Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕರಡು ಮತದಾರರ ಪಟ್ಟಿ ಆ.24ಕ್ಕೆ ಪ್ರಕಟ:...

ಕರಡು ಮತದಾರರ ಪಟ್ಟಿ ಆ.24ಕ್ಕೆ ಪ್ರಕಟ: ಉಡುಪಿ ಡಿಸಿ ಸ್ವರೂಪ ಟಿ.ಕೆ.

ವಾರ್ತಾಭಾರತಿವಾರ್ತಾಭಾರತಿ19 Aug 2026 8:11 PM IST
share
ಕರಡು ಮತದಾರರ ಪಟ್ಟಿ ಆ.24ಕ್ಕೆ ಪ್ರಕಟ: ಉಡುಪಿ ಡಿಸಿ ಸ್ವರೂಪ ಟಿ.ಕೆ.

ಉಡುಪಿ, ಆ.19: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ 2026 (ಎಸ್‌ಐಆರ್)ಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ಆಗಸ್ಟ್ 24ರಂದು ಸೋಮವಾರ ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದ್ದಾರೆ.

ಬುಧವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ 2026ರ ಕರಡು ಮತದಾರರ ಪಟ್ಟಿ ಪ್ರಕಟಣೆ ಮತ್ತು ಪ್ರಕಟಣೆಯ ನಂತರದ ಚಟುವಟಿಕೆಗಳಿಗೆ ಸಂಬಂಧಿಸಿದಂತೆ, ನೋಂದಾಯಿತ ಹಾಗೂ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಪರಿಷ್ಕೃತ ಎಸ್‌ಐಆರ್-2026 ವೇಳಾಪಟ್ಟಿಯಂತೆ ಆ.17ಕ್ಕೆ ಎನ್ಯುಮರೇಷನ್ ನಮೂನೆಗಳನ್ನು ಮನೆಮನೆಗೆ ತೆರಳಿ ಸಂಗ್ರಹಿಸುವ ಪ್ರಕ್ರಿಯೆ ಪೂರ್ಣಗೊಂಡಿದ್ದು, ಆ.24ರಂದು ಬೆಳಿಗ್ಗೆ 11:00 ಗಂಟೆಗೆ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಹಾಗೂ ಪಟ್ಟಿ ಪ್ರಕಟಗೊಂಡ ನಂತರ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಗೆ ಒಂದು ಮುದ್ರಿತ ಪ್ರತಿ ಹಾಗೂ ಒಂದು ಸಾಫ್ಟ್ ಕಾಪಿ ಪಟ್ಟಿಯನ್ನು ನೀಡಲಾಗುವುದು ಎಂದರು.

ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಮೊದಲ ಹಂತ ಮುಗಿದಿದ್ದು, ಜಿಲ್ಲೆಯ ಒಟ್ಟು 10,63,876 ಮತದಾರರ ಪೈಕಿ 10,00,545 ಮತದಾರರ ಗಣತಿ ನಮೂನೆಯನ್ನು ಡಿಜಿಟಲೈಸ್ ಮಾಡಲಾ ಗಿದೆ. ಉಳಿದಂತೆ ಎಎಸ್‌ಡಿಡಿಒ ಪಟ್ಟಿಯಲ್ಲಿರುವ ಮೃತಪಟ್ಟ 21,262, ಶಾಶ್ವತವಾಗಿ ಸ್ಥಳಾಂತರಗೊಂಡ 29,361, ಗೈರು ಹಾಜರಾದ 4,145, ದ್ವಿಪ್ರತಿಯಲ್ಲಿ ಕಾರ್ಡ್ ಪಡೆದುಕೊಂಡ 8,374 ಹಾಗೂ ಇತರೆ 189 ಮಂದಿ ಮತದಾರರು ಸೇರಿದಂತೆ ಒಟ್ಟು 63,331 ಮತದಾರರು ವಿವಿಧ ಕಾರಣಗಳಿಂದ ಮತದಾರರ ಕರಡು ಪಟ್ಟಿಯಿಂದ ಹೊರಗುಳಿಯಲಿ ದ್ದಾರೆ ಎಂದರು.

ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಾದ್ಯಂತ ಒಟ್ಟು 10,63,876 ಮತದಾರರ ಪೈಕಿ 97,697 ಮತದಾರರು (ಶೇ. 9.18) ವಿಚಾರಣಾ ಹಂತಕ್ಕೆ ಒಳಪಡಲಿದ್ದಾರೆ ಹಾಗೂ ಇಆರ್‌ಒ/ಎಇಆರ್‌ಒ ಹಂತದಲ್ಲಿ ಕನಿಷ್ಠ 7 ದಿನಗಳ ಮುಂಚಿತವಾಗಿ ವಿಚಾರಣೆಯ ನೋಟೀಸ್ ಜಾರಿ ಮಾಡಲಾಗುತ್ತದೆ.

ಈ ಸಂಬಂಧ ಬಿಎಲ್‌ಒಗಳು ಮನೆ ಮನೆಗೆ ತೆರಳಿ ನೋಟೀಸ್ ತಲುಪಿಸಿ, ಸ್ವೀಕೃತಿ ಪಡೆದು, ಸ್ವೀಕರಿಸಿದವರ ಭಾವಚಿತ್ರದೊಂದಿಗೆ ಅವರ ಆ್ಯಪ್‌ನಲ್ಲಿ ಅದನ್ನು ಅಪ್ಲೋಡ್ ಮಾಡಲಿದ್ದಾರೆ. ನಿಗದಿಪಡಿಸಿದ ಸ್ಥಳಗಳಲ್ಲಿ ವಿಚಾರಣೆ ನಡೆಸಿ ಸೂಕ್ತ ದಾಖಲೆಗಳನ್ನು ಪರಿಶೀಲಿಸಿದ ನಂತರ ಇಆರ್‌ಒಗಳು ಪಟ್ಟಿಗೆ ಮರು ಸೇರ್ಪಡೆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳಾದ ಭಾರತೀಯ ಜನತಾ ಪಕ್ಷದ ಚಂದ್ರಶೇಖರ ಪ್ರಭು, ಜೆಡಿಎಸ್‌ನ ಜಯರಾಮ್ ಆಚಾರ್ಯ, ಕಾಂಗ್ರೆಸ್ ಪಕ್ಷದ ಬಿ. ವಿಜಯ ನಾಯರಿ, ಅಬ್ದುಲ್ ಅಝೀಜ್ ಮತ್ತಿತರರು ಉಪಸ್ಥಿತರಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X