Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹವಾಮಾನಾಧಾರಿತ ಬೆಳೆ ವಿಮೆ ಯೋಜನೆ: ಜೂ.30...

ಹವಾಮಾನಾಧಾರಿತ ಬೆಳೆ ವಿಮೆ ಯೋಜನೆ: ಜೂ.30 ನೋಂದಣಿಗೆ ಕೊನೆಯ ದಿನ

ವಾರ್ತಾಭಾರತಿವಾರ್ತಾಭಾರತಿ19 Jun 2026 9:48 PM IST
share
ಹವಾಮಾನಾಧಾರಿತ ಬೆಳೆ ವಿಮೆ ಯೋಜನೆ: ಜೂ.30 ನೋಂದಣಿಗೆ ಕೊನೆಯ ದಿನ

ಉಡುಪಿ, ಜೂ.19: ಜಿಲ್ಲೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ವೈಪರಿತ್ಯದಿಂದಾಗಿ ಉಂಟಾ ಗುವ ಬೆಳೆ ನಷ್ಟಕ್ಕೆ ಪ್ರಸಕ್ತ ಸಾಲಿನ ಮರು ವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಕಾರ್ಯಕ್ರಮ ದಡಿ ನೊಂದಣಿ ಮಾಡಿಕೊಳ್ಳಲು ರೈತರಿಗೆ ಅವಕಾಶ ಕಲ್ಪಿಸಲಾಗಿದೆ. ರೈತರ ಪಹಣಿಯಲ್ಲಿ ಬೆಳೆ ಸಮೀಕ್ಷೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ನಮೂದಾಗಿರುವ ಬೆಳೆ ವಿಸ್ತೀರ್ಣಕ್ಕೆ ಅನುಗುಣವಾಗಿ ವಿಮಾ ಮೊತ್ತವನ್ನು ಪಾವತಿಸಿ ಯೋಜನೆಯಲ್ಲಿ ಪಾಲ್ಗೊಳ್ಳಬಹುದಾಗಿದೆ.

ಯೋಜನೆಯಡಿ ನೊಂದಣಿ ಮಾಡಿಸಲು ಜೂನ್ 30 ಕೊನೆಯ ದಿನವಾಗಿದ್ದು, ರೈತರು ವಿಮಾ ಕಂತುಗಳನ್ನು ಪಾವತಿಸಲು ನಿಗದಿತ ದಾಖಲೆ ಗಳೊಂದಿಗೆ ಹತ್ತಿರದ ಬ್ಯಾಂಕ್, ವ್ಯವಸಾಯ ಸೇವಾ ಸಹಕಾರಿ ಸಂಘ, ಸಿಎಸ್‌ಸಿ ಹಾಗೂ ಗ್ರಾಮ ಒನ್ -ಸೇವಾ ಕೇಂದ್ರಗಳನ್ನು ಸಂಪರ್ಕಿಸ ಬಹುದು.

ಈ ಬೆಳೆ ವಿಮಾ ಯೋಜನೆಯಲ್ಲಿ ಗ್ರಾಮ ಪಂಚಾಯತ್‌ಗಳನ್ನು ವಿಮಾ ಘಟಕಗಳಾಗಿ ಸರ್ಕಾರದ ಆದೇಶದಲ್ಲಿ ಅಧಿ ಸೂಚಿಸಲಾಗಿದೆ. ಅಡಿಕೆ ಹಾಗೂ ಕಾಳುಮೆಣಸು ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರು ಇದರಲ್ಲಿ ಪಾಲ್ಗೊಳ್ಳ ಬಹುದಾಗಿದೆ. ಬೆಳೆ ಸಾಲ ಪಡೆಯದ ರೈತರಿಗೆ ಈ ಯೋಜನೆಯು ಐಚ್ಚಿಕವಾಗಿರುತ್ತದೆ. ಬೆಳೆ ಸಾಲ ಪಡೆದ ರೈತರು ಯೋಜನೆಯಲ್ಲಿ ಪಾಲ್ಗೊಳ್ಳದೇ ಇರಲು ಇಚ್ಚಿಸಿದಲ್ಲಿ ನೊಂದಣಿಯ ಅಂತಿಮ ದಿನಾಂಕಕ್ಕಿಂತ 7 ದಿನ ಮುಂಚಿತವಾಗಿ ಇಚ್ಚೆ ಇಲ್ಲದ ಬಗ್ಗೆ ಮುಚ್ಚಳಿಕೆ ಪತ್ರವನ್ನು ಬೆಳೆ ಸಾಲ ಪಡೆದ ಹಣಕಾಸು ಸಂಸ್ಥೆಗೆ ನೀಡಬೇಕು.

