ಉದ್ಯಾವರ | ಪ್ರಜಾಸೇವಾ ಆಂದೋಲನ ಸಭೆ: 35 ಅರ್ಜಿ ಸ್ವೀಕಾರ

ಉಡುಪಿ, ಅ.17: ಪ್ರಜಾಸೇವೆ ಇಲಾಖೆ ತಾಲೂಕು ಆಡಳಿತ ಉಡುಪಿ ವತಿಯಿಂದ ಶನಿವಾರ ಉದ್ಯಾವರ ಶ್ರೀನಾರಾಯಣಗುರು ಸಭಾಭವನದಲ್ಲಿ ಆಯೋಜಿಸಲಾದ ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಒಟ್ಟು 35 ಅರ್ಜಿಗಳನ್ನು ಸ್ವೀಕರಿಸಲಾಯಿತು.
ಅಧ್ಯಕ್ಷತೆಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಹಿಸಿದ್ದರು. ಶೇ.5 ನಿಧಿಯಿಂದ 17 ಫಲಾನುಭವಿಗಳಿಗೆ ಅಂಗವಿಕಲರ ಸಹಾಯಧನ ಚೆಕ್ ವಿತರಣೆ ಮಾಡಲಾಯಿತು. ಮೂಲಭೂತ ಸೌಕರ್ಯಗಳಾದ ರಸ್ತೆ, ದಾರಿದೀಪ, ಕುಡಿಯುವ ನೀರು ಮತ್ತು ಮೆಸ್ಕಾಂ ಇಲಾಖೆ ಹಾಗೂ ಕಂದಾಯ ಇಲಾಖೆಯಲ್ಲಿ ಅಕ್ರಮ ಸಕ್ರಮ, ನಿವೇಶನ, ಹಕ್ಕುಪತ್ರ, ಸಮಾಜಿಕ ಭದ್ರತಾ ಯೋಜನೆಗಳಲ್ಲಿನ ಸಮಸ್ಯೆ ಬಗ್ಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಪರಿಹಾರೋಪಾಯ ಕಂಡುಕೊಳ್ಳಲು ನಿರ್ಣಯಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಉಡುಪಿ ತಹಶೀಲ್ದಾರ ಗುರುರಾಜ್, ಉಡುಪಿ ತಾಪಂ ಕಾರ್ಯನಿರ್ವಹಣಾಧಿಕಾರಿ ವಿಜಯ, ಕಾಪು ಪೊಲೀಸ್ ವೃತ್ತ ನಿರೀಕ್ಷಕ ಅಜ್ಮತ್ ಅಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ, ಉದ್ಯಾವರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮೇಶ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.




