Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನ. 24ರಂದು ಉಡುಪಿ ಜಿಲ್ಲಾ ಮಟ್ಟದ ಪಂಚ...

ನ. 24ರಂದು ಉಡುಪಿ ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ21 Nov 2026 8:05 PM IST
share
ನ. 24ರಂದು ಉಡುಪಿ ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಸಮಾವೇಶ

ಉಡುಪಿ, ನ.21: ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ ಸಂಭ್ರಮ ಹಾಗೂ ಫಲಾನುಭವಿಗಳೊಂದಿಗೆ ನೇರ ಸಂವಾದ ನಡೆಸುವ ನಿಟ್ಟಿನಲ್ಲಿ ನ.24ರ ಸೋಮವಾರ ಬೆಳಗ್ಗೆ ನಗರದ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮಾಹಿತಿ ಕಾರ್ಯಾಗಾರ ಹಾಗೂ ಫಲಾನುಭವಿಗಳ ಸಂಭ್ರಮೋತ್ಸವನ್ನು ಆಯೋಜಿಸಲಾಗಿದೆ ಎಂದು ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕಕುಮಾರ್ ಕೊಡವೂರು ತಿಳಿಸಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತ ಮಾಹಿತಿ ಗಳನ್ನು ಹಂಚಿಕೊಂಡ ಅವರು, ರಾಜ್ಯದ ಜನತೆಯ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ಶಕ್ತಿ, ಗೃಹ ಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳು ಲಕ್ಷಾಂತರ ಕುಟುಂಬಗಳಿಗೆ ಬದುಕಿನ ಆಸರೆಯಾಗಿದ್ದು, ಈ ಯೋಜನೆಗಳ ಪ್ರಯೋಜನ ಪಡೆದ ಜಿಲ್ಲೆಯ ಫಲಾನುಭವಿಗಳನ್ನು ಒಂದೆಡೆ ಸೇರಿಸಿ, ಯೋಜನೆಗಳ ಕುರಿತು ಸಮಗ್ರ ಮಾಹಿತಿ ನೀಡುವುದು ಈ ಸಮಾವೇಶದ ಉದ್ದೇಶವಾಗಿದೆ ಎಂದರು.

ಕಾರ್ಯಕ್ರಮವನ್ನು ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ರಿಝ್ವಾನ್ ಅರ್ಷದ್ ಉದ್ಘಾಟಿಸಲಿದ್ದು, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯಾಧ್ಯಕ್ಷ ಎಚ್.ಎಂ. ರೇವಣ್ಣ, ಉಪಾಧ್ಯಕ್ಷರಾದ ಪುಷ್ಪಾ ಅಮರನಾಥ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಇವರೊಂದಿಗೆ ಜಿಲ್ಲೆಯ ಸಂಸದರು, ಎಲ್ಲಾ ಶಾಸಕರು, ಜನಪ್ರತಿನಿಧಿ ಗಳು, ಜಿಲ್ಲಾ ಮತ್ತು ತಾಲೂಕು ಅನುಷ್ಠಾನ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರು, ಜಿಲ್ಲಾಧಿಕಾರಿ, ಸಿಇಒ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿರುವರು ಎಂದರು.

ದಿಕ್ಸೂಚಿ ಭಾಷಣ: ಜಿಲ್ಲಾ ಸಮಾವೇಶದಲ್ಲಿ ಖ್ಯಾತ ಚಿಂತಕರು, ಪತ್ರಕರ್ತರೂ ಆದ ಡಾ.ವಾಸು ಹಾಗೂ ವಿಧಾನ ಪರಿಷತ್‌ನ ಉಪಸಭಾಪತಿ ಮತ್ತು ಮಾಜಿ ಸಚಿವೆಯಾಗಿರುವ ಡಾ.ಉಮಾಶ್ರೀ ಅವರು ಪ್ರಧಾನ ಭಾಷಣಕಾರರಾಗಿ ಗ್ಯಾರಂಟಿ ಯೋಜನೆಗಳ ಸಾಮಾಜಿಕ ಹಾಗೂ ಆರ್ಥಿಕ ಪರಿಣಾಮಗಳ ಕುರಿತು ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದರು.

