ಪ್ರತ್ಯೇಕ 4 ಪ್ರಕರಣ: ಲಕ್ಷಾಂತರ ರೂ. ಆನ್‌ಲೈನ್ ವಂಚನೆ

ಉಡುಪಿ, ಜೂ.23: ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ನಾಲ್ಕು ಪ್ರಕರಣಗಳಲ್ಲಿ ಲಕ್ಷಾಂತರ ರೂ. ಆನ್‌ಲೈನ್ ವಂಚನೆ ಮಾಡಿರುವುದಾಗಿ ವರದಿಯಾಗಿದೆ.
ಹೂಡಿಕೆ ಹೆಸರಿನಲ್ಲಿ ದೀಕ್ಷಾ ಎಂಬವರಿಂದ ಮೇ 20ರಿಂದ 22ವರೆಗೆ ಹಂತ ಹಂತವಾಗಿ ಒಟ್ಟು 1,90,000ರೂ. ಹಣ ಪಡೆದು ವಂಚಿಸಿರುವುದಾಗಿ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಂಕರನಾರಾಯಣ: ನರೇಂದ್ರ ಎಂಬವರ ಮೊಬೈಲ್‌ಗೆ ಬಂದ ಲಿಂಕ್ ಒತ್ತಿದ ಪರಿಣಾಮ ಅವರ ಖಾತೆ ಯಿಂದ ಆನ್‌ಲೈನ್ ಮೂಲಕ 55,002ರೂ. ಹಣವನ್ನು ವರ್ಗಾವಣೆ ಮಾಡಿ ಮೋಸ ಮಾಡಿರುವುದಾಗಿ ದೂರಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ನಿತಿನ್ ಎಂಬವರ ಫಿಲ್ಫ್‌ಕಾರ್ಟ್ ಖಾತೆಗೆ ಜೂ.16ರೊದು ಯಾರೋ ಲಾಗಿನ್ ಆಗಿ ಅವರ ಅರಿವಿಗೆ ಇಲ್ಲದಂತೆ 25,126ರೂ. ಮೌಲ್ಯದ ಮೊಬೈಲ್‌ನ್ನು ಆನ್‌ಲೈನ್ ಮೂಲಕ ಖರೀದಿಸಿ ವಂಚಿಸಿರುವುದಾಗಿ ದೂರಲಾಗಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ: ಪ್ರತಿಮಾ ಎಂಬವರಿಗೆ ಪಾರ್ಟ್‌ಟೈಮ್ ಜಾಬ್ ಹೆಸರಿನಲ್ಲಿ ಹಣ ಹೂಡಿಕೆ ಮಾಡುವಂತೆ ತಿಳಿಸಿ, ಅವರಿಂದ ಒಟ್ಟು 2,21,900ರೂ. ಹಣವನ್ನು ವರ್ಗಾಯಿಸಿಕೊಂಡು ವಂಚಿಸಿರುವುದಾಗಿ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







