Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಣಿಪಾಲ: ಫೆ.26ರಿಂದ ನ್ಯಾನೋ...

ಮಣಿಪಾಲ: ಫೆ.26ರಿಂದ ನ್ಯಾನೋ ತಂತ್ರಜ್ಞಾನದ ಬಗ್ಗೆ ಅಂತಾರಾಷ್ಟ್ರೀಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ24 Feb 2024 8:26 PM IST
share
ಮಣಿಪಾಲ: ಫೆ.26ರಿಂದ ನ್ಯಾನೋ ತಂತ್ರಜ್ಞಾನದ ಬಗ್ಗೆ ಅಂತಾರಾಷ್ಟ್ರೀಯ ಸಮ್ಮೇಳನ

ಮಣಿಪಾಲ: ವಿಶ್ವದ ಪ್ರತಿಷ್ಠಿತ ನೇಚರ್ ರಿಸರ್ಚ್ ಗ್ರೂಪ್‌ನ ಸಹಯೋಗದೊಂದಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ಫೆ.26ರಿಂದ ಮಾ.1ರವರೆಗೆ ನ್ಯಾನೋ ತಂತ್ರಜ್ಞಾನದ ವಿವಿಧ ಸಂಶೋಧನೆಗೆ ಸಂಬಂಧಿ ಸಿದಂತೆ ಮೂರು ಅಂತಾರಾಷ್ಟ್ರೀಯ ಮಟ್ಟದ ಸಮ್ಮೇಳನವನ್ನು ಆಯೋಜಿಸಿದೆ ಎಂದು ಮಾಹೆ ವಿವಿಯ ಕುಲಪತಿ ಲೆ.ಜ.(ಡಾ.) ಎಂ.ಡಿ.ವೆಂಕಟೇಶ್ ತಿಳಿಸಿದ್ದಾರೆ.

ಮಾಹೆಯಲ್ಲಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನ್ಯಾನೋ ತಂತ್ರಜ್ಞಾನಕ್ಕೆ ಸಂಬಂಧಿಸಿದ ಸಂಶೋಧನೆಗೆ ಹೊಸ ದಿಕ್ಕನ್ನು ತೋರಿಸುವ ಗುರಿಯೊಂದಿಗೆ ಮಾಹೆ ನೇಚರ್ ಗ್ರೂಪ್ ಸಹಕಾರದಲ್ಲಿ ಐದು ದಿನಗಳ ಕಾಲ ಹಲವು ವೈಜ್ಞಾನಿಕ ಗೋಷ್ಠಿಗಳು, ಸಮಾವೇಶವನ್ನು ಆಯೋಜಿಸುತ್ತಿದೆ ಎಂದರು.

ಫೆ.26 ಮತ್ತು 27ರಂದು ಬಯೋಮೆಡಿಕಲ್ಸ್ ಅಪ್ಲಿಕೇಶನ್ಸ್‌ಗಳಲ್ಲಿ ನ್ಯಾನೋ ಮೆಟೀರಿಯಲ್ಸ್‌ಗಳ ಪಾತ್ರದ ಕುರಿತು ಎರಡು ದಿನಗಳ ಕಾಲ ಅಂತಾರಾಷ್ಟ್ರೀಯ ಮಟ್ಟದ ಸಮ್ಮೇಳನ ನಡೆಯಲಿದೆ. ನೋಬೆಲ್ ಪ್ರಶಸ್ತಿಗೆ ಸೂಚಿತರಾದ ವಿಜ್ಞಾನಿಗಳೂ ಸೇರಿದಂತೆ ವಿಶ್ವದ ಪ್ರಸಿದ್ಧ, ಖ್ಯಾತ ಸಂಶೋಧಕರು ಸೇರಿ 60ಕ್ಕೂ ಅಧಿಕ ಮಂದಿ ವಿಶೇಷಜ್ಞರು ಈ ಸಮ್ಮೇಳನದಲ್ಲಿ ಭಾಗವಹಿಸಿ ನ್ಯಾನೋತಂತ್ರಜ್ಞಾನ ಹಾಗೂ ಅದರ ಬಯೋಮೆಡಿಕಲ್ ಅಪ್ಲಿಕೇಶನ್ಸ್‌ಗಳಲ್ಲಿ ಆಗಿರುವ ಆಧುನಿಕ ಪ್ರಗತಿಯ ಕುರಿತು ಚರ್ಚಿಸಲಿದ್ದಾರೆ. ಎರಡು ದಿನಗಳ ಈ ಸಮ್ಮೇಳನ ಮಣಿಪಾಲದ ಫಾರ್ಚ್ಯೂನ್ ಇನ್ ಲ್ಯಾಲಿ ವ್ಯೆ ಹೊಟೇಲ್‌ನ ಚೈತ್ಯ ಹಾಲ್‌ನಲ್ಲಿ ನಡೆಯಲಿದೆ ಎಂದರು.

