Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಿಶ್ವ ಕುಂದಾಪ್ರ ಕನ್ನಡ ದಿನದ ಪ್ರಯುಕ್ತ...

ವಿಶ್ವ ಕುಂದಾಪ್ರ ಕನ್ನಡ ದಿನದ ಪ್ರಯುಕ್ತ ಆ.3ರಂದು ಬೈಂದೂರಿನಲ್ಲಿ ಗ್ರಾಮೀಣ, ಕೆಸರುಗದ್ದೆ ಕೂಟದ ‘ಗಮ್ಮತ್ತ್’

ವಾರ್ತಾಭಾರತಿವಾರ್ತಾಭಾರತಿ31 July 2025 10:18 PM IST
share
ವಿಶ್ವ ಕುಂದಾಪ್ರ ಕನ್ನಡ ದಿನದ ಪ್ರಯುಕ್ತ ಆ.3ರಂದು ಬೈಂದೂರಿನಲ್ಲಿ ಗ್ರಾಮೀಣ, ಕೆಸರುಗದ್ದೆ ಕೂಟದ ‘ಗಮ್ಮತ್ತ್’

ಬೈಂದೂರು, ಜು.31: ಕುಂದಾಪ್ರ ಕನ್ನಡ ಭಾಷೆಯ ಬಗೆಗಿನ ಅಭಿಮಾನ ಹಾಗೂ ಗ್ರಾಮೀಣ ಸಂಸ್ಕೃತಿ ಸೊಗಡನ್ನು ಅನಾವರಣಗೊಳಿಸುವ ಉದ್ದೇಶದೊಂದಿಗೆ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಗ್ರಾಮೀಣ ಹಾಗೂ ಕೆಸರುಗದ್ದೆ ಕ್ರೀಡಾಕೂಟ ‘ಗಮ್ಮತ್ತ್’ನ್ನು ಆಗಸ್ಟ್ 3ರ ರವಿವಾರ ಬೆಳಿಗ್ಗೆ 9ರಿಂದ ಬೈಂದೂರು ಯಡ್ತರೆಯ ನೆಲ್ಯಾಡಿ ಬೈಲ್ ಹಾಗೂ ಜೆಎನ್‌ಆರ್ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ಅಧ್ಯಕ್ಷ ಶರತ್ ಶೆಟ್ಟಿ ಉಪ್ಪುಂದ ತಿಳಿಸಿದ್ದಾರೆ.

ಬೈಂದೂರಿನಲ್ಲಿ ಗುರುವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾನ ಮನಸ್ಕರ ತಂಡ ಒಂದುಗೂಡಿ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ಮೂಲಕ ಕಳೆ ದೊಂದು ವರ್ಷದಿಂದ ಅದ್ದೂರಿ ಕಾರ್ಯಕ್ರಮ ಆಯೋಜಿಸುತ್ತಾ ಬಂದಿದ್ದು, ಜನರಿಂದಲೂ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಲಾ ಗಿದ್ದು, ವಿಜೇತರಿಗೆ ನಗದು ಬಹುಮಾನ, ಪದಕ, ಪ್ರಶಸ್ತಿ ಪತ್ರಗಳನ್ನು ನೀಡಲಾಗುತ್ತಿದೆ ಎಂದರು.

ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು: ಪುರುಷರಿಗೆ ಹಗ್ಗಜಗ್ಗಾಟ, ವಾಲಿಬಾಲ್, ಕಬಡ್ಡಿ, ಕೆಸರುಗದ್ದೆ ಓಟ, ಅಡಿಕೆ ಹಾಳಿಯಲ್ಲಿ ಕೂರಿಸಿ ಎಳೆಯುವುದು, ಬೀಸ್ ಬಲಿ ಬೀಸುದ್, ಚಿಟ್ ಬಿಲ್ ಶೂಟಿಂಗ್, ಅಪ್ಪ -ಮಗು ಉಪ್ಪು ಮೂಟೆ, ಚನ್ನೆಮಣೆ, ಸಾಂಪ್ರದಾಯಿಕ ಗೀತಗಾಯನ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.

