ಫೆ. 27ರಂದು ಉಪನ್ಯಾಸ ಕಾರ್ಯಕ್ರಮ
ಉಡುಪಿ, ಫೆ.25:ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರಿಂದ ನಗರದ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ ಅರಿವಿನ ಬೆಳಕು ಉಪನ್ಯಾಸ ಮಾಲೆ-3 ಕಾರ್ಯಕ್ರಮವು ಫೆ.27ರಂದು ಅಪರಾಹ್ನ 3:00 ಗಂಟೆಗೆ ಕಡೆಕಾರಿನ ಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಶ್ರೀಧರ್ ಪ್ರಸಾದ್ ಉದ್ಘಾಟಿಸಲಿದ್ದು, ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಬಾರ್ಕೂರಿನ ರುಕ್ಮಿಣಿ ಶೆಡ್ತಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಇಂಗ್ಲೀಷ್ ವಿಭಾಗದ ಮುಖ್ಯಸ್ಥ ಡಾ.ಪ್ರಸಾದ್ ರಾವ್ ಎಂ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





