ಕಸ್ತೂರಿರಂಗನ್ ವರದಿಯಿಂದ ಬಾಧಿತ 35 ಗ್ರಾಮಗಳ ಗ್ರಾಮಸ್ಥರೊಂದಿಗೆ ಸಿಎಂ ಚರ್ಚೆ

ಉಡುಪಿ, ಸೆ.16: ರಾಜ್ಯದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸೆಪ್ಟಂಬರ್ 18ರಂದು ಅಪರಾಹ್ನ 3 ಗಂಟೆಗೆ ಜಿಲ್ಲೆಯ ಹೆಬ್ರಿ ತಾಲೂಕಿನ ಸರ್ಕಾರಿ ಪದಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಕಸ್ತೂರಿರಂಗನ್ ವರದಿಗೆ ಸಂಬಂಧಿ ಸಿದಂತೆ ಸಭೆ ನಡೆಸಲಿದ್ದು, ಈ ಸಭೆಯಲ್ಲಿ ಕಸ್ತೂರಿರಂಗನ್ ವರದಿಯ ಸಾಧಕ-ಬಾಧಕಗಳ ಕುರಿತು ಕಸ್ತೂರಿರಂಗನ್ ವರದಿಗೆ ಒಳಪಡುವ ಜಿಲ್ಲೆಯ 35 ಗ್ರಾಮಗಳ ಗ್ರಾಮಸ್ಥರೊಂದಿಗೆ ಅವರು ಚರ್ಚೆ ನಡೆಸಲಿದ್ದಾರೆ.
ಕಸ್ತೂರಿರಂಗನ್ ವರದಿಗೆ ಒಳಪಡುವ ಕುಂದಾಪುರ, ಕಾರ್ಕಳ, ಹೆಬ್ರಿ ಹಾಗೂ ಬೈಂದೂರು ತಾಲೂಕುಗಳ ವ್ಯಾಪ್ತಿಯ 35 ಗ್ರಾಮಗಳ ಗ್ರಾಮಸ್ಥರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸಿ, ಸಭೆಯಲ್ಲಿ ತಮ್ಮ ಅಭಿಪ್ರಾಯ ಹಾಗೂ ಸಲಹೆಗಳನ್ನು ವ್ಯಕ್ತಪಡಿಸುವ ಮೂಲಕ ಸಭೆಯನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story




