Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಚಮ್ತಾಡಿ-ಅಚ್ಲಾಡಿ ಕಿರುಸೇತುವೆಗೆ 45...

ಚಮ್ತಾಡಿ-ಅಚ್ಲಾಡಿ ಕಿರುಸೇತುವೆಗೆ 45 ಲಕ್ಷ ಅನುದಾನ ಮಂಜೂರು

ವಾರ್ತಾಭಾರತಿವಾರ್ತಾಭಾರತಿ21 Aug 2026 9:46 PM IST
share
ಚಮ್ತಾಡಿ-ಅಚ್ಲಾಡಿ ಕಿರುಸೇತುವೆಗೆ 45 ಲಕ್ಷ ಅನುದಾನ ಮಂಜೂರು

ಕುಂದಾಪುರ, ಆ.21: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೇಳೂರು ಗ್ರಾಮಪಂಚಾಯತ್‌ನ ಚಮ್ತಾಡಿ-ಅಚ್ಲಾಡಿಯನ್ನು ಸಂಪರ್ಕಿಸುವ ಹಿರೇಹೊಳೆಗೆ ನೂತನ ಸೇತುವೆ ನಿರ್ಮಾಣಕ್ಕೆ ರಾಜ್ಯ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು 45 ಲಕ್ಷ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ.

ಹಿರೇಹೊಳೆಗೆ ಈಗಿರುವ ಕಾಲುಸಂಕ ಅತ್ಯಂತ ಅಪಾಯಕಾರಿ ಸ್ಥಿತಿಯಲ್ಲಿದ್ದು, ಅದನ್ನು ತೆರವುಗೊಳಿಸಿ ನೂತನ ಕಿರುಸೇತುವೆ ನಿರ್ಮಿಸುವಂತೆ ಕ್ಷೇತ್ರದ ಮುಖಂಡರಾದ ಎಂ.ದಿನೇಶ್ ಹೆಗ್ಡೆ ಮೊಳಹಳ್ಳಿ ಅವರು ಬಹುಕಾಲ ದಿಂದ ಮನವಿ ಸಲ್ಲಿಸಿ ಪ್ರಯತ್ನ ನಡೆಸಿದ್ದರು.

ಇದೀಗ ನೂತನ ಕಿರುಸೇತುವೆ ನಿರ್ಮಾಣ ಮಾಡಲು 45 ಲಕ್ಷ ರೂ.ಗಳ ಅನುದಾನ ಕೋರಿ ಸಲ್ಲಿಸಲಾದ ಪ್ರಸ್ತಾವನೆಗೆ ರಾಜ್ಯ ಸರಕಾರ ಅನುಮೋದನೆ ನೀಡಿದೆ. ಈ ಬಗ್ಗೆ ದಿನೇಶ್ ಹೆಗ್ಡೆ ಅವರು ಬೆಂಗಳೂರಿನಲ್ಲಿ ಸಚಿವ ಜಾರಕಿಹೊಳಿ ಅವರನ್ನು ಭೇಟಿಯಾಗಿ ಸ್ಥಳೀಯ ಜನರ ಬೇಡಿಕೆ ಕುರಿತು ಅವರ ಗಮನ ಸೆಳೆದಿದ್ದರು.

ಬೇಳೂರು ಗ್ರಾಪಂ ವ್ಯಾಪ್ತಿಯ ಹಿರೇಹೊಳೆ ಬಳಿಯ ಚಮ್ತಾಡಿ-ಅಚ್ಲಾಡಿ ಕಾಲುಸಂಕ ಅತ್ಯಂತ ಶಿಥಿಲಾವಸ್ಥೆಯಲ್ಲಿದ್ದು, ಕುಸಿದು ಬೀಳುವ ಭೀತಿ ಯಲ್ಲಿತ್ತು. ಅಪಾಯದ ಮುನ್ಸೂಚನೆ ಹಿನ್ನೆಲೆಯಲ್ಲಿ ಗ್ರಾಪಂ ವತಿಯಿಂದ ಸಾರ್ವಜನಿಕರ ಸಂಚಾರ ನಿಷೇಧಿಸಿ ಬ್ಯಾನರ್ ಅಳವಡಿಸಲಾಗಿತ್ತು. ಇದರಿಂದ ಈ ಭಾಗದ ಸುಮಾರು 18 ಕುಟುಂಬಗಳಿಗೆ ಹಾಗೂ ನದಿಯ ಆಚೆಗಿರುವ ಕೃಷಿ ಗದ್ದೆ, ತೋಟಗಳಿಗೆ ತೆರಳಲು ಇದ್ದ ಏಕೈಕ ಸಂಪರ್ಕ ಮಾರ್ಗ ಕಡಿತಗೊಂಡು ಗ್ರಾಮಸ್ಥರು ನಿತ್ಯ ಸಂಕಷ್ಟ ಅನುಭವಿಸುವಂತಾಗಿತ್ತು.

ಸ್ಥಳೀಯರ ಈ ಗಂಭೀರ ಸಮಸ್ಯೆಯನ್ನು ಮನಗಂಡ ದಿನೇಶ್ ಹೆಗ್ಡೆ ಅವರು, ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಸಚಿವರು ಸಾರ್ವಜನಿಕ ಹಿತದೃಷ್ಟಿಯಿಂದ ತಕ್ಷಣವೇ ಸ್ಪಂದಿಸಿ ಕಾಮಗಾರಿಗೆ ಹಸಿರು ನಿಶಾನೆ ತೋರಿದ್ದಾರೆ. ಗ್ರಾಮಸ್ಥರ ಸಂಚಾರ ಸಮಸ್ಯೆಗೆ ಶಾಶ್ವತ ಮುಕ್ತಿ ದೊರಕಿಸಿಕೊಡಲು ಶ್ರಮಿಸಿದ ದಿನೇಶ್ ಹೆಗ್ಡೆ ಹಾಗೂ ಅನುದಾನ ಒದಗಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಚಮ್ತಾಡಿ-ಅಚ್ಲಾಡಿ ಹಾಗೂ ಬೇಳೂರು ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X