Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಮುಂದುವರಿದ ಗಾಳಿ-ಮಳೆ ಪ್ರತಾಪ;...

ಉಡುಪಿ: ಮುಂದುವರಿದ ಗಾಳಿ-ಮಳೆ ಪ್ರತಾಪ; 40 ಕ್ಕೂ ಅಧಿಕ ಮನೆಗಳಿಗೆ ಹಾನಿ

ವಾರ್ತಾಭಾರತಿವಾರ್ತಾಭಾರತಿ7 July 2026 9:26 PM IST
share
ಉಡುಪಿ: ಮುಂದುವರಿದ ಗಾಳಿ-ಮಳೆ ಪ್ರತಾಪ; 40 ಕ್ಕೂ ಅಧಿಕ ಮನೆಗಳಿಗೆ ಹಾನಿ
15 ಲಕ್ಷ ರೂ.ಗಳಿಗೂ ಅಧಿಕ ನಷ್ಟದ ಅಂದಾಜು

ಉಡುಪಿ, ಜು.7:ಜಿಲ್ಲೆಯಲ್ಲಿ ಗಾಳಿ-ಮಳೆಯ ಪ್ರತಾಪ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಾದ್ಯಂತ 40ಕ್ಕೂ ಅಧಿಕ ವಾಸ್ತವ್ಯ ಮನೆಗಳಿಗೆ ಸಾಧಾರಣದಿಂದ ಭಾರೀ ಪ್ರಮಾಣದ ಹಾನಿ ಸಂಭವಿಸಿದ್ದರೆ, ಮೂರು ಜಾನು ವಾರು ಕೊಟ್ಟಿಗೆಗಳಿಗೆ ಹಾನಿಯಾಗಿದ್ದು ಮಾತ್ರವಲ್ಲದೇ, ಮೂರು ಕಡೆ ತೋಟಗಾರಿಕಾ ಬೆಳೆಗಳಿಗೂ ಅಪಾರ ಪ್ರಮಾಣದ ಹಾನಿ ಸಂಭವಿಸಿರುವುದು ವರದಿಯಾಗಿದೆ.

ಜಿಲ್ಲೆಯ ಮಳೆಯ ಪ್ರಮಾಣ ಕುಸಿದಿದ್ದರೂ, ಮಳೆಯೊಂದಿಗೆ ಆಗಾಗ ಬೀಸುತ್ತಿರುವ ಗಾಳಿ ತನ್ನ ಪ್ರತಾಪವನ್ನು ಜಿಲ್ಲೆಯಾದ್ಯಂತ ತೋರಿಸಿದೆ. ಇದರಿಂದ ಮನೆಗಳು, ಕೊಟ್ಟಿಗೆಗಳ ಮೇಲೆ ಮರಗಳು ಬಿದ್ದು ಹಾನಿ ಸಂಭವಿಸಿದ್ದು ಮಾತ್ರವಲ್ಲ, ತೋಟಗಾರಿಕಾ ಬೆಳೆಗಳೂ ಅಲ್ಲಲ್ಲಿ ಧರಾಶಾಹಿಯಾಗಿವೆ.

ಕಾರ್ಕಳ ತಾಲೂಕು ಮರ್ಣೆಯ ಸುಕುಮಾರ್ ಹೆಗ್ಡೆ ಎಂಬವರಿಗೆ ಸೇರಿದ ಮನೆಯ ಜಾನುವಾರು ಕೊಟ್ಟಿಗೆ ಗಾಳಿ-ಮಳೆಗೆ ಸಂಪೂರ್ಣ ಕುಸಿದಿದ್ದು, ಎರಡೂವರೆ ಲಕ್ಷ ರೂ.ಗಳಿಗೂ ಅಧಿಕ ನಷ್ಟದ ಅಂದಾಜು ಮಾಡಲಾಗಿದೆ. ಅದೇ ರೀತಿ ಬ್ರಹ್ಮಾವರ ತಾಲೂಕು ಕೋಟದ ಗೌರಿ ಪೂಜಾರ್ತಿ ಹಾಗೂ ಕುಂದಾಪುರ ತಾಲೂಕು ಬೇಳೂರು ಗ್ರಾಮದ ಆನಂದ ರಾಮ ಎಂಬವರ ಜಾನುವಾರು ಕೊಟ್ಟಿಗೆ ಭಾಗಶ: ಹಾನಿಯಾಗಿದ್ದು, 50 ಸಾವಿರ ರೂ. ನಷ್ಟ ವಾಗಿರುವುದಾಗಿ ಅಂದಾಜಿಸಲಾಗಿದೆ.

ಕುಂದಾಪುರ ತಾಲೂಕು ಸಿದ್ಧಾಪುರದ ಸದಾನಂದ ಶೆಟ್ಟಿ ಹಾಗೂ ನಾರಾಯಣ ಶೆಟ್ಟಿ ಅಲ್ಲದೇ ಹೆಬ್ರಿ ಗ್ರಾಮ ಶಿವಪುರದ ಕೃಷ್ಣ ನಾಯ್ಕ್ ಎಂಬವರ ತೋಟಗಾರಿಕಾ ಬೆಳೆಗಳು ಗಾಳಿ-ಮಳೆಗೆ ಹಾನಿಗೊಳಗಾಗಿವೆ. ಇವುಗಳಲ್ಲಿ ಅಡಿಕೆ, ಬಾಳೆಗಿಡಗಳು ಸೇರಿ ವಿವಿಧ ಮರಗಳು ಹಾನಿಗೊಂಡಿವೆ.

