ಉಡುಪಿ: ಆ. 6ರಂದು ನೇರ ಸಂದರ್ಶನ

ಉಡುಪಿ, ಆ.4: ನಗರದ ಮಣಿಪಾಲ ರಜತಾದ್ರಿ ರಸ್ತೆಯ ವಿದ್ಯಾರತ್ನ ನಗರದ ಡಿ.ಸಿ ಆಫೀಸ್ ಬಳಿಯ ಕಂಟ್ರಿ ಇನ್ ಸೂಟ್ಸ್ ಬೈ ರಾಡಿಸನ್ ಮಣಿಪಾಲ್ ಇಲ್ಲಿ ಆ.6ರಂದು ಬೆಳಗ್ಗೆ 10:30ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.
ಎಸೆಸೆಲ್ಸಿ, ಪಿಯುಸಿ, ಐಟಿಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್‌ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story




