Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯ 2870 ಹಿರಿಯ ನಾಗರಿಕರ...

ಉಡುಪಿ ಜಿಲ್ಲೆಯ 2870 ಹಿರಿಯ ನಾಗರಿಕರ ಮನೆಗೆ ಬೀಟ್ ಪೊಲೀಸರ ಭೇಟಿ: ಡಿಸಿ ಸ್ವರೂಪ ಟಿ.ಕೆ

ವಾರ್ತಾಭಾರತಿವಾರ್ತಾಭಾರತಿ6 Oct 2026 8:57 PM IST
share
ಉಡುಪಿ ಜಿಲ್ಲೆಯ 2870 ಹಿರಿಯ ನಾಗರಿಕರ ಮನೆಗೆ ಬೀಟ್ ಪೊಲೀಸರ ಭೇಟಿ: ಡಿಸಿ ಸ್ವರೂಪ ಟಿ.ಕೆ

ಉಡುಪಿ, ಅ.6: ಜಿಲ್ಲೆಯ ಪ್ರತಿಯೊಂದು ಪೊಲೀಸ್ ಠಾಣೆಯ ವ್ಯಾಪ್ತಿ ಯೊಳಗೆ ವಾಸಿಸುತ್ತಿರುವ ಹಿರಿಯ ನಾಗರಿಕರು ಹಾಗೂ ಅದರಲ್ಲೂ ವಿಶೇಷವಾಗಿ ಒಂಟಿಯಾಗಿ ವಾಸಿಸುತ್ತಿರುವವರು ಸೇರಿದಂತೆ 2870 (ಪರಿಷ್ಕೃತ ಪಟ್ಟಿ) ಮಂದಿ ಮನೆಗೆ ವಾರದಲ್ಲಿ ಒಮ್ಮೆ ಬೀಟ್ ಪೊಲೀಸರು ಭೇಟಿ ನೀಡಿ ಅವರ ಯೋಗಕ್ಷೇಮವನ್ನು ವಿಚಾರಿಸಲಾಗುತ್ತಿದೆ. ಹಿರಿಯ ನಾಗರಿಕರ ಸಮಸ್ಯೆಗಳಿಗೆ ಸ್ಥಳೀಯ ಪೊಲೀಸರು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸಲಹೆ ನೀಡಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಪಾಲಕರ ಪೋಷಣೆ, ಸಂರಕ್ಷಣೆ ಮತ್ತು ಹಿರಿಯ ನಾಗರಿಕರ ರಕ್ಷಣಾ ಕಾಯಿದೆ 2007ರಡಿ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಸರಕಾರಿ ಆಸ್ಪತ್ರೆಗಳು ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಹಿರಿಯ ನಾಗರಿಕರಿಗೆ ಆದ್ಯತೆಯ ಮೇಲೆ ಅವರಿಗೆ ಅಗತ್ಯ ವಿರುವ ಚಿಕಿತ್ಸೆಗಳನ್ನು ನೀಡಬೇಕು. ಜೊತೆಯಲ್ಲಿ ಬೆಡ್‌ಗಳನ್ನು ಸಹ ಹಿರಿಯ ನಾಗರಿಕರಿಗೆ ಕಾಯ್ದಿರಿಸಬೇಕು. ಜಿಲ್ಲೆಯ ಆಸ್ಪತ್ರೆಗಳಲ್ಲಿ ಹಿರಿಯ ನಾಗರಿಕರಿಗೆ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ ಎಂಬ ದೂರುಗಳು ಅಲ್ಲಲ್ಲಿ ಕೇಳಿ ಬರುತ್ತಿವೆ. ಇದು ಸರಿಯಲ್ಲ. ಇಂಥ ದೂರುಗಳಿಗೆ ಅವಕಾಶ ನೀಡಬಾರದು. ಇಲ್ಲ-ಸಲ್ಲದ ಕಾರಣ ನೀಡಿ, ಕೆಲವೊಂದು ಚಿಕಿತ್ಸೆಗಳು ನೀಡಲಾಗುವುದಿಲ್ಲ ಎಂದು ಹೇಳದೇ ಅವರಿಗೆ ಎಲ್ಲಾ ರೀತಿಯ ಚಿಕಿತ್ಸೆಗೆ ಸ್ಪಂದಿಸಬೇಕು ಎಂದು ಡಿಸಿ ಸೂಚನೆ ನೀಡಿದರು.

ಸರಕಾರ ಹಿರಿಯ ನಾಗರಿಕರ ಸುರಕ್ಷತೆ, ಘನತೆ ಮತ್ತು ಉತ್ಪಾದಕ ಜೀವನ ನಡೆಸಲು ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ ಕಾಯಿದೆ ಹಾಗೂ ಕಾರ್ಯಕ್ರಮ ಗಳನ್ನು ಜಾರಿಗೆ ತಂದಿದೆ. ಇದನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಮಕ್ಕಳಿಗೆ ಜೈಲು ಶಿಕ್ಷೆ: ಹಿರಿಯ ನಾಗರಿಕರ ನಿರ್ವಹಣೆ ಹಾಗೂ ರಕ್ಷಣೆ ಕಾಯ್ದೆಯನ್ವಯ ಹಿರಿಯ ನಾಗರಿಕರ ಮಕ್ಕಳು ಹಿರಿಯ ನಾಗರಿಕರನ್ನು ನಿರ್ಲಕ್ಷಿಸುವುದು, ತ್ಯಜಿಸುವುದು ಕಂಡುಬಂದಲ್ಲಿ ಅಂತಹ ಮಕ್ಕಳು ಹಾಗೂ ಪೋಷಕರಿಗೆ ಮೂರು ತಿಂಗಳ ಜೈಲು ವಾಸ ಹಾಗೂ 5,000 ದಂಡ ವಿಧಿಸಲು ಅವಕಾಶವಿದೆ ಎಂದ ಅವರು, ಪಾಲನೆ ಪೋಷಣೆಗೆ ಅರ್ಜಿಗಳು ಹಾಗೂ ಆಸ್ತಿ ಸಂರಕ್ಷಣೆ ಅರ್ಜಿಗಳು ನ್ಯಾಯಾಧೀಕರಣದ ಮುಂದೆ ಬಂದಾಗ ಸಕಾಲದಲ್ಲಿ ನ್ಯಾಯ ಸಮ್ಮತವಾಗಿ ವಿಲೇವಾರಿ ಮಾಡಿ, ನ್ಯಾಯ ಒದಗಿಸಿಕೊಡಬೇಕು ಎಂದರು.

