Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ, ಕಾಪುವಿಗೂ ವಿಸ್ತರಿಸಿದ ಮಕ್ಕಳ...

ಕುಂದಾಪುರ, ಕಾಪುವಿಗೂ ವಿಸ್ತರಿಸಿದ ಮಕ್ಕಳ ಯಕ್ಷಗಾನ ಕಿಶೋರ ಯಕ್ಷಗಾನ ಸಂಭ್ರಮದಲ್ಲಿ 69 ಶಾಲೆಗಳ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ25 Nov 2023 9:04 PM IST
share
ಕುಂದಾಪುರ, ಕಾಪುವಿಗೂ ವಿಸ್ತರಿಸಿದ ಮಕ್ಕಳ ಯಕ್ಷಗಾನ ಕಿಶೋರ ಯಕ್ಷಗಾನ ಸಂಭ್ರಮದಲ್ಲಿ 69 ಶಾಲೆಗಳ ಪ್ರದರ್ಶನ

ಉಡುಪಿ, ನ.25: ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ವಿವಿಧ ಸಂಘಸಂಸ್ಥೆ ಹಾಗೂ ಸಂಘಟನೆಗಳ ನೆರವಿನೊಂದಿಗೆ ಆಯೋಜಿಸು ತ್ತಿರುವ ಪ್ರೌಢಶಾಲಾ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನ ‘ಕಿಶೋರ ಯಕ್ಷಗಾನ ಸಂಭ್ರಮ’ ಈ ಬಾರಿ ಕುಂದಾಪುರ ಹಾಗೂ ಕಾಪು ಕ್ಷೇತ್ರಗಳಿಗೂ ವಿಸ್ತರಿಸಿದ್ದು, ಒಟ್ಟು 69 ಶಾಲೆಗಳ ತಂಡಗಳು ಈ ಬಾರಿ ಪ್ರದರ್ಶನ ನೀಡಲಿವೆ ಎಂದು ಟ್ರಸ್ಟ್‌ನ ಕಾರ್ಯದರ್ಶಿ ಮುರಳಿ ಕಡೆಕಾರ್ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2007ರಲ್ಲಿ ಉಡುಪಿ ವಿಧಾನಸಭಾ ವ್ಯಾಪ್ತಿಯ ಉಡುಪಿ ಮತ್ತು ಬ್ರಹ್ಮಾವರ ಪ್ರೌಢ ಶಾಲೆಗಳ ವಿದ್ಯಾರ್ಥಿ ತಂಡಗಳಿಗಾಗಿ ಪ್ರಾರಂಭಗೊಂಡ ಈ ಯಕ್ಷಗಾನ ಪ್ರದರ್ಶನ ತುಂಬಾ ಜನಪ್ರಿಯಗೊಂಡಿದ್ದು, ಇದೀಗ ಜಿಲ್ಲೆಗೆ ವಿಸ್ತರಿಸುತ್ತಿದೆ ಎಂದರು.

ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣದೊಂದಿಗೆ ಪ್ರದರ್ಶನಗಳನ್ನು ಆಯೋಜಿಸಲಾಗುತ್ತಿದೆ. ಈ ಬಾರಿ ಯಕ್ಷ ಶಿಕ್ಷಣವು ಕಾಪು ಮತ್ತು ಕುಂದಾಪುರ ವಿಧಾನಸಭಾ ಕ್ಷೇತ್ರಗಳಿಗೂ ವಿಸ್ತರಿಸಿದೆ. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಕುಂದಾಪುರ ಶಾಸಕ ಕಿರಣ್‌ಕುಮಾರ ಕೊಡ್ಗಿ ಅವರ ಒತ್ತಾಸೆಯಂತೆ ಅಲ್ಲಿನ ಶಾಲೆಗಳಲ್ಲೂ ಯಕ್ಷ ಶಿಕ್ಷಣವನ್ನು ಪ್ರಾರಂಭಿಸಲಾಗಿದೆ ಎಂದರು.

