ಸದ್ಯದಲ್ಲೇ ಭಾರತ 3ನೇ ಅತೀ ದೊಡ್ಡ ಆರ್ಥಿಕ ಶಕ್ತಿಯಾಗಲಿದೆ: ಸಚಿವ ಪ್ರಹ್ಲಾದ್ ಜೋಶಿ

ಉಡುಪಿ, ಮಾ.15: 2014ರ ಮೊದಲು ದುರ್ಬಲ ಆರ್ಥಿಕ ವ್ಯವಸ್ಥೆ ಹೊಂದಿದ್ದ ಭಾರತ ಇಂದು ಜಗತ್ತಿನ ಐದನೇ ಅತೀ ದೊಡ್ಡ ಆರ್ಥಿಕ ಶಕ್ತಿ ಹೊಂದಿರುವ ದೇಶವಾಗಿ ಬೆಳೆದಿದೆ. ಸದ್ಯದಲ್ಲೇ ಭಾರತ ಜಗತ್ತಿನ ಮೂರನೇ ಅತೀ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಶನಿವಾರ ಭೇಟಿ ನೀಡಿ, ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ರೊಂದಿಗೆ ಸಂವಾದ ನಡೆಸಿ ಅವರು ಮಾತುನಾಡುತಿದ್ದರು.
ಸರಕಾರ ದೇಶದ 500 ಕಂಪೆನಿಗಳನ್ನು ಗುರುತಿಸಿ, ಅಲ್ಲಿ ಯುವಜನತೆಗೆ ತರಬೇತಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಯುವಜನತೆಗೆ ಸರಕಾರ ಮತ್ತು ಕಂಪೆನಿಗಳು ಸ್ಟ್ರೈಫಂಡ್ ಗಳನ್ನು ನೀಡುತ್ತವೆ. ಈ ಮೂಲಕ ನಾವು ಇಡೀ ಜಗತ್ತಿಗೆ ಸಂಪನ್ಮೂಲಗಳನ್ನು ಒದಗಿಸಲು ಈಗಲೇ ಸಿದ್ಧರಾಗು ತ್ತಿದ್ದೇವೆ ಎಂದು ಅವರು ತಿಳಿಸಿದರು.
ವೇದಿಕೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕೊಡ್ಗಿ, ಯಶ್‌ಪಾಲ್ ಸುವರ್ಣ, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಮುಖಂಡ ರಾದ ಉದಯ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಖಈ ಸಂದರ್ಭದಲ್ಲಿ ಸಚಿವರನ್ನು ಗೌರವಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಸ್ವಾಗತಿಸಿದರು. ರೇಷ್ಮಾ ಉದಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.