ಹಿರಿಯ ನಾಗರಿಕರು ತಮ್ಮ ಸ್ವಯಾರ್ಜಿತ ಆಸ್ತಿಗಳನ್ನು ಮಕ್ಕಳು, ಸಂಬಂಧಿಕರಿಗೆ ದಾನಪತ್ರದ ಮೂಲಕ ಅವರಿಗೆ ವರ್ಗಾಯಿಸಿ, ಸದರಿ ವ್ಯಕ್ತಿಗಳು ಹಿರಿಯ ನಾಗರಿಕರನ್ನು ಪಾಲನೆ ಮಾಡದೇ ಇರಬಹುದು. ಕೆಲವೊಮ್ಮೆ ಮೋಸ ದಿಂದಲೂ ಸಹ ದಾಖಲೆಗಳನ್ನು ವಶಪಡಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಇಂತಹ ಸಂದರ್ಭದಲ್ಲಿ ದಸ್ತಾವೇಜು ಗಳನ್ನು ಅಸಿಂಧು ಎಂದು ಘೋಷಿಸಿ, ರದ್ದುಪಡಿಸಲು ಕಾನೂನಿನಲ್ಲಿ ಅವಕಾಶವಿದೆ. ಈ ಬಗ್ಗೆ ಹಿರಿಯ ನಾಗರಿಕರಿಗೆ ಮಾಹಿತಿ ನೀಡಿ ಅರಿವು ಮೂಡಿಸಬೇಕು ಎಂದರು.

ಸರಕಾರ ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ ಜಾರಿಗೆ ತಂದಿರುವ ಯೋಜನೆ ಗಳು, ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು. ಶಾಲಾ- ಕಾಲೇಜುಗಳಲ್ಲಿ ಹಿರಿಯರು ಹಾಗೂ ಕಿರಿಯರ ನಡುವಿನ ಬಾಂಧವ್ಯ, ಹಿರಿಯರ ಬಗ್ಗೆ ಉತ್ತಮ ಮೌಲ್ಯ ಕುರಿತಂತೆ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೃದ್ಧಾಶ್ರಮಗಳು ಸರಕಾರದ ಮಾರ್ಗಸೂಚಿಗಳು ಹಾಗೂ ಆದೇಶಗಳನ್ನು ಪಾಲಿಸಬೇಕು. ಈ ಬಗ್ಗೆ ಅಧಿಕಾರಿಗಳು ಆಗಿಂದಾಗ್ಗೆ ಪರೀಕ್ಷಣೆ ಹಾಗೂ ಮೇಲ್ವಿಚಾರಣೆ ಮಾಡಬೇಕು. ಹಿರಿಯ ನಾಗರಿಕರ ಸಹಾಯವಾಣಿ ಸಂಖ್ಯೆ 1090ಕ್ಕೆ ಸಹಾಯ ಕೋರಿ ಹಿರಿಯ ನಾಗರಿಕರಿಂದ ಕರೆಗಳು ಬಂದಾಗ ಅವುಗಳಿಗೆ ಕೇಂದ್ರದ ಸಿಬ್ಬಂದಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು. ಯಾವ ಪ್ರಕರಣಗಳ ಬಗ್ಗೆ ಹೆಚ್ಚು ದೂರು ಗಳು ದಾಖಲಾಗುತ್ತಿವೆ ಎಂದು ಪರಿಶೀಲಿಸಿ, ಆ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಬೇಕು ಎಂದರು.

ಜಿಲ್ಲೆಯಲ್ಲಿ ಹಗಲು ಯೋಗಕ್ಷೇಮ ಕೇಂದ್ರ ಪ್ರಾರಂಭಿಸಲು ಬಂದಿರುವ ಪ್ರಸ್ತಾವನೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿ, ಸಾಕಷ್ಟು ಜಾಗ, ಅಗತ್ಯ ಮೂಲಭೂತ ಸೌಕರ್ಯ, ಸಿಬ್ಬಂದಿ, ಶುಶ್ರೂಷಕರು, ವೈದ್ಯರು ಸೇರಿದಂತೆ ಹಿರಿಯ ನಾಗರಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಪ್ರಾರಂಭಿಸು ವವರಿಗೆ ಅನುಮತಿ ನೀಡಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಸಹಾಯಕ ಕಮಿಷನರ್ ರಶ್ಮಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರೇಮಮೂರ್ತಿ ಕೆ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಡಿಹೆಚ್‌ಓ ಡಾ. ಬಸವರಾಜ್ ಹುಬ್ಬಳ್ಳಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X