Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಾಜ್ಯ ಕಾಂಗ್ರೆಸ್ ಸಮಾವೇಶಕ್ಕೆ...

ರಾಜ್ಯ ಕಾಂಗ್ರೆಸ್ ಸಮಾವೇಶಕ್ಕೆ ಬೈಂದೂರಿನಿಂದ 5 ಸಾವಿರ ಕಾರ್ಯಕರ್ತರು

ವಾರ್ತಾಭಾರತಿವಾರ್ತಾಭಾರತಿ14 Feb 2024 10:12 PM IST
share
ರಾಜ್ಯ ಕಾಂಗ್ರೆಸ್ ಸಮಾವೇಶಕ್ಕೆ ಬೈಂದೂರಿನಿಂದ 5 ಸಾವಿರ ಕಾರ್ಯಕರ್ತರು

ಕುಂದಾಪುರ: ಫೆ.17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯ ಲಿದ್ದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವ ಕುಮಾರ್ ಭಾಗವಹಿಸಲಿದ್ದಾರೆ. ಖರ್ಗೆಯವರು ಎಐಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಕರಾವಳಿ ಜಿಲ್ಲೆಗೆ ಆಗಮಿಸುತ್ತಿದ್ದಾರೆ ಎಂದು ಬೈಂದೂರಿನ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ತಿಳಿಸಿದ್ದಾರೆ.

ಬುಧವಾರ ಕುಂದಾಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕಾರ್ಯಕ್ರಮಕ್ಕೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ 5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಲಿದ್ದಾರೆ. ರಾಜ್ಯ ಸರ್ಕಾರದ ಯಶಸ್ವಿ ಐದು ಗ್ಯಾರಂಟಿಗಳ ಸ್ತಬ್ದಚಿತ್ರವನ್ನು ಒಳಗೊಂಡ ಬೈಂದೂರು ಕ್ಷೇತ್ರ ಕಾಂಗ್ರೆಸ್ ಕಾರ್ಯಕರ್ತರ ರ್ಯಾಲಿ ಮಂಗಳೂರಿಗೆ ಸಾಗಿಹೋಗಲಿದೆ ಎಂದರು.

ಹೆಜಮಾಡಿಯಿಂದ ಜಿಲ್ಲೆಯ ಎಲ್ಲಾ ಕ್ಷೇತ್ರಗಳ ರ್ಯಾಲಿ ಕಾರ್ಯಕ್ರಮ ಸ್ಥಳಕ್ಕೆ ಸಾಗಲಿದೆ. ಇದು ಗ್ಯಾರಂಟಿ ಕಾರ್ಯಕ್ರಮ ಅನುಷ್ಟಾನಗೊಂಡ ಬಳಿಕ ನಡೆಯುತ್ತಿರುವ ಮೊತ್ತ ಮೊದಲ ಕಾರ್ಯಕ್ರಮ ಎಂದು ಗೋಪಾಲ ಪೂಜಾರಿ ನುಡಿದರು.

ಕಾಂಗ್ರೆಸ್ ಪಕ್ಷದ ಸಂಘಟನೆಯ ಕೆಲಸ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆಯುತ್ತಿದೆ. ರಾಜ್ಯಾದ್ಯಂತ ಪಕ್ಷವನ್ನು ಪುನರಚನೆ ಮಾಡಿ, ಹೊಸ ಪದಾಧಿಕಾರಿಗಳ ನೇಮಕ ಮಾಡುವ ಕಾರ್ಯ ಆಗಲಿದೆ ಎಂದವರು ವಿವರಿಸಿದರು.

ಕಾಂಗ್ರೆಸ್ ಎಂದಿಗೂ ಹಿಂದುತ್ವದ ಹೆಸರಲ್ಲಿ ರಾಜಕೀಯ ಮಾಡಿಲ್ಲ. ಧರ್ಮಗಳ ನಡುವೆ ಸಂಘರ್ಷವನ್ನುಂಟು ಮಾಡುವ ಕೆಲಸ ಮಾಡಿಲ್ಲ ಎಂದು ಹೇಳಿದ ಅವರು, ಮಾಜಿ ಶಾಸಕ ಸುಕುಮಾರ ಶೆಟ್ಟಿ ಅವರು ಕಾಂಗ್ರೆಸಿಗೆ ಸೇರ್ಪಡೆಯಾಗಲು ನಮ್ಮ ಆಕ್ಷೇಪ ಮಾಡಿಲ್ಲ. ಕಾಂಗ್ರೆಸ್ ಪಕ್ಷ ಸಿದ್ದಾಂತ ಒಪ್ಪಿ ಬರುವವರಿಗೆ ಸ್ವಾಗತವಿದೆ, ನಾನು ಹಸ್ತಕ್ಷೇಪ ಮಾಡುವುದಿಲ್ಲ ಎಂದರು.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆಯ ಬಗ್ಗೆ ಬಿಜೆಪಿ ಅಡ್ಡಿ ಪಡಿಸಿ ನ್ಯಾಯಾಲಯದ ಮೆಟ್ಟಿಲೇರಿದೆ. ಆಯಾಯ ಸರಕಾರಗಳು ವ್ಯವಸ್ಥಾಪನ ಸಮಿತಿ ರಚನೆ ಮಾಡುತ್ತವೆ. ಆದರೆ ಬಿಜೆಪಿಗರು ಅಧಿಕಾರ ದಾಹದಿಂದ ಅದಕ್ಕೆ ಅಡ್ಡಿ ಪಡಿಸುತ್ತಿದ್ದಾರೆ ಎಂದು ದೂರಿದರು.

ಕ್ಷೇತ್ರದಲ್ಲಿ ಈ ಹಿಂದೆ ಲಕ್ಷ್ಮೀನಾರಾಯಣ, ಸುಕುಮಾರ ಶೆಟ್ಟರು ಶಾಸಕರಾಗಿ ದ್ದಾಗಲೂ ಕೂಡಾ ನಾನು ಅಭಿವೃದ್ಧಿಗೆ ಅಡ್ಡಿ ಪಡಿಸಿಲ್ಲ. ಅಭಿವೃದ್ಧಿ ಕೆಲಸಗಳಿಗೆ ನಾನೆಂದೂ ಅಡ್ಡಿ ಪಡಿಸುವುದಿಲ್ಲ. ಸಂಬಂಧಪಟ್ಟ ಅಧಿಕಾರಿಗಳು, ಸಚಿವರನ್ನು ಸಂಪರ್ಕಿಸಿ ಅನುದಾನ ತರುವುದು ಶಾಸಕರ ಜವಾಬ್ದಾರಿ ಎಂದು ಹೇಳಿದರು.

ಬಿಜೆಪಿಗರು ಸಹ ಗ್ಯಾರಂಟಿಯ ಹಿಂದೆ ಹೋಗಿದ್ದಾರೆ. ಅವರು ಕೂಡಾ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X