರ ನೀಡಲಾಗುವುದು ಎಂದರು.

ಕರಾವಳಿ ಭಾಗದಲ್ಲಿ ಕೈಮಗ್ಗದ ಮೂಲಕ ಗಂಜಿ ಹಾಕಿ ನೇಯಲಾಗುವ ಹತ್ತಿ ನೂಲಿನ ವಿಶಿಷ್ಟ ಸೀರೆಗಳಿಗೆ ಈಗ ಬೇಡಿಕೆ ಬಂದಿದೆ. ಉಡುಪಿ ಸೀರೆಗಳೆಂದು ಮಾರುಕಟ್ಟೆಯಲ್ಲಿ ಬೇಡಿಕೆಯನ್ನು ಹೊಂದಿರುವ ಈ ಸೀರೆಗಳಿಗೆ 2018ರಲ್ಲಿ ಜಿಯೋಗ್ರಾ ಫಿಕಲ್ ಇಂಡಿಕೇಷನ್ ಟ್ಯಾಗ್(ಜಿಐ ಟ್ಯಾಗ್) ದೊರಕಿದ್ದು, ಇಂದು ದೇಶ-ವಿದೇಶಗಳು ಸೇರಿದಂತೆ ಎಲ್ಲಾ ಕಡೆಗಳಲ್ಲಿ ತುಂಬಾ ಜನಪ್ರಿಯತೆಯನ್ನು ಪಡೆದಿದೆ ಎಂದವರು ತಿಳಿಸಿದರು.

ಒಂದೆರಡು ದಶಕಗಳ ಹಿಂದಿನವರೆಗೂ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿರಾರು ನೇಕಾರರಿದ್ದರೆ, ಇಂದು ಸ್ಪರ್ಧಾ ತ್ಮಕ ಜಗತ್ತಿನ ಹೊಡೆತಗಳಿಂದ ಚೇತರಿಸಿಕೊಳ್ಳಲಾರದೇ ಅವು ನಶಿಸಿಹೋಗುತ್ತಿವೆ. ಇದರೊಂದಿಗೆ ಹೆಚ್ಚಿನ ಪರಿಶ್ರಮ ಬೇಡುವ ಈ ಕಸುಬಿನ ಕುರಿತಂತೆ ಯವಜನತೆಯಲ್ಲಿ ಹೆಚ್ಚಿದ ಕೀಳರಿಮೆ, ಕಡಿಮೆ ಆದಾಯದಿಂದ ನೇಯ್ಗೆ ಉದ್ಯಮ ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ನಲುಗಿ ಹೋಗಿದ್ದು, 50ಕ್ಕಿಂತ ಕಡಿಮೆ ನೇಕಾರರು ಇಂದು ಉಳಿದುಕೊಂಡಿದ್ದಾರೆ. ಇವರಲ್ಲಿ ಬಹುಸಂಖ್ಯಾತರು ಬದುಕಿನ ಸಂಧ್ಯಾಕಾಲದಲ್ಲಿರುವವರು ಎಂದರು.

ಹೀಗಾಗಿ ನೇಕಾರಿಕೆ ಕುಲಕಸುಬಿನ ಪುನರುತ್ಥಾನದ ಗುರಿಯೊಂದಿಗೆ ಪದ್ಮಶಾಲಿ ನೇಕಾರ ಪ್ರತಿಷ್ಠಾನ ಕಾರ್ಯಪ್ರವೃತ್ತ ವಾಗಿದ್ದು, ಯುವಜನತೆಯನ್ನು ನೇಕಾರಿಕೆಯತ್ತ ಸೆಳೆಯಲು ಪ್ರಯತ್ನಿಸುತ್ತಿದೆ ಎಂದರು.

ಕೈಮಗ್ಗ ನೇಯ್ಗೆ ಕೇಂದ್ರವನ್ನು ಫೆ.24ರ ಬೆಳಗ್ಗೆ 10:30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿ ಸಲಿದ್ದು, ಕೇಂದ್ರ ಸಚಿವೆ, ಸಂಸದೆ ಶೋಭಾ ಕರಂದ್ಲಾಜೆ ದೀಪ ಬೆಳಗಿಸುವರು. ಶಾಸಕ ಯಶಪಾಲ್ ಸುವರ್ಣ ಅಧ್ಯಕ್ಷತೆ ವಹಿಸುವರು ಎಂದರು. ಜಿಲ್ಲಾಧಿಕಾರಿ, ಸಿಇಓ ಸೇರಿದಂತೆ ಗಣ್ಯರು ಇದರಲ್ಲಿ ಭಾಗವಹಿಸುವರು ಎಂದರು.

ಪತ್ರಿಕಾಗೋಷ್ಠಿಯಲ್ಲಿ ನೇಕಾರರ ಸೇವಾ ಸಂಘದ ಪ್ರೇಮಾನಂದ ಶೆಟ್ಟಿಗಾರ್, ದೇವರಾಯ ಶೆಟ್ಟಿಗಾರ್, ಕೇಶವ ಶೆಟ್ಟಿಗಾರ್, ವ್ಯವಸ್ಥಾಪಕ ನಿರ್ದೇಶಕ ದಿನೇಶ್ ಕುಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X