Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: 6 ಸ್ಪೀಡ್ ರ್ಯಾಡರ್ ಕ್ಯಾಮೆರಾಗಳ...

ಉಡುಪಿ: 6 ಸ್ಪೀಡ್ ರ್ಯಾಡರ್ ಕ್ಯಾಮೆರಾಗಳ ಕಾರ್ಯಾಚರಣೆ

ವಾರ್ತಾಭಾರತಿವಾರ್ತಾಭಾರತಿ26 May 2026 7:44 PM IST
share
ಉಡುಪಿ: 6 ಸ್ಪೀಡ್ ರ್ಯಾಡರ್ ಕ್ಯಾಮೆರಾಗಳ ಕಾರ್ಯಾಚರಣೆ
ವಾರದಲ್ಲಿ 46,753 ಪ್ರಕರಣಗಳು ಪತ್ತೆ: 235 ಮಂದಿಗೆ ನೋಟೀಸ್

ಉಡುಪಿ, ಮೇ 26: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಜಿಲ್ಲೆಯ ಆರು ಕಡೆಗಳಲ್ಲಿ ಸ್ಥಾಪಿಸಿರುವ ಸ್ಪೀಡ್ ರ್ಯಾಡರ್ ಕ್ಯಾಮೆರಾಗಳು ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳ ಬಗ್ಗೆ ಕಣ್ಗಾವಲು ಇರಿಸಿದ್ದು, ಕಳೆದ ಒಂದು ವಾರದಲ್ಲಿ ನಿಯಮ ಉಲ್ಲಂಘಿಸಿದ ಒಟ್ಟು 46753 ವಾಹನಗಳನ್ನು ಪತ್ತೆ ಹಚ್ಚಿವೆ. ಈ ಸಂಬಂಧ ಈವರೆಗೆ 235 ಮಂದಿಗೆ ಪೊಲೀಸರು ನೋಟೀಸ್ ಜಾರಿ ಮಾಡಿದ್ದಾರೆ.

ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಉಚ್ಚಿಲ, ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ದಂಡತೀರ್ಥ, ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ತೆಕ್ಕಟ್ಟೆ, ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತ್ರಾಸಿ, ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೆರ್ಗಾಲ್ ಮತ್ತು ಪಡುಬಿದ್ರೆ -ಬೆಳ್ಮಣ್ ರಾಜ್ಯ ಹೆದ್ದಾರಿಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದೂಪದಕಟ್ಟೆಯಲ್ಲಿ ಒಟ್ಟು ಆರು ಅತ್ಯಾಧುನಿಕ ಸ್ಪೀಡ್ ರ್ಯಾಡರ್ ಕ್ಯಾಮೆರಾ(ಅಟೋಮೆಟಿಕ್ ನಂಬರ್ ಪ್ಲೇಟ್ ರೀಡರ್)ಗಳನ್ನು ಆಳವಡಿಸಲಾಗಿದೆ.

ಈ ಕ್ಯಾಮೆರಾಗಳನ್ನು ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯ ನಿಯಂತ್ರಣ ಕೊಠಡಿಯಲ್ಲಿ ಯಾವ ರೀತಿಯಾಗಿ ಮಾನಿಟರ್ ಮಾಡಲಾಗುತ್ತದೆ ಎಂಬುದರ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಮಾರ್ಗ ದರ್ಶನದಲ್ಲಿ ಕಂಟ್ರೋಲ್ ರೂಂ ಎಸ್ಸೈ ಅಜ್ಮಲ್ ಇಬ್ರಾಹಿಂ ಮಂಗಳವಾರ ಮಾಧ್ಯಮದವರಿಗೆ ಮಾಹಿತಿ ನೀಡಿದರು.

ಅತೀವೇಗದ ಚಾಲನೆ ಅಧಿಕ

ಮೇ 21ರಿಂದ ಕಾರ್ಯಾರಂಭಗೊಂಡ ಈ ಆರು ಕ್ಯಾಮೆರಾಗಳು ಆಳವಡಿಸಿರುವ ಸ್ಥಳದಲ್ಲಿ ಕಳೆದ ಏಳು ದಿನಗಳಲ್ಲಿ ಒಟ್ಟು 3,99,319 ವಾಹನ ಗಳು ಸಂಚರಿಸಿದ್ದು, ಇದರಲ್ಲಿ 46753 ವಾಹನಗಳು ನಿಯಮಗಳನ್ನು ಉಲ್ಲಂಘಿಸಿರು ವುದು ಕಂಡುಬಂದಿದೆ. ಒಟ್ಟು 29484 ದ್ವಿಚಕ್ರ/ತ್ರಿಚಕ್ರ/ಲಘು ವಾಹನಗಳು ಮತ್ತು 2,279 ಘನ ವಾಹನಗಳು ಅತೀವೇಗದ ಚಾಲನೆ, 12184 ಸೀಟ್ ಬೆಲ್ಟ್ ಧರಿಸದಿರುವುದು, 11,396 ಹೆಲ್ಮೆಟ್ ಧರಿಸದೆ ವಾಹನ ಚಾಲನೆ, 2,677 ವಿರುದ್ಧ ದಿಕ್ಕಿನಲ್ಲಿ ಚಾಲನೆ, 2,393 ಟ್ರಿಪಲ್ ರೈಡಿಂಗ್ ಪ್ರಕರಣಗಳು ವರದಿಯಾಗಿವೆ.