ವಿಮೆ ಮಾಡಿಸುವ ರೈತರು ಫ್ರುಟ್ ತಂತ್ರಾಂಶದ ನೊಂದಣಿ ಸಂಖ್ಯೆಯನ್ನು ಹೊಂದಿರುವುದರೊಂದಿಗೆ ಸದರಿ ನೊಂದಣಿ ಸಂಖ್ಯೆಗೆ ಪಹಣಿ ವಿವರವನ್ನು ಜೋಡಿಸಿಕೊಂಡಿರಬೇಕು. ನೊಂದಣಿ ಸಂಖ್ಯೆ ಇಲ್ಲದ ರೈತರು ನೊಂದಣಿ ಸಂಖ್ಯೆಯನ್ನು ಮಾಡಿಕೊಂಡು ವಿಮೆಯಲ್ಲಿ ಪಾಲ್ಗೊಳ್ಳಬಹುದು. ವಿಮೆ ಮಾಡಿಸಿರುವ ರೈತರಿಗೆ ವಿಮೆ ಮಾಡಲ್ಪಟ್ಟ ಬೆಳೆಗಳಿಗೆ 2026ರ ಜುಲೈ 01 ರಿಂದ 2027ರ ಜೂನ್ 30ರವರೆಗೆ ವಿಮೆ ರಕ್ಷಣೆಯ ಅವಧಿ ಇರುತ್ತದೆ. ಈ ಅವಧಿಯಲ್ಲಿ ಹವಾಮಾನ ವೈಪರಿತ್ಯಗಳಿಂದಾಗಿ ಬೆಳೆ ನಷ್ಟ ಉಂಟಾದಲ್ಲಿ ವಿಮೆ ರಕ್ಷಣೆ ಅವಧಿಯ ನಂತರದಲ್ಲಿ ವಿಮಾ ಪರಿಹಾರ ಲೆಕ್ಕಾಚಾರ ಮುಗಿದ ಒಂದು ತಿಂಗಳಿನೊಳಗಾಗಿ ವಿಮಾ ಕಂಪೆನಿ ನಷ್ಟ ಪರಿಹಾರ ಪಾವತಿಸ ಬೇಕಾಗುತ್ತದೆ.

ಅಡಿಕೆ ಬೆಳೆಗೆ ವಿಮಾ ಮೊತ್ತ ರೂ. 1,28,000 (ಪ್ರತೀ ಹೆಕ್ಟೇರ್) ಇದ್ದು, ರೈತರು 6400 ರೂ. ವಿಮಾ ಕಂತು ಪಾವತಿಸಬೇಕು. ಕಾಳುಮೆಣಸು ವಿಮಾ ಮೊತ್ತ 47,000ರೂ. (ಪ್ರತೀ ಹೆಕ್ಟೇರ್) ಇದ್ದು, 2,350 ವಿಮಾ ಕಂತು ಗಳನ್ನು ಪಾವತಿಸಬೇಕು.

ವಿಮಾ ನಷ್ಟ ಪರಿಹಾರವು -ಆಧಾರ್ ಆದಾರಿತ ಪಾವತಿ ವ್ಯವಸ್ಥೆ ಮುಖಾಂತರ ಆಗುವುದರಿಂದ ವಿಮಾ ಅರ್ಜಿಯಲ್ಲಿ ಎನ್‌ಪಿಸಿಐ ಸಕ್ರಿಯ ಬ್ಯಾಂಕ್ ಖಾತೆ ಮಾಹಿತಿಯನ್ನು ನೀಡಬೇಕು. ರೈತರು ಆಧಾರ್ ಮಾಹಿತಿ ಯೊಂದಿಗೆ ಉಳಿ ತಾಯ ಖಾತೆ ಮಾಹಿತಿ ದಾಖಲೆಗಳು ಹಾಗೂ ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ದಾಖಲಾದ ಅಡಿಕೆ ಹಾಗೂ ಕಾಳು ಮೆಣಸು ಬೆಳೆಗಳ ವಿಸ್ತೀರ್ಣದ ಪ್ರೀಮಿಯಂ ಮೊತ್ತದೊಂದಿಗೆ ಹಣಕಾಸು ಸಂಸ್ಥೆಗಳಿಗೆ ಮಾಹಿತಿ ಸಲ್ಲಿಸಿ ನೊಂದಣಿ ಮಾಡಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ವಾಣಿಜ್ಯ /ಗ್ರಾಮೀಣ ಸಹಕಾರಿ ಬ್ಯಾಂಕ್, ಹೋಬಳಿ ರೈತ ಸಂಪರ್ಕ ಕೇಂದ್ರ, ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಅಥವಾ ಜಿಲ್ಲಾ ತೋಟಗಾರಿಕೆ ಜಂಟಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X