40ಕ್ಕೂ ಅಧಿಕ ಮನೆಗಳಿಗೆ ಹಾನಿ: ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಬೀಸಿದ ಗಾಳಿಗೆ 40ಕ್ಕೂ ಅಧಿಕ ಮನೆಗಳಿಗೆ ಹಾನಿಯುಂಟಾದ ವರದಿಗಳು ವಿಕೋಪ ನಿಯಂತ್ರಣ ಕೊಠಡಿಗೆ ಬಂದಿವೆ. ಇವುಗಳಿಂದ ಸುಮಾರು 11 ಲಕ್ಷ ರೂ.ಗಳಷ್ಟು ನಷ್ಟದ ಅಂದಾಜು ಮಾಡಲಾಗಿದೆ. ಇವುಗಳಲ್ಲಿ 10ಕ್ಕೂ ಅಧಿಕ ಮನೆಗಳಿಗೆ ದೊಡ್ಡ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ ಎಂದು ವರದಿಯಾಗಿದೆ.

ಬ್ರಹ್ಮಾವರ ತಾಲೂಕಿನಲ್ಲಿ ಮನೆ ಹಾನಿಯ 18 ಪ್ರಕರಣಗಳು ವರದಿಯಾಗಿದ್ದರೆ, ಕುಂದಾಪುರ ತಾಲೂಕಿನಿಂದ 12 ಪ್ರಕರಣಗಳು ದಾಖಲಾಗಿವೆ. ಇನ್ನು ಕಾಪುವಿನಿಂದ 2, ಬೈಂದೂರಿನಿಂದ ಮೂರು, ಕಾರ್ಕಳದಿಂದ ನಾಲ್ಕು ಹಾಗೂ ಹೆಬ್ರಿಯಿಂದ ಎರಡು ಪ್ರಕರಣಗಳು ವರದಿಯಾಗಿವೆ.

ಬೈಂದೂರು ತಾಲೂಕು ಉಪ್ಪುಂದ ಗ್ರಾಮದ ಲಕ್ಷ್ಮಣ ಖಾರ್ವಿ ಎಂಬವರ ಮನೆ ಮೇಲೆ ಭಾರೀ ಗಾತ್ರದ ಮರ ಬಿದ್ದು ಮನೆ ಭಾಗಶ: ಕುಸಿದಿದೆ. ಇದರಿಂದ ಒಂದು ಲಕ್ಷ ರೂ.ಗಳಿಗೂ ಅಧಿಕ ನಷ್ಟ ಸಂಭವಿಸಿದೆ. ಕಾಪು ತಾಲೂಕು ಬೆಳ್ವೆಯ ಶಕುಂತಲಾ, ಕುಂದಾಪುರ ತಾಲೂಕು ಅಜ್ರಿಯ ಸಂಜೀವ ಶೆಟ್ಟಿ, ವೆಂಕಟೇಶ ಶೆಟ್ಟಿ, ಕರುಣಾಕರ ಶೆಟ್ಟಿ, ನಾರಾಯಣ ಶೆಟ್ಟಿ, ಚಂದ್ರು ಶೆಟ್ಟಿ ಇವರ ಮನೆಗಳಿಗೆ ಬೀಸಿದ ಗಾಳಿ-ಮಳೆಯಿಂದ ತಲಾ 50 ಸಾವಿರ ರೂ.ಗಳ ನಷ್ಟವಾಗಿದೆ.

ಉಪ್ಪುಂದದ ಶೇಖರ ಖಾರ್ವಿ, ಬ್ರಹ್ಮಾವರ ತಾಲೂಕು ವಂಡಾರು ಗ್ರಾಮದ ಗಿರಿಜ ಬಾಯಿ, ಆರೂರು ಗ್ರಾಮದ ಸದಾಶಿವ, ಗಿಳಿಯಾರಿನ ಸುರೇಶ್ ಅಡಿಗ, ಚಂದ್ರ ಪೂಜಾರಿ, ಶಿರಿಯಾರದ ಕೊರಗು ಶೆಟ್ಟಿ, ರಮೇಶ ಪೂಜಾರಿ, ಚಂದ್ರ, ಅಣ್ಣಪ್ಪ, ಹೆಬ್ರಿ ಶಿವಪುರದ ಶಕುಂತಳಾ ಮುಂತಾದವರ ಮನೆಗೆ 25ರಿಂದ 30ಸಾವಿರ ರೂ.ನಗಳ ನಷ್ಟದ ಅಂದಾಜು ಮಾಡಲಾಗಿದೆ.

ಜಿಲ್ಲೆಯಲ್ಲಿ ಸರಾಸರಿ 52.3ಮಿ.ಮೀ. ಮಳೆ

ಇಂದು ಬೆಳಗ್ಗೆ 8:30ಕ್ಕೆ ಮುಕ್ತಾಯಗೊಂಡಂತೆ ಉಡುಪಿ ಜಿಲ್ಲೆಯಲ್ಲಿ ಸರಾಸರಿ 52.3 ಮಿ.ಮೀ. ಮಳೆಯಾಗಿದೆ. ಅತ್ಯಧಿಕ ಮಳೆ ಹೆಬ್ರಿಯಲ್ಲಿ 68.3ಮಿ.ಮೀ. ಬಿದ್ದಿದೆ. ಉಳಿದಂತೆ ಕಾರ್ಕಳದಲ್ಲಿ 58.3, ಬೈಂದೂರಿನಲ್ಲಿ 58.3, ಕುಂದಾಪುರದಲ್ಲಿ 52.2, ಉಡುಪಿಯಲ್ಲಿ 45.9, ಕಾಪುವಲ್ಲಿ 34.0 ಹಾಗೂ ಬ್ರಹ್ಮಾವರದಲ್ಲಿ 31.1ಮಿ.ಮೀ. ಮಳೆ ಬಿದ್ದಿದೆ.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X