Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶಶಿರಾಜ್ ಕಾವೂರುಗೆ ಸಿಜಿಕೆ ರಂಗ...

ಶಶಿರಾಜ್ ಕಾವೂರುಗೆ ಸಿಜಿಕೆ ರಂಗ ಪುರಸ್ಕಾರ: ಜೂ.27ರಂದು ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ26 Jun 2024 9:51 PM IST
share
ಶಶಿರಾಜ್ ಕಾವೂರುಗೆ ಸಿಜಿಕೆ ರಂಗ ಪುರಸ್ಕಾರ: ಜೂ.27ರಂದು ಪ್ರಶಸ್ತಿ ಪ್ರದಾನ

ಉಡುಪಿ, ಜೂ.26: ನಮ ತುಳುವೆರ್ ಕಲಾ ಸಂಘಟನೆ ಮತ್ತು ಕರ್ನಾಟಕ ಬೀದಿ ನಾಟಕ ಅಕಾಡೆಮಿ ನೀಡುವ ಪ್ರತಿಷ್ಠಿತ ‘ಸಿಜಿಕೆ ರಂಗ ಪುರಸ್ಕಾರ- -2024’ಕ್ಕೆ ಮಂಗಳೂರಿನ ನಾಟಕಕಾರ, ನಿರ್ದೇಶಕ, ಸಂಘಟಕ ಶಶಿರಾಜ್ ಕಾವೂರು ಆಯ್ಕೆಯಾಗಿದ್ದಾರೆ.

ವೃತ್ತಿಯಲ್ಲಿ ನ್ಯಾಯವಾದಿಯಾಗಿರುವ ಶಶಿರಾಜ್, ಪ್ರವೃತ್ತಿಯಲ್ಲಿ ನಾಟಕಕಾರ, ನಟ, ಸಂಘಟಕ ಮತ್ತು ಗೀತರಚನೆಕಾರ. ಬರೆದ ನಾಟಕಗಳು- ಏಕಾದಶಾನನ, ಬರ್ಬರೀಕ, ನೆಮ್ಮದಿ ಅಪಾರ್ಟ್‌ಮೆಂಟ್ ಫ್ಲಾಟ್ ನಂಬರ್ 252, ಐಸಿಯು, ಸರದಾರನ ಸ್ವಗತ, ಸಂಪಿಗೆನಗರ ಪೋಲೀಸ್ ಸ್ಟೇಶನ್, ದಾಟ್ಸ್ ಆಲ್ ಯುವರ್ ಆನರ್, ಮಿನುಗೆಲೆ ಮಿನುಗೆಲೆ ನಕ್ಷತ್ರ, ವ್ಯೆಹ, ಮರಗಿಡಬಳ್ಳಿ, ಪರಶುರಾಮ, ಛತ್ರಪತಿ ಶಿವಾಜಿ, ನೆಮ್ಮದಿ ಅಪಾರ್ಟ್‌ಮೆಂಟ್ ಬ್ಲಾಕ್ ಬಿ ಇತ್ಯಾದಿ.

ಪೊಸ ಒಸರ್, ಪರ್‌ಂದ್ ಪೆಲಕಾಯಿ, ಬರ್ಬರೀಕ, ಪಿಲಿತ ಪಂಜ, ಬಿಂಬದುಲಾಯಿದ ಬಿಂಬ, ಮಾಲೆ ಪಟಾಕಿ, ಪುದ್ದು ಕೊಡ್ತರ್ ಇತ್ಯಾದಿ ತುಳು ಪುಸ್ತಕಗಳು.

ಧಾರವಾಡದ ದ.ರಾ.ಬೇಂದ್ರೆ ಪ್ರಶಸ್ತಿ, ಫ.ಶಿ.ಭಾಂಡಗೆ ಪ್ರಶಸ್ತಿ, ರಂಗಭೂಮಿ ನಾಟಕ ರಚನಾ ಪ್ರಶಸ್ತಿ, ಎರಡು ಸಲ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಎರಡು ಸಲ ರತ್ನವರ್ಮ ಹೆಗ್ಗಡೆ ನಾಟಕ ರಚನಾ ಪ್ರಶಸ್ತಿ ಇತ್ಯಾದಿಗಳು ಇವರು ಪಡೆದ ಪ್ರಶಸ್ತಿಗಳು ಎಂದು ನಮ ತುಳುವೆರ್ ಕಲಾ ಸಂಘಟನೆ ಅಧ್ಯಕ್ಷ ಸುಕುಮಾರ್ ಮೋಹನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂ. 27ರಂದು ಸಂಜೆ 6ಗಂಟೆಗೆ ಉಡುಪಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯುವ ಸಿಜಿಕೆ ಬೀದಿ ರಂಗ ದಿನ ಕಾರ್ಯಕ್ರಮದಲ್ಲಿ ಸಿಜಿಕೆ ರಂಗ ಪುರಸ್ಕಾರ ಪ್ರದಾನ ನಡೆಯಲಿದೆ. ಕಾರ್ಯಕ್ರಮದ ಕೊನೆಗೆ ಮುದ್ರಾಡಿ ತಂಡದಿಂದ ಗುರುರಾಜ ಮಾರ್ಪಳ್ಳಿ ನಿರ್ದೇಶನದಲ್ಲಿ ‘ಅವ್ವ ನನ್ನವ್ವ’ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X