ಬ್ರಹ್ಮಾವರ: ಫಿಶ್ಫ್ಯಾಕ್ಟರಿಯ ಕಾರ್ಮಿಕರ 30 ಮಕ್ಕಳ ರಕ್ಷಣೆ

ಬ್ರಹ್ಮಾವರ, ನ.3: ಬ್ರಹ್ಮಾವರ ತಾಲೂಕಿನ ಫಿಶ್ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಶಾಲೆಗೆ ಹೋಗದ ಸುಮಾರು 30 ಮಕ್ಕಳನ್ನು ಅಕ್ಕ ಪಡೆ ತಂಡವು ಸಿಆರ್ಪಿ ಹಾಗೂ ಇಸಿಒ ಇಲಾಖೆಗಳ ಸಹಯೋಗ ದೊಂದಿಗೆ ಮಂಗಳವಾರ ವಿಶೇಷ ಕಾರ್ಯಾಚರಣೆ ನಡೆಸಿ ರಕ್ಷಿಸಿದೆ.
ಕಾರ್ಯಾಚರಣೆ ವೇಳೆ ಫ್ಯಾಕ್ಟರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಸುಮಾರು 30 ಮಕ್ಕಳು ಯಾವುದೇ ರೀತಿಯ ಶಿಕ್ಷಣ ಪಡೆಯದೆ, ಶಾಲೆಗೆ ತೆರಳದೆ ಫ್ಯಾಕ್ಟರಿಯ ಸುತ್ತಮುತ್ತಲೇ ಕಾಲ ಕಳೆಯುತ್ತಿರುವುದು ಕಂಡು ಬಂದಿತು. 6 ವರ್ಷ ಮೇಲ್ಪಟ್ಟ ಹಾಗೂ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ರಕ್ಷಿಸಿ, ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸ ಲಾಯಿತು. ನಂತರ 7 ಬಾಲಕಿಯರನ್ನು ಬಾಲಕಿಯರ ಬಾಲಮಂದಿರಕ್ಕೆ ಹಾಗೂ 23 ಬಾಲಕರನ್ನು ಬಾಲಕರ ಬಾಲಮಂದಿರಕ್ಕೆ ದಾಖಲಿಸುವ ಪ್ರಕ್ರಿಯೆ ಕೈಗೊಳ್ಳಲಾಯಿತು.
Next Story




