Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿಯಲ್ಲಿ ವಿಶ್ವ ದೇವಾಡಿಗ ಮಹಾ...

ಉಡುಪಿಯಲ್ಲಿ ವಿಶ್ವ ದೇವಾಡಿಗ ಮಹಾ ಅಧಿವೇಶನ: ಜು.5ರಂದು ಅಧಿವೇಶನ ಕಾರ್ಯಾಲಯ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ4 July 2026 9:20 PM IST
share
ಉಡುಪಿಯಲ್ಲಿ ವಿಶ್ವ ದೇವಾಡಿಗ ಮಹಾ ಅಧಿವೇಶನ: ಜು.5ರಂದು ಅಧಿವೇಶನ ಕಾರ್ಯಾಲಯ ಉದ್ಘಾಟನೆ

ಉಡುಪಿ, ಜು.4: ಉಡುಪಿ ಜಿಲ್ಲಾ ದೇವಾಡಿಗ ಮಹಾಮಂಡಲದ ವತಿಯಿಂದ ಮುಂದಿನ ಡಿಸೆಂಬರ್ ತಿಂಗಳ 12ರಂದು ಚಿಟ್ಪಾಡಿಯ ಬಯಲು ರಂಗಮಂದಿರದಲ್ಲಿ ವಿಶ್ವ ದೇವಾಡಿಗ ಮಹಾ ಅಧಿವೇಶವನ್ನು ಆಯೋಜಿಸಲಾಗಿದೆ ಎಂದು ವಿಶ್ವ ದೇವಾಡಿಗ ಮಹಾಮಂಡಳದ ಅಧ್ಯಕ್ಷ ಧರ್ಮಪಾಲ ಯು.ದೇವಾಡಿಗ ತಿಳಿಸಿದ್ದಾರೆ.

ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೇವಾಡಿಗ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ಜಾರಿಗೊಳಿಸುವಂತೆ ಸರಕಾರವನ್ನು ಒತ್ತಾಯಿಸುವ ಉದ್ದೇಶದಿಂದ ಈ ಅಧಿವೇಶನ ನಡೆಯಲಿದೆ ಎಂದು ಅವರು ಹೇಳಿದರು.

ಮಹಾಧಿವೇಶನದ ಪೂರ್ವಭಾವಿ ಸಿದ್ಧತೆಗಳಿಗಾಗಿ ನಾಳೆ ಜು.5ರಂದು ರವಿವಾರ ಬೆಳಗ್ಗೆ 9 ಗಂಟೆಗೆ ಅಧಿವೇಶನದ ಕಾರ್ಯಾಲಯವನ್ನು ಚಿಟ್ಪಾಡಿ ಯಲ್ಲಿರುವ ದೇವಾಡಿಗ ಸೇವಾ ಸಂಘ ಇಲ್ಲಿ ಉದ್ಘಾಟಿಸಲಾಗುತ್ತಿದೆ ಎಂದೂ ಅವರು ಹೇಳಿದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಹಾಗೂ ಹೊರರಾಜ್ಯ, ದೇಶಗಳಿಂದ ಸುಮಾರು 20ರಿಂದ 25 ಸಾವಿರಕ್ಕೂ ಅಧಿಕ ಮಂದಿ ದೇವಾಡಿಗ ಸಮಾಜದವರು ಈ ಅಧಿವೇಶನದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಅವರು ತಿಳಿಸಿದರು.

ಕರ್ನಾಟಕ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆ ಗಳಲ್ಲದೇ ಕೇರಳದ ಕಾಸರಗೋಡು ಹಾಗೂ ಇತರ ಜಿಲ್ಲೆಗಳಲ್ಲಿ ಶತಮಾನಗಳಿಂದ ನೆಲೆಸಿರುವ ಹಿಂದುಳಿದ ಸಮಾಜ ನಮ್ಮದಾಗಿದೆ ಎಂದವರು ಹೇಳಿದರು.

ದೇವಾಡಿಗರು ವೃತ್ತಿಯಲ್ಲಿ ಕೃಷಿ ಕಾರ್ಮಿಕರಾಗಿದ್ದು, ದೇವಸ್ಥಾನ, ಧಾರ್ಮಿಕ ಕೇಂದ್ರಗಳ ಬಳಿ ನೆಲೆಸಿ ದೇವಸ್ಥಾನ ಗಳಲ್ಲಿ ವಾದ್ಯ, ವಾಲಗ ಹಾಗೂ ಸಂಗೀತ ಸೇವೆಯೊಂದಿಗೆ ಶುಚಿತ್ವದ ಸೇವೆಯನ್ನು ನಡೆಸುವ ಸಮುದಾಯ ವಾಗಿದೆ. ದೇವಾಡಿಗ ಸಮಾಜದಲ್ಲಿ ಸೇರಿಗಾರ, ಮೊಯ್ಲಿ, ದೇವಾಡಿಗ ಹಾಗೂ ಶೇರಿಗಾರ ಪ್ರಮುಖ ಉಪನಾಮ ಗಳಿದ್ದು, ಸರಕಾರದ ಅಧಿಕೃತ ಅಂಕಿಅಂಶಗಳಂತೆ 5 ಲಕ್ಷ ಜನಸಂಖ್ಯೆ ಇದ್ದರೂ, ನಮ್ಮ ಅಂದಾಜಿನಂತೆ ಸುಮಾರು 8 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿದೆ ಎಂದು ಧರ್ಮಪಾಲ ತಿಳಿಸಿದರು.

