Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಂಪೂರ್ಣ ಸಾವಯವ ಭತ್ತ ಕ್ವಿಂಟಾಲ್‌ಗೆ...

ಸಂಪೂರ್ಣ ಸಾವಯವ ಭತ್ತ ಕ್ವಿಂಟಾಲ್‌ಗೆ 4000 ರೂ.ನಂತೆ ಖರೀದಿ: ಸುಭಿಕ್ಷಾ ಸಾವಯವ ಸಂಘದ ಅಧ್ಯಕ್ಷರ ಭರವಸೆ

ವಾರ್ತಾಭಾರತಿವಾರ್ತಾಭಾರತಿ7 Oct 2026 9:36 PM IST
share
ಸಂಪೂರ್ಣ ಸಾವಯವ ಭತ್ತ ಕ್ವಿಂಟಾಲ್‌ಗೆ 4000 ರೂ.ನಂತೆ ಖರೀದಿ: ಸುಭಿಕ್ಷಾ ಸಾವಯವ ಸಂಘದ ಅಧ್ಯಕ್ಷರ ಭರವಸೆ

ಉಡುಪಿ, ಅ.7: ಇಂದು ಶುದ್ಧ ಸಾವಯವ ಆಹಾರ ಉತ್ಪನ್ನಗಳಿಗೆ ಬಹುಬೇಡಿಕೆ ಇದ್ದು, ಈ ನಿಟ್ಟಿನಲ್ಲಿ ಸುಭಿಕ್ಷಾ ಸಂಸ್ಥೆ ಹಾಗೂ ಭಾಕಿಸಂನ ಮೂಲಕ ಸಂಸ್ಥೆಯ ಸದಸ್ಯ ರೈತರು ಸಂಪೂರ್ಣ ಸಾವಯವ ಪದ್ಧತಿಯಲ್ಲಿ ಬೆಳೆಸಿ ನೀಡುವ ಭತ್ತವನ್ನು ಪ್ರತೀ ಕ್ವಿಂಟಾಲ್‌ಗೆ 4,000 ರೂ. ದರ ನೀಡಿ ಖರೀದಿಸಿ ಮಾರುಕಟ್ಟೆ ಮಾಡಲು ಸಿದ್ಧವಿರುವುದಾಗಿ ಸುಭಿಕ್ಷಾ ಸಾವಯವ ರೈತರ ಬಹುರಾಜ್ಯ ಸಹಕಾರ ಸಂಘ ನಿಯಮಿತ ಇದರ ಅಧ್ಯಕ್ಷ ಆ.ಶ್ರೀ. ಆನಂದ ಹೇಳಿದ್ದಾರೆ.

ಉಡುಪಿಯ ಭಾರತೀಯ ಕಿಸಾನ್ ಸಂಘದ ಜಿಲ್ಲಾ ಕಾರ್ಯಾಲಯದಲ್ಲಿ ಇಂದು ನಡೆದ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಅಲ್ಲದೇ ಸುಭಿಕ್ಷಾದ ಷೇರುದಾರರು ಮತ್ತು ಭಾ.ಕಿ.ಸಂ. ಸದಸ್ಯರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಸಾವಯವ ಗೂಬ್ಬರಗಳನ್ನು ಪೂರೈಸಲಾಗುತ್ತಿದ್ದು ಹೆಚ್ಚಿನ ರೈತರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕರೆ ನೀಡಿದರು.

ಭಾಕಿಸಂ ಜಿಲ್ಲಾಧ್ಯಕ್ಷ ನವೀನ್‌ಚಂದ್ರ ಜೈನ್ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಸಮಿತಿಯ ಮಾಸಿಕ ಸಭೆಯಲ್ಲಿ ಬಹು ಮುಖ್ಯವಾಗಿ ಭತ್ತದ ದರದ ಬಗ್ಗೆ ಚರ್ಚಿಸಲಾಯಿತು. ಪ್ರಸ್ತುತ ವರ್ಷ ತೀವ್ರ ಬರ ಪರಿಸ್ಥಿತಿ ಹಾಗೂ ಹವಾಮಾನ ವೈಪರಿತ್ಯಗಳ ಕಾರಣದಿಂದ ಮಾರುಕಟ್ಟೆಯಲ್ಲಿ ಅಕ್ಕಿಯ ಬೆಲೆ ಗಣನೀಯವಾಗಿ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಈ ಬಾರಿ ಭತ್ತದ ಉತ್ಪಾದನೆ ಕೂಡ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಅರ್ಧಾಂಶದಷ್ಟು ಕಡಿಮೆಯಾಗುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ ಎಂದು ಸದಸ್ಯರು ಕಳವಳ ವ್ಯಕ್ತಪಡಿಸಿದರು.

