ಮಣಿಪಾಲ: ಜೂನ್ 5ರಂದು ವಿಶ್ವ ಪರಿಸರ ದಿನಾಚರಣೆ

ಉಡುಪಿ, ಜೂ.4: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಸಭೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಕೈಗಾರಿಕೆಗಳು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಜೂನ್ 5ರ ಗುರುವಾರ ಬೆಳಗ್ಗೆ 10:30ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.
ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಕಿರಣ್ ಎಸ್ ಗಂಗಣ್ಣವರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಅಶೋಕ್ ಕಾಮತ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ ಶೆಟ್ಟಿ ಮತ್ತಿತರರು ಭಾಗವಹಿಸಲಿದ್ದಾರೆ.
ಮಣಿಪಾಲ ಎಂಐಟಿ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಡಾ.ಬಾಲಕೃಷ್ಣ ಮದ್ದೋಡಿ ಪರಿಸರ ದಿನಾಚರಣೆ ಸಂಬಂಧ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಮಣಿಪಾಲ ಎಂಜೆಸಿ ಕಾಲೇಜು ಮೈದಾನದಿಂದ ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದವರೆಗೆ ನಡೆಯುವ ಪರಿಸರ ಜಾಥಾಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್ ಬೆಳಗ್ಗೆ 8:30ಕ್ಕೆ ಚಾಲನೆ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.







