Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಲ್ಲಿ 3570 ಮಂದಿಗೆ 35...

ಉಡುಪಿ ಜಿಲ್ಲೆಯಲ್ಲಿ 3570 ಮಂದಿಗೆ 35 ಕೋಟಿ ಸಾಲ ಸಬ್ಸಿಡಿ ವಿತರಣೆ; ವಿಶ್ವಕರ್ಮ ಯೋಜನೆ

ವಾರ್ತಾಭಾರತಿವಾರ್ತಾಭಾರತಿ23 Jun 2025 8:00 PM IST
share
ಉಡುಪಿ ಜಿಲ್ಲೆಯಲ್ಲಿ 3570 ಮಂದಿಗೆ 35 ಕೋಟಿ ಸಾಲ ಸಬ್ಸಿಡಿ ವಿತರಣೆ; ವಿಶ್ವಕರ್ಮ ಯೋಜನೆ

ಉಡುಪಿ, ಜೂ.23: ಕೇಂದ್ರ ಸರಕಾರದ ಮಹತ್ವಕಾಂಕ್ಷೆ ಬಡವರ ಕಲ್ಯಾಣ ಯೋಜನೆಯಾದ ವಿಶ್ವಕರ್ಮ ಯೋಜನೆಯ ಮೂಲಕ ಉಡುಪಿ ಜಿಲ್ಲೆಯಲ್ಲಿ ಈವರೆಗೆ 3570 ಫಲಾನುಭವಿಗಳಿಗೆ 35 ಕೋಟಿ ರೂ. ಸಾಲ ವಿತರಿಸಲಾ ಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಕುಂದಾಪುರ ವಿಧಾನಸಭಾ ಕ್ಷೇತ್ರದ ಬಾರಕೂರು ಪಂಚಾಯತ್‌ನಲ್ಲಿ ವಿಶ್ವಕರ್ಮ ಯೋಜನೆಯ ಫಲಾನು ಭವಿಗಳಿಗೆ ವಿವಿದ ಸಾಮಗ್ರಿಗಳ ಕಿಟ್ ವಿತರಿಸಿ ಅವರು ಮಾತನಾಡುತ್ತಿದ್ದರು. ಅರ್ಹ ಫಲಾನುಭವಿಗಳಿಗೆ 15,000 ರೂ. ಮೊತ್ತ ಕಾರ್ಮಿಕ ಸಲಕರಣೆ ಕಿಟ್ ವಿತರಿಸಲಾಗಿದೆ ಎಂದು ಅವರು ಹೇಳಿದರು.

ವಿಶ್ವಕರ್ಮ ಯೋಜನೆಯ ಅನುಷ್ಠಾನದಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದ ಸಂಸದರು, ಇದನ್ನು ಮೊದಲ ಸ್ಥಾನಕ್ಕೆ ತರಲು ಅಧಿಕಾರಿಗಳು ಸೇರಿದಂತೆ ಎಲ್ಲರೂ ಪ್ರಯತ್ನಿಸಬೇಕು ಎಂದು ಕರೆ ನೀಡಿದರು.

ದೇಶದಲ್ಲಿ ತಲೆತಲಾಂತರದಿಂದ ತಮ್ಮ ಸಾಂಪ್ರದಾಯಿಕ ಕುಲ ಕಸುಬು ಗಳಿಂದ ಬದುಕುತ್ತಿದ್ದ ಕುಶಲ ಕರ್ಮಿಗಳಿಗೆ ಅವರ ವೃತ್ತಿಯ ನೈಪುಣ್ಯತೆ ಹೆಚ್ಚಿಸಲು ಸೂಕ್ತ ತರಬೇತಿ ನೀಡಿ ಉಚಿತ ಕಿಟ್‌ನೊಂದಿಗೆ ಹಂತ ಹಂತವಾಗಿ 3 ಲಕ್ಷ ರೂ. ಕಡಿಮೆ ಬಡ್ಡಿಯಲ್ಲಿ ಸಾಲ ಕೊಡುವ ಯೋಜನೆ ಇದಾಗಿದ್ದು, ಇದರಿಂದ ಸಾಂಪ್ರದಾಯಿಕ ವೃತ್ತಿಪರರ ಆರ್ಥಿಕ ಅಭಿವೃದ್ಧಿ ಆಗಲಿದೆ ಎಂದು ಕೋಟ ಅಭಿಪ್ರಾಯ ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಶಾಸಕ ಕಿರಣ್ ಕೊಡ್ಗಿ ಅವರು ವಿಶ್ವಕರ್ಮ ಯೋಜನೆಯಂತಹ ಉತ್ತಮ ಯೋಜನೆ ಇಂದು ಸಂಸದರ ಮೂಲಕ ಮನೆ ಮನೆಗೆ ತಲುಪುವುದು ಸ್ವಾಗತಾರ್ಹ ಎಂದರು.

ಬಾರ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷ ಶಾಂತರಾಮ್ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಂದನಾ, ಅಂಚೆ ಇಲಾಖೆಯ ಅಧಿಕಾರಿ ಉಪಸ್ಥಿತರಿದ್ದರು. ಬಾರ್ಕೂರು ಪಂಚಾಯತ್ ಕಾರ್ಯದರ್ಶಿ ಉಷಾ ಶೆಟ್ಟಿ ಸ್ವಾಗತಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X