ಬೆಳಗ್ಗೆ 10:00ಗಂಟೆಗೆ ನಗರದ ಕೆಎಂ ಮಾರ್ಗದಲ್ಲಿರುವ ಮದರ್ ಆಫ್ ಸಾರೋಸ್ ಚರ್ಚ್ ಆವರಣದಿಂದ ಅತಿಥಿ ಗಳು ಹಾಗೂ ಇತರರು ಟ್ಯಾಬ್ಲೋ ಸಹಿತ ಮೆರವಣಿಗೆಯಲ್ಲಿ ಸಮಾವೇಶದ ಸ್ಥಳಕ್ಕೆ ಆಗಮಿಸಲಿದ್ದಾರೆ. ಉದ್ಘಾಟನಾ ಸಮಾರಂಭದ ಬಳಿಕ ಪಂಚ ಗ್ಯಾರಂಟಿ ಯೋಜನೆಗಳ ನಿಯಮಾವಳಿಗಳು, ಅರ್ಹತಾ ಮಾನದಂಡಗಳು, ಹೊಸ ಅರ್ಜಿ ಸಲ್ಲಿಕ್ಕೆ ಪ್ರಕ್ರಿಯೆ ಹಾಗೂ ತಾಂತ್ರಿಕ ಅಡಚಣೆಗಳ ನಿವಾರಣೆ ಕುರಿತು ಸಾರ್ವಜನಿಕರು ಹಾಗೂ ಗ್ರಾಮಮಟ್ಟದ ಪ್ರತಿನಿಧಿಗಳಿಗೆ ಕಾರ್ಯಾಗಾರದಲ್ಲಿ ಸಂಪೂರ್ಣ ಮಾಹಿತಿ ನೀಡಲಾಗುತ್ತದೆ.

ಸಮಾವೇಶದಲ್ಲಿ 7ರಿಂದ 8000 ಫಲಾನುಭವಿಗಳು ಸೇರಿದಂತೆ ಸುಮಾರು 10000 ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಕಾರ್ಯಕ್ರಮದಲ್ಲಿ ವಿವಿಧ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ, ಇದರಿಂದ ಸ್ವಾವಲಂಬಿ ಬದುಕು ಕಟ್ಟಿಕೊಂಡಿರುವವರ ಅನುಭವ ಹಾಗೂ ಅನಿಸಿಕೆಗಳನ್ನು ಹಂಚಿಕೊಳ್ಳಲು ಅವಕಾಶ ನೀಡಲಾ ಗುತ್ತದೆ. ಅಲ್ಲದೇ ವಿವಿಧ ಇಲಾಖೆಗಳಿಂದ ಗ್ಯಾರಂಟಿ ಯೋಜನೆಗಳ ಮಾಹಿತಿ ನೀಡುವ ಮಳಿಗೆಗಳೂ ಇರುತ್ತವೆ ಎಂದು ಕೊಡವೂರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಪ್ರಶಾಂತ್ ಜತ್ತನ್ನ, ಸತೀಶ್ ಜಪ್ತಿ, ಉಡುಪಿ ತಾಲೂಕು ಸಮಿತಿ ಅಧ್ಯಕ್ಷ ರಮೇಶ ಕಾಂಚನ್, ಬ್ರಹ್ಮಾವರ ತಾಲೂಕು ಸಮಿತಿ ಅಧ್ಯಕ್ಷೆ ಡಾ.ಸುನೀತಾ ಶೆಟ್ಟಿ, ಹೆಬ್ರಿ ಸಮಿತಿ ಅಧ್ಯಕ್ಷ ಶಂಕರ ದೇವಾಡಿಗ ಉಪಸ್ಥಿತರಿದ್ದರು.

ಗ್ಯಾರಂಟಿ ಯೋಜನೆ: ಜಿಲ್ಲಾ ಅಂಕಿಅಂಶ

ಉಡುಪಿ ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಇದುವರೆಗಿನ ಸಾಧನೆಗಳ ಅಂಕಿಅಂಶಗಳನ್ನು ಅಶೋಕ ಕುಮಾರ್ ಕೊಡವೂರು ನೀಡಿದರು. ಪಂಚ ಗ್ಯಾರಂಟಿ ಯೋಜನೆಗಳ ಅಡಿಯಲ್ಲಿ ಇದುವರೆಗೆ ಒಟ್ಟು 3,036.24 ಕೋಟಿ ರೂ. ಅನುದಾನ ಜಿಲ್ಲೆಯಲ್ಲಿ ಫಲಾನುಭವಿಗಳಿಗೆ ಹಂಚಿಕೆಯಾಗಿದೆ ಎಂದರು.