ಮಹಾಧಿವೇಶನದಲ್ಲಿ ದೇವಾಡಿಗ ಸಮಾಜದ ವಿವಿಧ ಬೇಡಿಕೆಗಳ ಕುರಿತು ಚರ್ಚೆ ನಡೆಸಲಾಗುವುದು. ಮುಖ್ಯವಾಗಿ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮದ ಸ್ಥಾಪನೆ, ರಾಜ್ಯ ಬಜೆಟ್‌ನಲ್ಲಿ ಸಮುದಾಯಕ್ಕೆ ಪ್ರತ್ಯೇಕ ವಿಶೇಷ ಅನು ದಾನ ಮೀಸಲಿಡುವ ಜೊತೆಗೆ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಯೋಜನೆಗಳನ್ನು ಜಾರಿಗೊಳಿಸು ವಂತೆ ಮನವಿ ಸಲ್ಲಿಸಲಾಗುವುದು ಎಂದರು.

2017-18ರಲ್ಲಿ ದೇವಾಡಿಗರ ಧಾರ್ಮಿಕ ಕೇಂದ್ರವೆಂದು ಗುರುತಿಸಲಾಗುವ ಶ್ರೀ ಏಕನಾಥೇಶ್ವರಿ ದೇವಸ್ಥಾನವನ್ನು ಬಾರಕೂರಿನಲ್ಲಿ ಪ್ರತಿಷ್ಠಾಪನೆ ಮಾಡಲಾಗಿದೆ. ದೇವಾಡಿಗ ಸಮಾಜದ ಬಲವರ್ಧನೆಗಾಗಿ 2023ರಲ್ಲಿ ವಿಶ್ವ ದೇವಾ ಡಿಗ ಮಹಾಮಂಡಳ ಸ್ಥಾಪನೆಯಾಯಿತು. ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಎಂ.ವೀರಪ್ಪ ಮೊಯ್ಲಿ ಅವರು ನಮ್ಮ ಸಮಾಜದ ಪ್ರಮುಖ ರಾಜಕೀಯ ಧುರೀಣರಾಗಿದ್ದಾರೆ ಎಂದರು.

ಈ ಬಾರಿಯ ಮಹಾಧಿವೇಶನದ ಮೂಲಕ ದೇವಾಡಿಗ ಸಮಾಜದ ನ್ಯಾಯಸಮ್ಮತ ಬೇಡಿಕೆಗಳನ್ನು ಮತ್ತೊಮ್ಮೆ ಸರಕಾರದ ಗಮನಕ್ಕೆ ತರಲು ಪ್ರಯತ್ನಿಸಲಾಗುವುದು ಎಂದ ಅವರು, ಮಹಾಧಿವೇಶಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಆಹ್ವಾನಿಸಲಾಗುವುದು. ಅಲ್ಲದೇ ರಾಜ್ಯ ಹಾಗೂ ಜಿಲ್ಲೆಯ ಪ್ರಮುಖ ರಾಜಕೀಯ ಧುರೀಣರು ಸಮಾವೇಶದಲ್ಲಿ ಬಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಟಿಯಲ್ಲಿ ವಿಶ್ವ ದೇವಾಡಿಗ ಮಹಾಮಂಡಳದ ಗೌರವ ಪ್ರಧಾನ ಕಾರ್ಯದರ್ಶಿ ಹಿರಿಯಡ್ಕ ಮೋಹನದಾಸ, ಪ್ರಧಾನ ಕಾರ್ಯದರ್ಶಿ ಗಣೇಶ ದೇವಾಡಿಗ, ಸಂಘಟನಾ ಕಾರ್ಯದರ್ಶಿ ಜನಾರ್ಧನ ಪಡುಪಣಂಬೂರು, ಜೊತೆ ಕಾರ್ಯದರ್ಶಿ ಯಾದವ ದೇವಾಡಿಗ, ಕೋಶಾಧಿಕಾರಿ ಸುರೇಶ್ ದೇವಾಡಿಗ, ಮುಂಬೈ ದೇವಾಡಿಗ ಮಹಾ ಮಂಡಳ ಅಧ್ಯಕ್ಷ ರವಿ ಎಸ್. ದೇವಾಡಿಗ, ವಿಶ್ವ ದೇವಾಡಿಗ ಮಹಾಮಂಡಳ ಸಮಿತಿ ಸದಸ್ಯ ಚೆನ್ನಪ್ಪ ಮೊಯಿಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X