ಈಗ ಅಕ್ಕಿ ದರವನ್ನು ಗಮನಿಸಿದರೆ ಭತ್ತದ ದರ ಕೂಡ ಅಷ್ಟೇ ಪ್ರಮಾಣದಲ್ಲಿ ಏರಿಕೆಯಾಗಬೇಕಾಗಿದೆ. ಆದರೆ ಅಕ್ಕಿ ಗಿರಣಿ ಮಾಲಕರು ಮತ್ತು ವ್ಯಾಪಾರಸ್ಥರು ಭತ್ತದ ಖರೀದಿ ದರವನ್ನು ಏರಿಸಲು ಹಿಂದೇಟು ಹಾಕುತ್ತಿದ್ದಾರೆ. ಈ ಕಾರಣದಿಂದ ಭತ್ತದ ಬೆಳೆಗಾರರಿಗೆ ನಷ್ಟದ ಪ್ರಮಾಣ ಹೆಚ್ಚುತ್ತಲೆ ಹೋಗುತ್ತಿದ್ದು ರೈತರು ಕೃಷಿಯಿಂದಲೇ ಹಿಂದೆ ಸರಿಯುವ ದುಸ್ಥಿತಿ ಬಂದಿದೆ ಎಂದು ರೈತರು ದೂರಿದರು.

ರೈತರ ಸಂಕಷ್ಟವನ್ನು ಅರ್ಥೈಸಿಕೊಂಡು ಅವರ ಪರ ನಿಂತು, ಸೂಕ್ತ ಬೆಂಬಲ ಬೆಲೆ ಘೋಷಿಸಿ ಭತ್ತವನ್ನು ಖರೀದಿ ಮಾಡುವ ಬಗ್ಗೆ ಕ್ರಮ ಜರಗಿಸುವ ಬಗ್ಗೆ ಜಿಲ್ಲಾಡಳಿತ ಯಾವುದೇ ಆಸಕ್ತಿ ತೋರಿಸುತ್ತಿಲ್ಲ. ಈ ಬಗ್ಗೆ ಜಿಲ್ಲಾಡಳಿತ ತಕ್ಷಣದ ಕ್ರಮವಾಗಿ ರೈತ ಸಂಘಟನೆಗಳು ಮತ್ತು ಅಕ್ಕಿ ಗಿರಣಿ ಮಾಲೀಕರ ತುರ್ತು ಸಭೆ ಕರೆದು, ಭತ್ತಕ್ಕೆ ನ್ಯಾಯಯುತ ಬೆಲೆ ನಿಗದಿಗೊಳಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಅಕ್ಕಿ ಗಿರಣಿ ಮಾಲಕರು ಮತ್ತು ವ್ಯಾಪಾರಸ್ಥರು ಭತ್ತಕ್ಕೆ ಕ್ವಿಂಟಾಲ್‌ಗೆ ಕನಿಷ್ಟ 4,000ರೂ. ದರದಲ್ಲಾದರೂ ಖರೀದಿ ಮಾಡಲು ಮುಂದೆ ಬರುವಂತೆ ವಿನಂತಿಸಲು ಸಭೆ ತೀರ್ಮಾನಿತು. ರೈತರು ಕೂಡ ತರಾತುರಿಯಲ್ಲಿ ಭತ್ತವನ್ನು ಮಿಲ್‌ಗಳಿಗೆ ಹಾಕದೆ ಸರಿಯಾಗಿ ಒಣಗಿಸಿ, ಸಂಸ್ಕರಿಸಿ, ದಾಸ್ತಾನು ಇರಿಸಿ ನಿಧಾನವಾಗಿ ಮಾರುಕಟ್ಟೆ ಮತ್ತು ಮಿಲ್‌ಗಳಿಗೆ ನೀಡಿದಲ್ಲಿ ಹೆಚ್ಚಿನ ಬೆಲೆ ಪಡೆಯಬಹುದು ಎಂಬುದನ್ನು ರೈತರಿಗೆ ಮನದಟ್ಟು ಮಾಡಲು ನಿರ್ಧರಿಸಲಾುತು.

ಸಭೆಯಲ್ಲಿ ಭಾಕಿಸಂನ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್ ಭಟ್ ಇರ್ವತ್ತೂರು, ಜಿಲ್ಲಾ ಪದಾಧಿಕಾರಿಗಳಾದ ಸೀತಾ ರಾಮ ಗಾಣಿಗ, ಸಂತೋಷ್ ಶೆಟ್ಟಿ, ಮೋಹನ್‌ದಾಸ್ ಅಡ್ಯಂತಾಯ, ನಿರ್ಮಲ, ರೇವತಿ ಕಡ್ತಲ ಹಾಗೂ ಕುಂದಾಪುರ ಮತ್ತು ಕಾರ್ಕಳ ತಾಲೂಕು ಪ್ರಮುಖರು, ಸುಭಿಕ್ಷಾ ಶೇರುದಾರರು ಹಾಗೂ ವಿವಿಧ ಗ್ರಾಮ ಸಮಿತಿಗಳ ಪ್ರಮುಖರು ಉಪಸ್ಥಿತರಿದ್ದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಉಡುಪ ಕಾರ್ಯಕ್ರಮ ನಿರ್ವಹಿಸಿ, ಚಂದ್ರಹಾಸ ಶೆಟ್ಟಿ ಇನ್ನಾ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X