Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ನಗರ ವ್ಯಾಪ್ತಿಯ 58 ವಾಣಿಜ್ಯ...

ಉಡುಪಿ ನಗರ ವ್ಯಾಪ್ತಿಯ 58 ವಾಣಿಜ್ಯ ಕಟ್ಟಡಗಳ ಎದುರೇ ರಸ್ತೆ ಮೇಲೆ ವಾಹನಗಳ ಪಾರ್ಕಿಂಗ್: ಡಿಸಿ ವಿದ್ಯಾಕುಮಾರಿ

ವಾರ್ತಾಭಾರತಿವಾರ್ತಾಭಾರತಿ11 Feb 2025 8:34 PM IST
share
ಉಡುಪಿ ನಗರ ವ್ಯಾಪ್ತಿಯ 58 ವಾಣಿಜ್ಯ ಕಟ್ಟಡಗಳ ಎದುರೇ ರಸ್ತೆ ಮೇಲೆ ವಾಹನಗಳ ಪಾರ್ಕಿಂಗ್: ಡಿಸಿ ವಿದ್ಯಾಕುಮಾರಿ

ಉಡುಪಿ, ಫೆ.11: ಉಡುಪಿ ನಗರದ ವ್ಯಾಪ್ತಿಯಲ್ಲಿ 58ಕ್ಕೂ ಅಧಿಕ ವಾಣಿಜ್ಯ ಕಟ್ಟಡಗಳ ಮುಂಭಾಗ ರಸ್ತೆಯ ಮೇಲೆ ಅಂಗಡಿ ಮಾಲಕರು ಹಾಗೂ ಗ್ರಾಹಕರು ತಮ್ಮ ವಾಹನಗಳ ಪಾರ್ಕಿಂಗ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ನಗರಸಭೆಯಿಂದ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ಪಡೆಯುವ ಸಂದರ್ಭದಲ್ಲಿ ನಿಯಮಾನುಸಾರ ಪಾಲಿಸಬೇಕಾದ ಪಾಕಿರ್ಂಗ್ ನಿಯಮ ಗಳನ್ನು ಪಾಲಿಸದೇ ನಿರ್ಮಾಣ ಮಾಡುವುದು ಕಂಡು ಬಂದಿದೆ. ಈ ಕಟ್ಟಡ ಗಳ ಮಾಲಕರಿಗೆ ನೋಟೀಸ್ ನೀಡಿ ಕಟ್ಟಡದಲ್ಲಿ ಪಾರ್ಕಿಂಗ್ ವ್ಯವಸ್ಥೆಗೆ ಅನುವು ಮಾಡಿಕೊಡಬೇಕು ಎಂದು ಅವರು ನಗರಸಭೆ ಅಧಿಕಾರಿ ಗಳಿಗೆ ಸೂಚಿಸಿದರು.

ಉಡುಪಿ ನಗರಸಭಾ ವ್ಯಾಪ್ತಿಯ ಮುಖ್ಯ ರಸ್ತೆಗಳಲ್ಲಿ ವಾಹನ ದಟ್ಟಣೆ ದಿನೇ ದಿನೇ ಹೆಚ್ಚಿ, ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಸುಗಮ ಸಂಚಾರಕ್ಕೆ ಅಗತ್ಯವಿರುವ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ವಾಣಿಜ್ಯ ಕಟ್ಟಡಗಳಲ್ಲಿ ಪಾರ್ಕಿಂಗ್‌ಗೆ ವ್ಯವಸ್ಥೆ ಇಲ್ಲದೆ ಇರುವುದು, ಅನಧಿಕೃತವಾಗಿ ರಚನೆಗೊಂಡಿರುವ ಗೂಡಂಗಡಿ ಗಳು, ತಳ್ಳುವ ಗಾಡಿಗಳು ರಸ್ತೆಯಲ್ಲಿಯೇ ವ್ಯಾಪಾರ ಕೈಗೊಳ್ಳುವುದು ಸೇರಿದಂತೆ ವಿವಿಧ ಕಾರಣಗಳಿಂದಾಗಿ ನಗರದೊಳಗೆ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಆಗುತ್ತಿದೆ. ಈ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದವರು ತಿಳಿಸಿದರು.

