ರಾಷ್ಟ್ರೀಯ ಲೋಕ್ ಅದಾಲತ್: ಒಂದೇ ದಿನದಲ್ಲಿ ಒಟ್ಟು 61,367 ಪ್ರಕರಣ ಇತ್ಯರ್ಥ

ಉಡುಪಿ, ಸೆ.28: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಜಿಲ್ಲೆಯ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರಿನ ವಿವಿಧ ನ್ಯಾಯಾಲಯಗಳಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಒಂದೇ ದಿನ ಒಟ್ಟು 61,367 ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.
ಇವುಗಳಲ್ಲಿ ರಾಜೀಯಾಗಬಲ್ಲ ಚೆಕ್ಕು ಅಮಾನ್ಯ-261 ಪ್ರಕರಣ, ಬ್ಯಾಂಕ್/ಹಣ ವಸೂಲಾತಿ- 79 ಪ್ರಕರಣ, ವೈವಾಹಿಕ 2 ಪ್ರಕರಣಗಳು, ಇತರೇ ಸಿವಿಲ್ 3190 ಪ್ರಕರಣಗಳು, ಎಂ.ಎ.ಸಿ.ಟಿ 47 ಪ್ರಕರಣ, ಕಾರ್ಮಿಕ ವಿವಾದ 1 ಪ್ರಕರಣ, ಹಣಕಾಸು ಸಂಬಂಧಿತ 3 ಪ್ರಕರಣ, ಇತರೇ ಕ್ರಿಮಿನಲ್ 12 ಪ್ರಕರಣ ಹಾಗೂ ವ್ಯಾಜ್ಯ ಪೂರ್ವ 57,772 ಪ್ರಕರಣಗಳು ಸೇರಿದಂತೆ ಒಟ್ಟು 61,367 ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಿ ಒಟ್ಟು 14,45,52,485ರೂ. ಪರಿಹಾರದ ಮೊತ್ತವನ್ನು ಘೋಷಿಸಲಾಯಿತು.
ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಉಡುಪಿ, ಕುಂದಾಪುರ, ಕಾರ್ಕಳ, ಬೈಂದೂರು ಹಾಗೂ ಬ್ರಹ್ಮಾವರ, ಅಭಿಯೋಜನ ಇಲಾಖೆ, ಸರ್ಕಾರಿ ವ್ಯಾಜ್ಯಗಳ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಗಣಿ ಮತ್ತು ಭೂಜ್ಞಾನ ಇಲಾಖೆ, ವಿಮಾ ಕಂಪೆನಿಗಳು, ಬ್ಯಾಂಕ್, ಕಕ್ಷಿಗಾರರು ಹಾಗೂ ಇತರ ಸರ್ಕಾರಿ ಇಲಾಖೆಯ ಸಂಪೂರ್ಣ ಸಹಕಾರದೊಂದಿಗೆ ಲೋಕ್ ಅದಾಲತ್‌ನ್ನು ಯಶಸ್ವಿಯಾಗಿ ನಡೆಸಲಾಯಿತು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಪ್ರಕಟಣೆ ತಿಳಿಸಿದೆ.