ಗೃಹಲಕ್ಷ್ಮಿ ಯೋಜನೆಯಡಿ 2,14,066 ಫಲಾನುಭವಿಗಳಿಗೆ ಒಟ್ಟು 1,579.81 ಕೋಟಿ ರೂ., ಗೃಹಜ್ಯೋತಿ ಯೋಜನೆ ಯಡಿ 3,31,768 ಫಲಾನುಭವಿಗಳಿಗೆ 809.87 ಕೋಟಿ ರೂ., ಅನ್ನಭಾಗ್ಯ ಯೋಜನೆಯಡಿ 8,24,049 ಫಲಾನುಭವಿಗಳಿಗೆ 427.37 ಕೋಟಿ ರೂ. ಯುವನಿಧಿ ಯೋಜನೆಯಡಿ 5,197 ಫಲಾನುಭವಿಗಳಿಗೆ 14.28 ಕೋಟಿ ರೂ. ಹಾಗೂ ಶಕ್ತಿ ಯೋಜನೆಯಡಿ 5,14,89,196 ಮಹಿಳಾ ಪ್ರಯಾಣಿಕರಿಗೆ 204.91 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ ಎಂದು ಕೊಡವೂರು ವಿವರಿಸಿದರು.

ಇದು ಸರಕಾರಿ ಕಾರ್ಯಕ್ರಮ; ಶಾಸಕರ ಆರೋಪಕ್ಕೆ ಉತ್ತರ

ನ.24ರಂದು ನಡೆಯುವ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶ ಸರಕಾರಿ ಕಾರ್ಯಕ್ರಮವಾಗಿದ್ದು, ಪಂಚ ಗ್ಯಾರಂಟಿ ಗಳ ಮೂಲಕ ಜನಪರ ಯೋಜನೆ ಯ ಲಾಭವನ್ನು ಜನಸಾಮಾನ್ಯರಿಗೆ ನೀಡಿದ ಸರಕಾರ, ಇದಕ್ಕಾಗಿ ಗ್ರಾಪಂನ ಅನುದಾನ ಬಳಸುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕಕುಮಾರ್ ಕೊಡವೂರು ಜಿಲ್ಲೆಯ ಬಿಜೆಪಿ ಶಾಸಕರ ಆಕ್ಷೇಪಗಳಿಗೆ ಸಮರ್ಥನೆ ನೀಡಿದರು.

ಇದೇನೂ ರಾಜಕೀಯ ಪ್ರೇರಿತ ಕಾರ್ಯಕ್ರಮವಲ್ಲ. ಯೋಜನೆಯ ಯಶಸ್ಸನ್ನು ಸಂಭ್ರಮಿಸುವ ಕಾರ್ಯಕ್ರಮ. ಗ್ರಾಪಂ ಅನುದಾನವನ್ನು ಬಳಸಿ ಟ್ರಸ್ಟ್‌ಗಳ ಮೂಲಕ ರಾಜಕೀಯ ಪ್ರಚಾರಕ್ಕಾಗಿ ಕಾರ್ಕಳ ಉತ್ಸವ, ಬೈಂದೂರು ಉತ್ಸವ, ಕಾಪು ಬೀಚ್ ಉತ್ಸವವನ್ನು ಆಯೋಜಿಸಿದ ಶಾಸಕರಿಗೆ ಈ ಕುರಿತು ಆಕ್ಷೇಪಿಸುವ ಅಧಿಕಾರವಿಲ್ಲ ಎಂದು ಅವರು ಹೇಳಿದರು.

ಗ್ಯಾರಂಟಿ ಸಮಾವೇಶದ ವೇಳೆ ನಾವು ಶಾಸಕರನ್ನು ಆಹ್ವಾನಿಸುವಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ. ಎಲ್ಲರನ್ನೂ ಕ್ರಮಬದ್ಧವಾಗಿ ಆಹ್ವಾನಿಸಿ ದ್ದೇವೆ. ಆದರೆ ಬಡವರ ಪರವಾಗಿರುವ ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಶಾಸಕರು ಸದಾ ಧ್ವೇಷ ಮನೋಭಾವವನ್ನು ಪ್ರದರ್ಶಿಸುತಿದ್ದಾರೆ ಎಂದು ಅವರು ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X