Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್...

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ

ವಾರ್ತಾಭಾರತಿವಾರ್ತಾಭಾರತಿ7 July 2026 9:39 PM IST
share
ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ

ಉಡುಪಿ, ಜು.7: ಸ್ವಯಂ ಚಾಲಿತ ವಾಹನ ನೋಂದಣಿ ಸಂಖ್ಯೆ ಗುರುತಿಸುವ(ಎಎನ್‌ಪಿಆರ್) ಕ್ಯಾಮೆರಾಗಳನ್ನು ಜಿಲ್ಲೆಯ ಆರು ಕಡೆಗಳಲ್ಲಿ ಅಳವಡಿಸಿದ್ದು, ಇದರಿಂದ ಜಿಲ್ಲೆಯಾದ್ಯಂತ ಪ್ರಮುಖ ಎಲ್ಲಾ ಸಂಚಾರ ನಿಯಮ ಉಲ್ಲಂಘನೆಗಳಲ್ಲಿ ಶೇ.40ರಿಂದ ಶೇ.70ರವರೆಗೆ ಇಳಿಕೆ ಕಂಡು ಬಂದಿದೆ.

ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಂಚಾರವನ್ನು ಪರಿಣಾಮಕಾರಿಯಾಗಿ ನಿರ್ವ ಹಿಸಲು ಹಾಗೂ ತಂತ್ರಜ್ಞಾನದ ಮೂಲಕ ಸಂಚಾರ ನಿಯಮಗಳ ಜಾರಿಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶ ದಿಂದ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಡಿ ಉಡುಪಿ ಜಿಲ್ಲೆಯ ಪಡುಬಿದ್ರಿ- ಉಚ್ಚಿಲ, ಕಾಪು-ದಂಡತೀರ್ಥ, ಕೋಟ- ತೆಕ್ಕಟ್ಟೆ, ಗಂಗೊಳ್ಳಿ- ತ್ರಾಸಿ, ಬೈಂದೂರು- ಕೆರ್ಗಾಲ್ ಮತ್ತು ಕಾರ್ಕಳ- ದೂಪದಕಟ್ಟೆಗಳಲ್ಲಿ ಒಟ್ಟು ಆರು ಎಎನ್‌ಪಿಆರ್ ಕ್ಯಾಮೆರಾಗಳನ್ನು ಅಳವಡಿಸಿ, ಮೇ 21ರಂದು ಅನುಷ್ಠಾನ ಮಾಡಲಾಗಿತ್ತು.

ಇಲ್ಲಿನ ಕ್ಯಾಮೆರಾಗಳು ವಾಹನದ ನೋಂದಣಿ ಸಂಖ್ಯೆಯನ್ನು ಸ್ವಯಂ ಚಾಲಿತವಾಗಿ ಗುರುತಿಸಿ, ವಾಹನದ ಮಾಲಕರ ವಿವರಗಳು ಹಾಗೂ ನಡೆದಿರುವ ಸಂಚಾರ ನಿಯಮ ಉಲ್ಲಂಘನೆಯ ಮಾಹಿತಿಯನ್ನು ದಾಖಲಿಸುತ್ತದೆ. ದಾಖಲಾದ ನಿಯಮ ಉಲ್ಲಂಘನೆಗಳ ಆಧಾರದ ಮೇಲೆ ಇ-ಚಲನ್ ನೋಟಿಸ್‌ಗಳನ್ನು ಸ್ವಯಂಚಾಲಿತವಾಗಿ ಸಿದ್ಧಪಡಿಸಿ, ಸಂಬಂಧಿತ ವಾಹನದ ಮಾಲಕರಿಗೆ ಕಳುಹಿಸಲಾಗುತ್ತದೆ. ಈವರೆಗೆ ಒಟ್ಟು 2,700 ಇ-ಚಲನ್‌ಗಳನ್ನು ಜಾರಿ ಮಾಡಲಾಗಿದೆ.

ಈ ಯೋಜನೆ ಜಾರಿಯಾದ ಮೊದಲ ವಾರ ಹಾಗೂ ಇತ್ತೀಚಿನ ವಾರದ ಸಂಚಾರ ನಿಯಮ ಉಲ್ಲಂಘನೆಗಳ ಹೋಲಿಕೆ ಮಾಡಿದರೆ ಉಲ್ಲಂಘನೆ ಪ್ರಕರಣಗಳ ಸಂಖ್ಯೆ ಸಾಕಷ್ಟು ಇಳಿಮುಖವಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.

ಪ್ರಕರಣಗಳು ಇಳಿಕೆಯಾಗಿರುವ ವಿವರ

ಅತೀವೇಗದ ಚಾಲನೆ(ದ್ವಿಚಕ್ರ, ತ್ರಿಚಕ್ರ, ಲಘುವಾಹನ): 2026ರ ಮೇ 21-27ರವರೆಗಿನ ಆರಂಭದ ವಾರದಲ್ಲಿ 40175, ಜೂ.29-ಜು.6ರವರೆಗಿನ ಇತ್ತೀಚಿನ ವಾರದಲ್ಲಿ 14364 ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಶೇ.64 ಇಳಿಕೆ ಕಂಡಿದೆ. ಸೀಟ್ ಬೆಲ್ಟ್: ಮೊದಲ ವಾರ- 15575, ಇತ್ತೀಚಿನ ವಾರ- 6561(ಶೇ.58 ಇಳಿಕೆ), ಹೆಲ್ಮೆಟ್ ಧರಿಸಿದ ವಾಹನ ಚಾಲನೆ: ಮೊದಲ ವಾರ- 12440, ಇತ್ತೀಚಿನ ವಾರ- 5070(ಶೇ.59 ಇಳಿಕೆ), ವಿರುದ್ಧ ದಿಕ್ಕಿನಲ್ಲಿ ಚಾಲನೆ: ಮೊದಲ ವಾರ- 4050, ಇತ್ತೀಚಿನ ವಾರ: 2441 (ಶೇ.40), ಮೂವರು ಸವಾರಿ: ಮೊದಲ ವಾರ- 3174, ಇತ್ತೀಚಿನ ವಾರ- 1036(ಶೇ.67), ಘನವಾಹನಗಳ ಅತೀವೇಗ: ಮೊದಲ ವಾರ- 3,170, ಇತ್ತೀಚಿನ ವಾರ- 997(ಶೇ.69).

share
ವಾರ್ತಾಭಾರತಿ
ವಾರ್ತಾಭಾರತಿ
Next Story
X