Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬಿಪಿಎಲ್, ಅಂತ್ಯೋದಯ ಕಾರ್ಡ್‌ಗೆ...

ಬಿಪಿಎಲ್, ಅಂತ್ಯೋದಯ ಕಾರ್ಡ್‌ಗೆ ಇ-ಕೆವೈಸಿಗೆ ಸೆ.31 ಅಂತಿಮ ದಿನಾಂಕ

ವಾರ್ತಾಭಾರತಿವಾರ್ತಾಭಾರತಿ12 Sept 2026 9:06 PM IST
share
ಬಿಪಿಎಲ್, ಅಂತ್ಯೋದಯ ಕಾರ್ಡ್‌ಗೆ ಇ-ಕೆವೈಸಿಗೆ ಸೆ.31 ಅಂತಿಮ ದಿನಾಂಕ

ಉಡುಪಿ, ಸೆ.12: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳಿಂದ ಪಡಿತರ ಪಡೆಯುತ್ತಿರುವ ಆದ್ಯತಾ (ಬಿಪಿಎಲ್) ಮತ್ತು ಅಂತ್ಯೋದಯ(ಎಎ) ಪಡಿತರ ಚೀಟಿಯಲ್ಲಿರುವ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕಾಗಿದ್ದು. ಈ ಪ್ರಕ್ರಿಯೆ ಪೂರ್ಣ ಗೊಳಿಸಲು ಸೆ.30 ಕೊನೆಯ ದಿನವಾಗಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ನಿಗದಿತ ಅವಧಿಯೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ವಿತರಣೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇರುವುದರಿಂದ ಅರ್ಹ ಫಲಾನುಭವಿಗಳು ಕೂಡಲೇ ಸದ್ರಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ತಿಳಿಸಲಾಗಿದೆ. ಇ-ಕೆವೈಸಿ ಮಾಡಿಸಿ ಐದು ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಅರ್ಹ ಫಲಾನುಭವಿಗಳಿಗೆ ಪಡಿತರ ವ್ಯವಸ್ಥೆ ಮುಂದುವರಿಸುವ ಉದ್ದೇಶದಿಂದ, ಸರ್ಕಾರದಿಂದ ಇದೀಗ ಪುನಃ ಇ-ಕೆವೈಸಿ ಪ್ರಕ್ರಿಯೆ ಕೈಗೊಳ್ಳಲಾಗಿದೆ.

ಇ-ಕೆವೈಸಿ ಮಾಡಿಸಿಕೊಳ್ಳಲು ಬಾಕಿಯಿರುವ ಪಡಿತರ ಚೀಟಿದಾರರ ಪಟ್ಟಿಯನ್ನು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳ ನ್ಯಾಯಬೆಲೆ ಅಂಗಡಿ ಯವರಿಗೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಇ-ಕೆವೈಸಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದ್ದು ಬಾಕಿ ಉಳಿದಿರುವ ಫಲಾನುಭವಿಗಳು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ ಇ-ಕೆವೈಸಿ ಮಾಡಿಸಲು ಸೂಚಿಸಲಾಗಿದೆ.

ವಿಶೇಷವಾಗಿ ಕಳೆದ ಹಲವು ವರ್ಷಗಳಿಂದ ಗ್ರಾಮದಲ್ಲಿ ವಾಸವಿಲ್ಲದೆ ಬೇರೆಡೆಗೆ ವಲಸೆ ಹೋಗಿರುವ ಅಥವಾ ಊರು ಬಿಟ್ಟು ತೆರಳಿರುವ ಪಡಿತರ ಚೀಟಿದಾರರು ತಮ್ಮ ಇ-ಕೆವೈಸಿ ಸ್ಥಿತಿಯನ್ನು ನ್ಯಾಯಬೆಲೆ ಅಂಗಡಿಯಲ್ಲಿ ಪರಿಶೀಲಿಸಿಕೊಂಡು ಇ-ಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ.

ಇ-ಕೆವೈಸಿಗೆ ಅಗತ್ಯ ದಾಖಲೆಗಳು: ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರು ಎಲ್‌ಪಿಜಿ ಗ್ಯಾಸ್ ಪುಸ್ತಕ, ಮೊಬೈಲ್ ಸಂಖ್ಯೆ ಲಿಂಕ್ ಆಗಿರುವ ಆಧಾರ ಕಾರ್ಡ್ ಮತ್ತು ಪಡಿತರ ಚೀಟಿಯನ್ನು ತೆಗೆದುಕೊಂಡು ಸಮೀಪದ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿಯನ್ನು ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾ ಆಹಾರ, ನಾಗರಿಕ ಸರಬ ರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X