ಕಳೆದ ಒಂದು ವಾರದ ಅವಧಿಯಲ್ಲಿ ಬೈಂದೂರುನಲ್ಲಿ ಅಳವಡಿಸಿರುವ ರ್ಯಾಡರ್ ಕ್ಯಾಮೆರಾದಿಂದ 7713, ಗಂಗೊಳ್ಳಿ- 5206, ಕೋಟ- 7857, ಕಾಪು- 8005, ಪಡುಬಿದ್ರೆ- 13681, ಕಾರ್ಕಳ- 9696 ನಿಯಮ ಉಲ್ಲಂಘನೆ ಮಾಡಿರುವ ಪ್ರಕರಣಗಳು ಕಂಡುಬಂದಿವೆ. ಇದರಲ್ಲಿ ಅತೀ ಹೆಚ್ಚು ಅತೀವೇಗದ ಚಾಲನೆ ಪ್ರಕರಣ ಗಳಿದ್ದರೆ, ಎರಡನೇ ಸ್ಥಾನದಲ್ಲಿ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಿರುವುದು ವರದಿಯಾಗಿದೆ.

ಪ್ರತಿದಿನ 50-100 ಪ್ರಕರಣ

‘ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗದ ಮಿತಿಯನ್ನು ಗಂಟೆಗೆ 80ಕಿ.ಮೀ. ಹಾಗೂ ರಾಜ್ಯ ಹೆದ್ದಾರಿಯಲ್ಲಿ ಗಂಟೆಗೆ 60ಕಿ.ಮೀ. ನಿಗದಿ ಪಡಿಸಲಾಗಿದೆ. ಈ ರ್ಯಾಡರ್ ಕ್ಯಾಮೆರಾಗಳ ಮೂಲಕ ಪ್ರತಿದಿನ ನೂರಾರು ನಿಯಮ ಉಲ್ಲಂಘನೆ ಪ್ರಕರಣಗಳು ವರದಿಯಾಗುತ್ತಿದ್ದು, ಪರಿಶೀಲನೆ ನಡೆಸಿ ದಿನಕ್ಕೆ 50-100 ಪ್ರಕರಣಗಳಿಗೆ ನೋಟೀಸ್ ಜಾರಿ ಮಾಡಲಾಗುತ್ತಿದೆ’ ಎಂದು ಎಸ್ಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ.

ಅತೀ ವೇಗದ ಚಾಲನೆಗೆ ದ್ವಿಚಕ್ರ ವಾಹನಗಳಿಗೆ 1000ರೂ., ಲಘು ಮತ್ತು ಘನವಾಹನಗಳಿಗೆ 2000ರೂ., ಹೆಲ್ಮೆಟ್ ಧರಿಸದಿದ್ದರೆ 500ರೂ., ಟ್ರಿಪಲ್ ರೈಡರ್‌ಗೆ 500ರೂ., ಬೆಲ್ಟ್ ಧರಿಸದಿದ್ದರೆ 500ರೂ., ಮೊಬೈಲ್ ಬಳಕೆಗೆ ಲಘು ವಾಹನಗಳಿಗೆ 3000ರೂ., ಘನ ವಾಹನಗಳಿಗೆ 5000ರೂ. ಮತ್ತು ದ್ವಿಚಕ್ರ ವಾಹನಗಳಿಗೆ 1000ರೂ. ದಂಡ ವಿಧಿಸಲಾಗುತ್ತದೆ. ದಂಡವನ್ನು ಜಿಲ್ಲೆಯ ಯಾವುದೇ ಪೊಲೀಸ್ ಠಾಣೆಯಲ್ಲೂ ಪಾವತಿಸಬಹು ದಾಗಿದೆ. ಸಂಚಾರ ನಿಯಮ ಉಲ್ಲಂಘಿಸುವ ಹೊರರಾಜ್ಯದ ವಾಹನಗಳಿಗೂ ದಂಡ ವಿಧಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

‘ಈ ಅತ್ಯಾಧುನಿಕ ರ್ಯಾಡರ್ ಕ್ಯಾಮೆರಾಗಳ ಮೂಲಕ ಕಂಟ್ರೋಲ್ ರೂಮಿನಲ್ಲಿ ಕುಳಿತೇ ವಾಹನಗಳ ಚಲನವಲನಗಳ ಬಗ್ಗೆ ನಿಗಾ ಇರಿಸಬಹುದು. ಕೇವಲ ಸಂಚಾರ ನಿಯಮ ಮಾತ್ರವಲ್ಲ ಅಪರಾಧ ಪತ್ತೆ ಹಚ್ಚಲು ಕೂಡ ಈ ಕ್ಯಾಮೆರಾಗಳು ಸಹಕಾರಿಯಾಗುತ್ತದೆ. ರಾತ್ರಿಯಲ್ಲೂ ಈ ಕ್ಯಾಮೆರಾಗಳು ನಿಯಮ ಉಲ್ಲಂಘಿಸುವ ವಾಹನಗಳನ್ನು ಗುರುತಿಸುತ್ತದೆ’

-ಹರಿರಾಂ ಶಂಕರ್, ಎಸ್ಪಿ ಉಡುಪಿ





share
ವಾರ್ತಾಭಾರತಿ
ವಾರ್ತಾಭಾರತಿ
Next Story
X