Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯ ಬಿಎಸ್ಸೆನ್ನೆಲ್...

ಉಡುಪಿ ಜಿಲ್ಲೆಯ ಬಿಎಸ್ಸೆನ್ನೆಲ್ ಸ್ಥಾವರಗಳು 3ಜಿಯಿಂದ 4ಜಿಗೆ ಉನ್ನತೀಕರಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ14 Oct 2026 8:02 PM IST
share
ಉಡುಪಿ ಜಿಲ್ಲೆಯ ಬಿಎಸ್ಸೆನ್ನೆಲ್ ಸ್ಥಾವರಗಳು 3ಜಿಯಿಂದ 4ಜಿಗೆ ಉನ್ನತೀಕರಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಉಡುಪಿ, ಅ.14: ಉಡುಪಿ ಜಿಲ್ಲೆಯಾದ್ಯಂತ ಇರುವ ಬಿಎಸ್ಸೆನ್ನೆಲ್ ಸ್ಥಾವರಗಳನ್ನು 3ಜಿಯಿಂದ 4ಜಿಗೆ ಉನ್ನತೀಕರಿಸುವ ಮೂಲಕ ಗ್ರಾಹಕರಿಗೆ ಉತ್ತಮ ರೀತಿಯ ಸೇವೆಗಳನ್ನು ಒದಗಿಸಲು ಪ್ರಯತ್ನಿಸಬೇಕು. ಟವರ್‌ಗಳ ನಿರ್ವಹಣೆಯನ್ನು ವ್ಯವಸ್ಥಿತವಾಗಿ ನಿರ್ವಹಿಸುವುದರೊಂದಿಗೆ ನೆಟ್‌ವರ್ಕ್ ಸಮಸ್ಯೆ ಉಂಟಾಗದಂತೆ ನೋಡಿಕೊಂಡು ಗ್ರಾಹಕರಿಗೆ ಗುಣಮಟ್ಟದ ಸೇವೆಯನ್ನು ನೀಡಬೇಕು ಎಂದು ಉಡುಪಿ ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರದ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಟೆಲಿಕಾಂ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಬುಧವಾರ ನಡೆದ ಬಿಎಸ್ಸೆನ್ನೆಲ್ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯ ಎಲ್ಲಾ ಸ್ಥಾವರಗಳಿಗೆ ಡಿ.ಜಿ.ಸೆಟ್‌ಗಳನ್ನು ಅಳವಡಿಸುವ ಮೂಲಕ ಅವುಗಳು ಸರಿಯಾಗಿ ಕಾರ್ಯನಿರ್ವಹಿ ಸುವಂತೆ ನೋಡಿಕೊಳ್ಳಬೇಕು ಎಂದ ಅವರು, ಪವರ್ ಪ್ಲ್ಯಾಂಟ್‌ಗಳು ನಿರಂತರವಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು. ಅಗತ್ಯವಿರುವಲ್ಲಿ ಬ್ಯಾಟರಿ ಅಥವಾ ಸೋಲಾರ್ ಬ್ಯಾಟರಿಗಳನ್ನು ಅಳವಡಿಸಬೇಕು ಎಂದರು.

ಹೊಸದಾಗಿ ಟವರ್‌ಗಳನ್ನು ನಿರ್ಮಾಣ ಮಾಡಲು ಜಿಲ್ಲಾಡಳಿತದಿಂದ ಬೇಡಿಕೆಗನುಗುಣವಾಗಿ 39 ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಈ ಕಾರ್ಯವನ್ನು ಶೀಘ್ರದಲ್ಲೇ ಕೈಗೊಳ್ಳಬೇಕು. ಪೆರ್ಡೂರಿನ ಕುಕ್ಕುಂಜೆ ನಿವೇಶನದಲ್ಲಿ ಮರ ತೆರವಿನ ಕಾರ್ಯವನ್ನು ಅರಣ್ಯ ಇಲಾಖೆ ಅದಷ್ಟು ಶೀಘ್ರ ದಲ್ಲಿ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯ ಬಿಎಸ್ಸೆನ್ನೆಲ್ ಸಂಸ್ಥೆ ತನ್ನ ಗ್ರಾಹಕರಿಗೆ ನೆಟ್‌ವರ್ಕ್ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸಿ ಖಾಸಗಿ ಕಂಪನಿಗಳಿಗೆ ಕಡಿಮೆ ಇಲ್ಲದಂತೆ ಗುಣಮಟ್ಟದ ಸೇವೆ ಒದಗಿಸಬೇಕು ಎಂದು ಅವರು ದೂರಸಂಪರ್ಕ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲೂ ನೆಟ್‌ವರ್ಕ್ ಸಮಸ್ಯೆ: ಮಣಿಪಾಲ ದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಹಾಗೂ ಹತ್ತಿರದ ಆಸ್ಪತ್ರೆಗಳಲ್ಲಿಯೂ ನೆಟ್‌ವರ್ಕ್ ಸಮಸ್ಯೆ ಕಂಡು ಬರುತ್ತಿದೆ. ಸಮಸ್ಯೆಗಳನ್ನು ಪರಿಹರಿಸಿ ನೆಟ್‌ವರ್ಕ್‌ನಲ್ಲಿ ಸುಧಾರಣೆ ತರಬೇಕು. ಜಿಲ್ಲೆಯಲ್ಲಿ ಇನ್ನು ಮುಂದೆ ಪ್ರತಿ ತಿಂಗಳೂ ಈ ಬಗ್ಗೆ ಸಭೆ ನಡೆಯಲಿದೆ. ಮುಂದಿನ ಸಭೆಯಲ್ಲಿ ಸಮಸ್ಯೆಗಳು ಇತ್ಯರ್ಥವಾಗುವಂತೆ ಕ್ರಮಕೈಗೊಳ್ಳಬೇಕು ಎಂದರು.

ಜಿಲ್ಲೆಯ ಕಾಪು ಮತ್ತು ಕಮಲಶಿಲೆಯಂಥ ಪ್ರೇಕ್ಷಣೀಯ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ನೆಟ್‌ವರ್ಕ್ ಸಮಸ್ಯೆಯ ದೂರುಗಳು ಕೇಳಿಬರುತ್ತಿವೆ. ಇದನ್ನು ಪರಿಹರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬ್ರಹ್ಮಾವರ ತಾಲೂಕಿನ ಕರ್ಜೆ ಮತ್ತು ಕಾಪುವಿನ ಕಟಪಾಡಿಯಲ್ಲಿ ಟವರ್‌ಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಹಾಗೂ ನಾಡ್ಪಾಲು- ಕಬ್ಬಿನಾಲೆ ಪರಿಸರದಲ್ಲಿ ಮರುಸರ್ವೆ ನಡೆಸಲು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಬಿಎಸ್ಸೆನ್ನೆಲ್ ಬೆಂಗಳೂರು ವಿಭಾಗದ ಸಿಜಿಎಂ ಸುಕುಮಾರನ್ ಎನ್.ಕೆ, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್, ಪಿಜಿಎಂ ಬಿ ವೆಂಕಟೇಶ್ವರಲು, ಮಂಗಳೂರು ಜಿಎಂ ಹೇಮಂತ್ ಎಸ್ ಬಿ ಉಪಸ್ಥಿತರಿದ್ದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X