ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ: 68.30ಲಕ್ಷ ರೂ. ವಂಚನೆ

ಉಡುಪಿ: ಷೇರು ಮಾರುಕಟ್ಟೆ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಜಿತ್ ಕುಮಾರ್ ಎಂಬವರಿಗೆ ವಾಟ್ಸಾಪ್ ಗ್ರೂಪ್‌ನಲ್ಲಿ ಷೇರು ಮಾರ್ಕೆಟ್ ನಲ್ಲಿ ಹಣ ಹೂಡಿಕೆ ಮಾಡು ವಂತೆ ಹಾಗೂ ಹೆಚ್ಚಿನ ಲಾಭಂಶ ನೀಡುವುದಾಗಿ ಸಂದೇಶ ಬಂದಿದ್ದು, ಅದರಂತೆ ಅಜಿತ್ ಕುಮಾರ್ ಅಪರಿಚಿತರ ಬ್ಯಾಂಕ್ ಖಾತೆಗಳಿಗೆ ಜೂ.12ರಿಂದ ಜೂ.23ರವರೆಗೆ ಒಟ್ಟು 68,30,000ರೂ. ಹಣವನ್ನು ವರ್ಗಾವಣೆ ಮಾಡಿದ್ದರು.
ಅದರೆ ಅಪರಿಚಿತ ವ್ಯಕ್ತಿಗಳು ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಹಣವನ್ನಾಗಲೀ ಅಥವಾ ಲಾಭಾಂಶನ್ನಾಗಲಿ ನೀಡದೇ ವಂಚನೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
Next Story