2023ನೇ ಸಾಲಿನ ಕಿಶೋರ ಯಕ್ಷಗಾನ ಸಂಭ್ರಮ ನ.29ರಿಂದ 2024ರ ಜನವರಿ 5ರವರೆಗೆ ನಡೆಯಲಿದೆ. ಬ್ರಹ್ಮಾವರ ಬಂಟರ ಭವನದ ಬಳಿಕ ನ.29ರಿಂದ ಡಿ.6ರವರೆಗೆ, ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಡಿ.7ರಿಂದ 20ರವರೆಗೆ, ಕಾಪು ಶ್ರೀಲಕ್ಷ್ಮೀಜನಾರ್ದನ ದೇವಸ್ಥಾನದ ಬಳಿ ಡಿ.21ರಿಂದ 24ರವರೆಗೆ, ಶಿರ್ವದ ಮಹಿಳಾ ಸೌಧದಲ್ಲಿ ಡಿ.25ರಿಂದ 29ರವರೆಗೆ, ಮಣೂರು ಪಡುಕೆರೆಯ ಸರಕಾರಿ ಸಂಯುಕ್ತ ಪ್ರೌಢ ಶಾಲಾ ವಠಾರದಲ್ಲಿ ಡಿ.30ರಿಂದ ಜ.1ರವರೆಗೆ ಹಾಗೂ ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನ ವಠಾರದಲ್ಲಿ ಜ.3ರಿಂದ 5ರವರೆಗೆ ಯಕ್ಷಗಾನ ಪ್ರದರ್ಶನವಿರುತ್ತದೆ ಎಂದರು.

ಈ ಬಾರಿ ಒಟ್ಟು 31 ಮಂದಿ ಯಕ್ಷಗಾನ ಗುರುಗಳು 69 ಶಾಲೆಗಳಲ್ಲಿ 70 ತಂಡಗಳಿಗೆ ಯಕ್ಷಗಾನ ಕಲಿಸಿದ್ದಾರೆ. ಬಾಲಕಿ ಯರು ಬಾಲಕರಿಗಿಂತ ಅಧಿಕ ಸಂಖ್ಯೆಯಲ್ಲಿದ್ದಾರೆ. ಜಾತಿ,ಮತ, ಲಿಂಗ ಬೇಧವಿಲ್ಲದೇ ಸುಮಾರು 3000 ಮಂದಿ ವಿದ್ಯಾರ್ಥಿಗಳು ಯಕ್ಷ ಶಿಕ್ಷಣ ಪಡೆದು ವೇಷ ಧರಿಸಿ ಪ್ರದರ್ಶನ ನೀಡಲಿದ್ದಾರೆ ಎಂದು ಮುರಲಿ ಕಡೆಕಾರ್ ವಿವರಿಸಿದರು.

ಈ ಅಭಿಯಾನದ ಉದ್ಘಾಟನಾ ಸಮಾರಂಭ ನ.29ರ ಬುಧವಾರ ಸಂಜೆ 6:30ಕ್ಕೆ ನಡೆಯಲಿದೆ. ಮೊದಲ ದಿನವನ್ನು ಹೊರತು ಪಡಿಸಿ ಉಳಿದೆಲ್ಲಾ ದಿನಗಳಂದು ತಲಾ ಒಂದೂವರೆ ಗಂಟೆಗಳ ಎರಡು ಪ್ರದರ್ಶನಗಳು ಇರುತ್ತವೆ. ಕೋಟೇಶ್ವ ರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಿಂದ ಎರಡು ತಂಡಗಳು -ಬಾಲಕ ಹಾಗೂ ಬಾಲಕಿಯರ- ಪ್ರದರ್ಶನ ನೀಡಲಿವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟ್‌ನ ಅಧ್ಯಕ್ಷರಾಗಿರುವ ಶಾಸಕ ಯಶಪಾಲ್ ಸುವರ್ಣ, ಯಕ್ಷಗಾನ ಕಲಾರಂಗದ ಅಧ್ಯಕ್ಷ ಗಂಗಾಧರ ರಾವ್, ಎಸ್.ವಿ. ಭಟ್, ಪ್ರೊ.ನಾರಾಯಣ ಹೆಗಡೆ, ಶೃಂಗೇಶ್ವರ್, ಬಿ.ಜಿ.ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X