ಫೆ.28ರಂದು ವಿಶ್ವದ ಶ್ರೇಷ್ಠ ಮ್ಯಾಗಝೀನ್‌ಗಳ ಸಾಲಿಗೆ ಸೇರುವ ‘ನೇಚರ್’ ನಿಯತಕಾಲಿಕವನ್ನು ಪ್ರಕಟಿಸುವ ನೇಚರ್ ಗ್ರೂಪ್‌ನಿಂದ ನೇಚರ್ ಮಾಸ್ಟರ್‌ಕ್ಲಾಸ್ ಕಾರ್ಯಾಗಾರ ನಡೆಯಲಿದೆ. ಇದರಲ್ಲಿ ಉದಯೋನ್ಮುಖ ಸಂಶೋಧಕರಿಗೆ ವಿಶೇಷ ಕಾರ್ಯಾಗಾರವನ್ನು ನೇಚರ್ ಪೋರ್ಟ್‌ಪೊಲಿಯೊ ದಲ್ಲಿ ಸಂಪಾದಕೀಯ ಅಭಿವೃದ್ಧಿ ವ್ಯವಸ್ಥಾಪಕರಾಗಿರುವ ಡಾ. ಹ್ಯಾರಿ ಶೆರ್ಲಿ ಅವರ ನೇತೃತ್ವದಲ್ಲಿ ನಡೆಯಲಿದೆ. ಸಂಶೋಧನೆಯ ವಿವಿಧ ಮುಖಗಳು, ಅವುಗಳ ವರದಿಗಳನ್ನು ವೈಜ್ಞಾನಿಕ ರೀತಿಯಲ್ಲಿ ಪರಿಣಾಮಕಾರಿಯಾಗಿ ಪ್ರಸ್ತುತ ಪಡಿಸುವ ಕುರಿತು ಕಾರ್ಯಾಗಾರದಲ್ಲಿ ಮಾಹಿತಿಗಳನ್ನು ನೀಡಲಾಗುವುದು ಎಂದು ಡಾ.ವೆಂಕಟೇಶ್ ತಿಳಿಸಿದರು.

ಫೆ.29ರಿಂದ ಮಾ.1ರವರೆಗೆ ಮಾಹೆ ಕೆಎಂಸಿಯ ಡಾ.ಟಿಎಂಎ ಪೈ ಹಾಲ್ ನಲ್ಲಿ ‘ನ್ಯಾನೋ ವಿಜ್ಞಾನ ಹಾಗೂ ನ್ಯಾನೋ ತಂತ್ರಜ್ಞಾನ’ದ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನ ನಡೆಯಲಿದೆ. ಇಂಜಿನಿಯರಿಂಗ್ ಸೇರಿದಂತೆ ಮೆಡಿಕಲ್ ಹಾಗೂ ಇತರ ಕ್ಷೇತ್ರಗಳಲ್ಲೂ ಅಸಾಧಾರಣ ಪ್ರಗತಿಗೆ ಕಾರಣ ವಾಗಿರುವ ನ್ಯಾನೋ ಕ್ಷೇತ್ರದ ಇತ್ತೀಚಿನ ಬೆಳವಣಿಗೆ ಕುರಿತು ಸಂಶೋಧಕರು, ವೈದ್ಯರು, ತಂತ್ರಜ್ಞರು, ಶಿಕ್ಷಣತಜ್ಞರು ಇದರಲ್ಲಿ ವಿಚಾರವಿನಿಮಯ ಮಾಡಿಕೊಳ್ಳಲಿದ್ದಾರೆ ಎಂದರು. ದೇಶ-ವಿದೇಶಗಳ 300ಕ್ಕೂ ಅಧಿಕ ವಿಷಯ ತಜ್ಞರು, ಸಂಶೋಧಕರು ಇದರಲ್ಲಿ ಪಾಲ್ಗೊಳಲಿದ್ದಾರೆ ಎಂದು ಅವರು ವಿವರಿಸಿದರು.

ನೇಚರ್ ಗ್ರೂಪ್ ಭಾರತದಲ್ಲಿ ಮೊದಲ ಬಾರಿಗೆ ಮಾಹೆ ವಿವಿಯೊಂದಿಗೆ ಸೇರಿ ಸಂಶೋಧನೆಯ ಕುರಿತು ಹಾಗೂ ನ್ಯಾನೋ ತಂತ್ರಜ್ಞಾನದ ಕುರಿತು ಅಂತಾರಾಷ್ಟ್ರೀಯ ಮಟ್ಟದ ಸಮ್ಮೇಳನದಲ್ಲಿ ಭಾಗಿಯಾಗುತ್ತಿದೆ ಎಂದು ಮಾಹೆ ಕುಲಪತಿಗಳು ಹರ್ಷ ವ್ಯಕ್ತಪಡಿಸಿದರು.

ಮಾಹೆಯ ಸಹಕುಲಪತಿ (ಆರೋಗ್ಯ ವಿಜ್ಞಾನ) ಡಾ.ಶರತ್ ಕುಮಾರ್ ಕೆ., ಸಹಕುಲಪತಿ (ತಂತ್ರಜ್ಞಾನ ಮತ್ತು ವಿಜ್ಞಾನ) ಡಾ.ನಾರಾಯಣ ಸಭಾಹಿತ್, ಮತ್ತೊಬ್ಬ ಸಹಕುಲಪತಿ (ಯೋಜನೆ ಮತ್ತು ಕಾರ್ಯತಂತ್ರ) ಡಾ.ಎನ್.ಎನ್.ಶರ್ಮ, ಡಾ.ಸತೀಶ್ ರಾವ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X