ನಗರದ ಸರ್ವಿಸ್ ಬಸ್ ನಿಲ್ದಾಣದ ಸುತ್ತಮುತ್ತ, ಬೋರ್ಡ್ ಹೈಸ್ಕೂಲ್‌ನ ಮುಂಭಾಗ ಗೂಡಂಗಡಿ ನಿರ್ಮಾಣದಿಂದ ಹಾಗೂ ತಳ್ಳುವ ಗಾಡಿಗಳಲ್ಲಿ ಹಣ್ಣು ಹಂಪಲು ಮಾರಾಟ, ಫಾಸ್ಟ್‌ಫುಡ್ ವಾಹನಗಳಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಇವುಗಳನ್ನು ತೆರವುಗೊಳಿಸಲು ಕ್ರಮ ವಹಿಸುವಂತೆ ನಗರಸಭಾ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಗುರುತಿಸಿರುವ ಕಪ್ಪು ಚುಕ್ಕೆ ಪ್ರದೇಶಗಳಲ್ಲಿ ತಾತ್ಕಾಲಿಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಪ್ರದೇಶಗಳಲ್ಲಿ ಶಾಶ್ವತ ಸುರಕ್ಷತಾ ನಿರ್ವಹಣಾ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊ ಳಿಸಬೇಕು ಎಂದ ಡಾ.ವಿದ್ಯಾಕುಮಾರಿ, ರಸ್ತೆ ಪಕ್ಕದಲ್ಲಿರುವ ಶಾಲೆಗಳ ಮುಂಭಾಗದಲ್ಲಿ ಸೂಚನಾ ಫಲಕಗಳನ್ನು ಹಾಗೂ ಝೀಬ್ರಾ ಪಟ್ಟಿ ಸಮೇತ ಹಂಪ್‌ಗಳನ್ನು ವೈಜ್ಞಾನಿಕ ರೀತಿಯಲ್ಲಿ ಅಳವಡಿಸಬೇಕು ಎಂದು ನಿರ್ದೇಶನ ನೀಡಿದರು.

2023 ಹಾಗೂ 2024ನೇ ಸಾಲಿನಲ್ಲಿ ಹಿಟ್ ಆ್ಯಂಡ್ ರನ್ ಪ್ರಕರಣಗಳಲ್ಲಿ ‘ಸಿ’ ಅಂತಿಮ ವರದಿ ಸಲ್ಲಿಸಲಾದ 20 ಪ್ರಕರಣ ಗಳಲ್ಲಿ ಗಾಯಗೊಂಡವರಿಗೆ ಹಾಗೂ ಮೃತಪಟ್ಟ ಕುಟುಂಬಗಳ ಅವಲಂಬಿತ ಸದಸ್ಯರುಗಳಿಗೆ ಸೊಲೋಟಿಯಂ ಯೋಜನೆ ಯಡಿ ಪರಿಹಾರ ನೀಡಲು ಜನರಲ್ ಇನ್ಸೂರೆನ್ಸ್ ಕಂಪೆನಿಗೆ ಸೂಚಿಸಲಾಗಿದ್ದು, ಈವರೆಗೆ 13 ಪ್ರಕರಣಗಳಲ್ಲಿ ಪರಿಹಾರ ವನ್ನು ಮಂಜೂರು ಮಾಡಿಲ್ಲ ಎಂದ ಜಿಲ್ಲಾಧಿಕಾರಿ, ಕೂಡಲೇ ನಿಯಮಾನುಸಾರ ಪರಿಹಾರ ಮೊತ್ತ ಮಂಜೂರು ಮಾಡು ವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಕಾರ್ಯಪಾಲಕ ಅಭಿಯಂತರ ಕಿರಣ್ ಎಸ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ಎನ್‌ಹೆಚ್‌ನ ಎ.ಐ ಅನಿರುದ್ದ್ ಕಾಮತ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ. ಉಪಸ್ಥಿತರಿದ್ದರು.

59 ಮಂದಿಯ ಡಿಎಲ್ ರದ್ದು

ಪೊಲೀಸ್ ಇಲಾಖೆಯಿಂದ ವಿವಿಧ ಮಾರಾಣಾಂತಿಕ ರಸ್ತೆ ಅಪಘಾತ ಮಾಡಿದ 82 ಆರೋಪಿಗಳ ಡ್ರೈವಿಂಗ್ ಲೈಸನ್ಸ್‌ಅನ್ನು ಅಮಾನತು ಮಾಡಲು ಶಿಫಾರಸ್ಸು ಮಾಡಲಾಗಿದ್ದು, ಈಗಾಗಲೇ 59 ಜನರ ಲೈಸನ್ಸ್ ಅನ್ನು ರದ್ದು ಮಾಡಲಾಗಿದೆ. ಉಳಿದ 23 ಮಂದಿಯ ಡ್ರೈವಿಂಗ್ ಲೈಸನ್ಸ್‌ನ್ನು ಒಂದು ವಾರದ ಒಳಗೆ ರದ್ದು ಪಡಿಸಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X