ಮಹಿಳೆಯರಿಗೆ ಹಗ್ಗಜಗ್ಗಾಟ, ಥ್ರೋಬಾಲ್, ಕೆಸರ್‌ಗದ್ದೆ ಓಟ, ಅಡಿಕೆ ಹಾಳಿಯಲ್ಲಿ ಕೂರಿಸಿ ಎಳೆಯುವುದು, ಮಡ್ಲ್ ನೇಯುವುದು, ಗುಡ್ನ ಆಟ, ಚನ್ನೆಮಣೆ ಆಟ, ಅಮ್ಮ- ಮಗು ಉಪ್ಪು ಮೂಟೆ, ಕೊಟ್ಟಿ ಸೆಟ್ಟುದ್, ಹೂಮಾಲೆ ಕಟ್ಟುವುದು, ಸಾಂಪ್ರದಾಯಿಕ ಗೀತಗಾಯನ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಮಕ್ಕಳಿಗೆ ಕೆಸರ್ ಗದ್ದೆ ಓಟ (1-7ನೇ ತರಗತಿ 8-12ನೇ ತರಗತಿ ವಿಭಾಗ), ಬೆನ್ ಚೆಂಡ್ ಆಟ (8 - 12ನೇ ತರಗತಿ), ಅಡಿಕೆ ಹಾಳಿಯಲ್ಲಿ ಕೂರಿಸಿ ಎಳೆಯುವುದು, ಲಿಂಬೆ ಚಮಚ ಓಟ (1-7ನೇ ತರಗತಿ 8-12ನೇ ತರಗತಿ ವಿಭಾಗ), ಗೂಟಕ್ಕೆ ಸುತ್ತಿ ಓಡುವುದು (8-12ನೇ ತರಗತಿ), ಚಿತ್ರಕಲಾ ಸ್ಪರ್ಧೆ (ಎಲ್.ಕೆ.ಜಿ -4ನೇ ತರಗತಿ, 5 -7ನೇ ತರಗತಿ, 8 -10ನೇ ತರಗತಿ ವಿಭಾಗ), ಕುಂದಾಪ್ರ ಕನ್ನಡ ಭಾಷಣ ಸ್ಪರ್ಧೆ (6-10ನೇ ತರಗತಿ) ಛದ್ಮವೇಷ ಸ್ಪರ್ಧೆ (ಎಲ್.ಕೆ.ಜಿಯಿಂದ - 7ನೇ ತರಗತಿ) ಆಯೋಜಿಸಲಾಗಿದೆ. ತೆಂಗಿನ ಚ್ವಾಂಗಿಯಿಂದ ಮಾದರಿ ತಯಾರಿ, ರಸಪ್ರಶ್ನೆ ಸ್ಪರ್ಧೆಗಳು ಮುಕ್ತ ವಿಭಾಗದಲ್ಲಿ ನಡೆಯಲಿದೆ. ಸಾರ್ವಜನಿಕರು ಎಲ್ಲಾ ಸ್ಪರ್ಧೆಗಳಲ್ಲಿ ಉಚಿತವಾಗಿ ನೊಂದಣಿಯೊಂದಿಗೆ ಭಾಗವಹಿಸಬಹುದು.

ಆ.3ರ ಬೆಳಿಗ್ಗೆ 9ಕ್ಕೆ ರಾಹುತನಕಟ್ಟೆಯಿಂದ ಜೆಎನ್‌ಆರ್ ಹಾಲ್ ತನಕ ವೈಭವದ ಮೆರವಣಿಗೆ ಇರಲಿದ್ದು, ಕಂಬಳ ಕೋಣಗಳು, ಭಜನಾ ತಂಡಗಳು, ಎತ್ತಿನಗಾಡಿ, ಯಕ್ಷಗಾನ ವೈಭವ, 2 ಚಂಡೆ ತಂಡಗಳು ಮೆರವಣಿಗೆ ಸೊಬಗು ಹೆಚ್ಚಿಸಲಿದೆ. ಕಂಬಳ ಕ್ಷೇತ್ರದ ದಿಗ್ಗಜ ದಿ. ವೆಂಕಟ ಪೂಜಾರಿ ನೆನಪಿನಲ್ಲಿ ಈ ಭಾರಿ ಕಂಬಳವನ್ನು ಆಯೋಜಿಸಲಾಗಿದೆ. ಬೆಳಗಿನಿಂದ 35 ಜೊತೆ ಕಂಬಳ ಕೋಣಗಳ ಆಕರ್ಷಕ ಓಟ ಇರಲಿದೆ.

ಇದರೊಂದಿಗೆ ಹಳೆ ಕಾಲದ ವಸ್ತು ಪ್ರದರ್ಶನ, ವಿವಿಧ ತಿನಿಸುಗಳ ಅಂಗಡಿ ಗಳು, ಸಿನಿ ತಾರೆಯರು, ವಿವಿಧ ಕ್ಷೇತ್ರಗಳ ಗಣ್ಯರ ಉಪಸ್ಥಿತಿ, ಮನು ಹಂದಾಡಿ, ಚೇತನ್ ನೈಲಾಡಿ ಅವರ ಹಾಸ್ಯ ಚಟಾಕಿ, ಕುಂದಾಪ್ರ ಶೈಲಿಯಲ್ಲಿ ಎಲ್ಲರಿಗೂ ಊಟದ ವ್ಯವಸ್ಥೆ, ಸೆಲ್ಫಿ ಪಾಯಿಂಟ್, ಶವರ್ ಡಾನ್ಸ್, ಪಕ್ಕದ ಹೊಳೆಯಲ್ಲಿ ಕಯಾಕಿಂಗ್, ಬೋಟಿಂಗ್ ಸೇರಿದಂತೆ ಹಲವು ವಿಶೇಷತೆಗಳನ್ನು ಒಳಗೊಂಡಿದ್ದು ಹಬ್ಬದ ವಾತಾವರಣ ನಿರ್ಮಾಣವಾಗಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನದ ಕಾರ್ಯದರ್ಶಿ ಸುನಿಲ್ ಹೆಚ್. ಜಿ.ಬೈಂದೂರು, ಸಂಚಾಲಕರಾದ ಸುಬ್ರಹ್ಮಣ್ಯ ಜಿ. ಉಪ್ಪುಂದ, ಅರುಣ್ ಕುಮಾರ್ ಶಿರೂರು, ಪ್ರಸಾದ್ ಪ್ರಭು ಶಿರೂರು, ಪ್ರಮುಖರಾದ ದಿವಾಕರ ಶೆಟ್ಟಿ ಉಪ್ಪುಂದ, ರಘುರಾಮ ಪೂಜಾರಿ ಶಿರೂರು, ಶೇಖರ ಪೂಜಾರಿ ಉಪ್ಪುಂದ, ಗೌರಿ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X